ಪರ್ಕಳ: ರಾ.ಹೆ. ಬದಿಯಲ್ಲೇ ಕೊಳಚೆ ನೀರು!

ಬ್ಯಾಂಕ್‌ ವ್ಯವಹಾರಕ್ಕೆ ತೊಂದರೆ ; ಸ್ಥಳೀಯರಿಗೆ ಸಂಕಷ್ಟ

Team Udayavani, Nov 22, 2019, 5:21 AM IST

4609PARKALA-RASTE

ಉಡುಪಿ: ಪರ್ಕಳ ಪೇಟೆಯಲ್ಲಿ ಒಳಚರಂಡಿ ಇಲ್ಲದ ಪರಿಣಾಮ ಕೊಳಚೆ ನೀರು ರಾಷ್ಟ್ರೀಯ ಹೆದ್ದಾರಿ 169ಎಯ ಬದಿಯಿಂದಲೇ ಹರಿಯುತ್ತಿದ್ದು ಪರಿಸರದಲ್ಲಿ ದುರ್ವಾಸನೆ ಹರಡಿದೆ.

ಸಿಂಡಿಕೇಟ್‌ ಬ್ಯಾಂಕಿನ ಎದುರು ಕೊಳಚೆ ನೀರು ಶೇಖರಣೆಯಾಗಿದ್ದು, ಬ್ಯಾಂಕಿನ ಗ್ರಾಹಕರು, ಸಿಬಂದಿ, ಪರಿಸರದ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.
ಈ ಕುರಿತು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿ ಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ವಾಗಿಲ್ಲ; ಸ್ವತ್ಛತೆ ಭಾಷಣಕ್ಕೆ ಮಾತ್ರ ಸೀಮಿತವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಚರಂಡಿ ವ್ಯವಸ್ಥೆ ಇಲ್ಲ!
ಇಲ್ಲಿ ಹಿಂದಿನಿಂದಲೂ ಕೊಳಚೆ ನೀರನ್ನು ನೇರವಾಗಿ ಮಳೆ ನೀರಿನ ಚರಂಡಿಗೆ ಹರಿದು ಬಿಡಲಾಗುತ್ತಿತ್ತು. ಆದರೆ ಚರಂಡಿಯ ಸುತ್ತ ಹುಲ್ಲು, ಪೊದೆಗಳು ಆವರಿಸಿದ್ದರಿಂದ ಕೊಳಚೆ ಯಾರ ಗಮನಕ್ಕೂ ಬರುತ್ತಿರಲಿಲ್ಲ; ತೀವ್ರತರದ ಸಮಸ್ಯೆ ಎನಿಸಿರಲಿಲ್ಲ. ಆದರೆ ಕಳೆದ ವರ್ಷ ರಾ.ಹೆ. 169ಎ ವಿಸ್ತರಣೆ ಸಂದರ್ಭ ಮಳೆ ನೀರಿನ ಚರಂಡಿಯನ್ನು ಅಗೆದು ಪರಿಸರವನ್ನೆಲ್ಲ ಸಮತಟ್ಟು ಮಾಡಲಾಗಿತ್ತು.

ನಗರಸಭೆಯಾಗಲೀ ಪೇಟೆಯ ಹೊಟೇಲ್‌, ಅಂಗಡಿಯವರಾಗಲಿ ತ್ಯಾಜ್ಯ ನೀರಿನ ವಿಲೇವಾರಿಗೆ ಬದಲಿ ವ್ಯವಸ್ಥೆ ಮಾಡಿಕೊಳ್ಳುವ ಗೋಜಿಗೆ ಹೋಗಿಲ್ಲ. ರಾತ್ರಿ ವೇಳೆ ಕೊಳಚೆ ನೀರಿನ ಹರಿವು ಹೆಚ್ಚಿರುತ್ತದೆ. ಹೆದ್ದಾರಿ ಬದಿ ಪಾಚಿಕಟ್ಟಿದೆ. ಹುಳಗಳು ಹುಟ್ಟಿ ಕೊಂಡು ಸಾಂಕ್ರಾಮಿಕ ರೋಗದ ಭೀತಿಯೂ ಇದೆ. ಸಾರ್ವಜನಿಕರು ನಡೆದಾಡುವಾಗ ಮೂಗು ಮುಚ್ಚಿ ಕೊಳ್ಳಬೇಕಿದೆ. ಬ್ಯಾಂಕ್‌ ಗ್ರಾಹಕರಂತೂ ಕೊಳಚೆಯ ಪ್ರವಾಹವನ್ನು ಜಿಗಿದೇ ದಾಟಬೇಕಿದೆ.

ಮಾಲಿನ್ಯಕ್ಕೆ ಕಾರಣ
ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಿಂಡಿಕೇಟ್‌ ಬ್ಯಾಂಕ್‌ಗೆ ತೆರಳಲು ಸಾಧ್ಯವಾಗುತ್ತಿಲ್ಲ. ಕೊಳಚೆ ನೀರು ರಸ್ತೆ ಬದಿಯಲ್ಲೇ ಹರಿಯುತ್ತಿದೆ. ಮಳೆಗಾಲದಲ್ಲಿ ಹರಿಯುವ ನೀರಿನೊಂದಿಗೆ ಕೊಳಚೆ ನೀರೂ ಬೆರತು ಹೋಗುತ್ತಿತ್ತು. ಆದರೆ ಇದೀಗ ಬೇಸಗೆಯಲ್ಲಿ ಕೊಳಚೆ ನೀರು ರಸ್ತೆಯ ಬದಿಯಲ್ಲಿ ನಿಂತು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಗಮನ ಹರಿಸಬೇಕು.
-ಗುರುರಾಜ್‌ ಶೆಟ್ಟಿ,ಪರ್ಕಳ ನಿವಾಸಿ

ಗಮನಕ್ಕೆ ಬಂದಿದೆ
ಪರ್ಕಳ ಪೇಟೆಯಲ್ಲಿ ಕೊಳಚೆ ನೀರನ್ನು ರಸ್ತೆಗೆ ಹರಿ ಬಿಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ನಗರಸಭೆ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
-ಸುಮಿತ್ರಾ ನಾಯಕ್‌, ನಗರಸಭೆ ಪರ್ಕಳ ವಾರ್ಡ್‌ ಸದಸ್ಯೆ,ಉಡುಪಿ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.