ಕಾನೂನು ಕ್ರಮಕ್ಕೆ ಪರ್ಸೀನ್‌ ಮೀನುಗಾರರ ಆಗ್ರಹ


Team Udayavani, Feb 28, 2019, 12:30 AM IST

2702mlp2a.jpg

ಮಲ್ಪೆ: ನಾಡದೋಣಿ ಮೀನುಗಾರಿಕೆ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಂಡು ಕರಾವಳಿಯಾದ್ಯಾಂತ ಅಕ್ರಮವಾಗಿ ಯಾಂತ್ರಿಕೃತ ರೀತಿಯಲ್ಲಿ ಮೀನುಗಾರಿಕೆಯನ್ನು ನಡೆಸುತ್ತಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖೀಲ ಕರ್ನಾಟಕ ಪರ್ಸೀನ್‌ ಮೀನುಗಾರರ ಸಂಘ ಮಲ್ಪೆ ಮೀನುಗಾರಿಕಾ ಉಪನಿರ್ದೇಶಕರ ಕಚೇರಿಗೆ ತೆರಳಿ ಅಧಿಕಾರಿಗಳಲ್ಲಿ ಆಗ್ರಹಿಸಿದೆ.

ಮತ್ಸé ಸಂಪತ್ತನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಾಂಪ್ರದಾಯಿಕ ನಾಡದೋಣಿಯ ಹೆಸರಿನಲ್ಲಿ ಅಕ್ರಮವಾಗಿ ಯಾಂತ್ರಿಕೃತ ಮೀನುಗಾರಿಕೆಯನ್ನು ಮಾಡುತ್ತಿರುವ ಬಗ್ಗೆ ಇದುವರೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು 5 ದಿವಸದೊಳಗೆ ಸ್ಪಷ್ಟ ಮಾಹಿತಿಯನ್ನು ಮೀನುಗಾರಿಕೆ ಇಲಾಖೆ ನೀಡಬೇಕು, ಇಲ್ಲದಿದ್ದಲ್ಲಿ ತಮ್ಮ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಉಪ ನಿರ್ದೇಶಕರಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಜಿಲ್ಲಾಧಿಕಾರಿ ಸಹಿತ ವಿವಿಧ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಅಖೀಲ ಕರ್ನಾಟಕ ಪರ್ಸೀನ್‌ ಮೀನುಗಾರರ ಸಂಘದ ಅಧ್ಯಕ್ಷ ಗುರುದಾಸ್‌ ಬಂಗೇರ ಮಾತನಾಡಿ, ಯಾಂತ್ರಿಕೃತ ಮೀನುಗಾರಿಕೆ ನಾಡದೋಣಿಗಳಲ್ಲಿ ಟ್ರೆಡಿಶನಲ್‌ (ಸಾಂಪ್ರದಾಯಿಕ) ನೆಟ್‌ ಎಂದು ನಮೂದಿತವಾಗಿದೆ. ಯಾವ ಬಲೆ ಎಂದು ಸ್ಪಷ್ಪ ನಮೂದಿಸಿರುವುದಿಲ್ಲ. ಮೋಟಾರೀಕೃತ ದೋಣಿ ಎಂದು ನಮೂದಿಸಿ, ವಿವಿಧ ರೀತಿಯ ಬಲೆಗಳನ್ನು ಉಪಯೋಗಿಸಿ ಯಾಂತ್ರೀಕೃತ ಮೀನುಗಾರಿಕೆ ನಡೆಸಲಾಗುತ್ತಿದೆ. ನಾಡದೋಣಿಗಳಿಗೆ ಡ್ರಮ್‌ವಿಂಚ್‌, 4 ಸಿಲಿಂಡರ್‌ ಎಂಜಿನ್‌, ಜನರೇಟರ್‌, ವಯರ್‌ಲೆಸ್‌, ಫಿಶ್‌ಫೈಂಡರ್‌ ಇಟ್ಟುಕೊಂಡು 25ರಿಂದ 40 ಅಶ್ವಶಕ್ತಿಯ ಎರಡೆರಡು ಎಂಜಿನ್‌ ಬಳಸಿ ಮಳೆಗಾಲದಲ್ಲಿಯೂ ಮೀನುಗಾರಿಕೆ ನಡೆಸಲಾಗುತ್ತದೆ. ಗಿಲ್‌ನೆಟ್‌ ಬಲೆ ಉಪಯೋಗಿಸುವ ಅನುಮತಿ ಪಡೆದು ಟ್ರಾಲ್‌ ಬಲೆಗಳನ್ನು ಉಪಯೋಗಿಸಿ ಬುಲ್‌ಟ್ರಾಲಿಂಗ್‌ ನಡೆಸಲಾಗುತ್ತದೆ ಎಂದವರು ಆರೋಪಿಸಿದ್ದಾರೆ.

18 ಎಂ.ಎಂ. ಬಲೆ
ಜಿಲ್ಲೆಯಲ್ಲಿ 26 ರಿಂಗ್‌ಸೀನ್‌ ದೋಣಿಗಳಿಗೆ (ಮಾಟುಬಲೆ) ಮಾತ್ರ ಮೀನುಗಾರಿಕೆಗೆ ಅನುಮತಿ ಇದೆ. ಆದರೆ 2 ಸಾವಿರಕ್ಕಿಂತಲೂ ಹೆಚ್ಚು ದೋಣಿಗಳು ರಿಂಗ್‌ಸೀನ್‌ ಮಾದರಿಯ ಮೀನುಗಾರಿಕೆಯನ್ನು ವರ್ಷಪೂರ್ತಿ ನಡೆಸುತ್ತಿದ್ದಾರೆ. ಸರಕಾರದ ಆದೇಶದ ಪ್ರಕಾರ 22 ಎಂ.ಎಂ. ಮೇಲ್ಪಟ್ಟ ಗಾತ್ರದ ಬಲೆ ಉಪಯೋಗಿಸಲು ಮಾತ್ರ ಅವಕಾಶವಿದೆ. ಆದರೆ ಇವರು 16ರಿಂದ 18ಎಂ.ಎಂ. ಒಳಗಿನ ಗಾತ್ರದ ಬಲೆಯನ್ನು ಉಪಯೋಗಿಸಿ ಸಣ್ಣ ಗಾತ್ರದ ಮೀನುಗಳನ್ನು ಹಿಡಿದು ಮತ್ಸéಸಂತತಿ ನಾಶಕ್ಕೂ ಕಾರಣವಾಗುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ನಾಡದೋಣಿಗಳಿಗೆ ಸಿಗುವ ಸೀಮೆ ಎಣ್ಣೆಯಲ್ಲಿ ಶೇ. 30ರಷ್ಟು ಮಾತ್ರ ನೈಜ ಮೀನುಗಾರರಿಗೆ ಸಿಗುತ್ತದೆ, ಉಳಿದಂತೆ ಕಾಳಸಂತೆಯಲ್ಲಿ ಮಾರಾಟವಾಗುತ್ತದೆ. ಈ ರೀತಿಯಲ್ಲಿ ಸರಕಾರದ ಬೊಕ್ಕಸಕ್ಕೆ ಉಂಟಾಗುವ ಅರ್ಥಿಕ ನಷ್ಟವನ್ನು ತಪ್ಪಿಸಿ, ಸರಕಾರದ ಯೋಜನೆಗಳು ನೈಜ್ಯ ಮೀನುಗಾರರಿಗೆ ಸಿಗುವಂತಾಗಬೇಕು ಎಂದು ಆಗ್ರಹಿಸಿದರು.

ಮಲ್ಪೆ ಪರ್ಸೀನ್‌ ಮೀನುಗಾರರ ಸಂಘದ ಅಧ್ಯಕ್ಷ ಯಶೋಧರ ಅಮೀನ್‌, ನವೀನ್‌ ಕೋಟ್ಯಾನ್‌, ರಾಮ ಸುವರ್ಣ, ನವೀನ್‌ ಸುವರ್ಣ, ಮಧು ಕರ್ಕೇರ, ವಿಶ್ವನಾಥ್‌, ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.