![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 13, 2023, 5:09 PM IST
ಹೆಬ್ರಿ: ಪೆಡೂ೯ರಿನ ವೃದ್ಧೆಯೊವ೯ರ ಚಿನ್ನದ ಸರವನ್ನು ದೋಚಿ ಪರಾರಿಯಾದ ಆರೋಪಿ ಉಲ್ಲಾಸ್ ಶೆಟ್ಟಿ ಎಂಬತನ್ನು ಪೊಲೀಸರು ವಶಕ್ಕೆ ಪಡೆದು ಸುಲಿಗೆ ಮಾಡಿದ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಪೆರ್ಡೂರು ಮುತ್ತೂರ್ಮೆ ನಿವಾಸಿ ಗಿರಿಜಾ ಶೆಟ್ಟಿ ಅವರ ಮನೆಯ ಹೊರಗಿನ ಬಟ್ಟೆ ಒಗೆಯುವ ಕಲ್ಲಿನ ಬಳಿ ಪಾತ್ರೆ ತೊಳೆಯುತ್ತಿರುವಾಗ ಅಪರಿಚಿತ ವ್ಯಕ್ತಿ ಗಿರಿಜಾ ಶೆಟ್ಟಿ ರವರ ಮುಖಕ್ಕೆ ಬಟ್ಟೆಯನ್ನು ಮುಸುಕು ಹಾಕಿ ಅವರ ಕುತ್ತಿಗೆಯಲ್ಲಿದ್ದ ಸುಮಾರು 25 ಗ್ರಾಂ ತೂಕದ 88ಸಾವಿರ ರೂ. ಮೌಲ್ಯದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ.
ಆರೋಪಿಯನ್ನು ಬಂಧಿಸಿ ದೋಚಿದ್ದ ಚಿನ್ನವನ್ನುವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯಡಕ ಪೊಲೀಸ್ ಠಾಣಾ ಠಾಣಾಧಿಕಾರಿ ಹಾಗೂ ಸಿಬಂದಿಗಳು ಪ್ರಕರಣ ದಾಖಲಾದ ಎರಡೇ ದಿನಗಳಲ್ಲಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು ಉಡುಪಿ ಜಿಲ್ಲಾ ಎಸ್ .ಪಿ. ಡಾ.ಅರುಣ್ .ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್,ಪಿ.ಕೆ, ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ್.ಪಿ.ಎಂ ನೇತೃತ್ವದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿ ಮಂಜುನಾಥ ಮರಬದ, ಹಿರಿಯಡಕ ಠಾಣಾ ಸಿಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.