ಅಂತರ್ಜಲ ವೃದ್ಧಿ ಚಟುವಟಿಕೆ ಕೈಗೊಳ್ಳಿ : ಪೀಯುಷ್ ರಂಜನ್
Team Udayavani, Jun 15, 2022, 12:54 AM IST
ಉಡುಪಿ : ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ಈಗಾಗಲೇ ಕೈಗೊಂಡಿರುವ ಕ್ರಮಗಳ ಜತೆಗೆ ಇನ್ನಷ್ಟು ಹೆಚ್ಚಿನ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಕೇಂದ್ರದ ರಕ್ಷಣಾ ಸಚಿವಾಲಯದ ನಿರ್ದೇಶಕ, ಜಲಶಕ್ತಿ ಅಭಿಯಾನ ಯೋಜನೆಯ ನೋಡಲ್ ಅಧಿಕಾರಿ ಪೀಯುಷ್ ರಂಜನ್ ಹೇಳಿದರು.
ಅವರು ಸೋಮ ವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಲಶಕ್ತಿ ಅಭಿಯಾನ ಯೋಜನೆಗೆ ಸಂಬಂಧಿಸಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಳೆ ನೀರು ಕೊçಲು, ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ನಿರ್ಮಾಣ, ಪ್ಲಾಂಟೇಶನ್, ಇಂಗು ಗುಂಡಿಗಳ ರಚನೆ, ಜಲ ಮೂಲಗಳ ಸಂರಕ್ಷಣೆ ಕುರಿತಂತೆ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ನಗರ ಪ್ರದೇಶದಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗ ಮಳೆ ನೀರು ಕೊçಲು ಘಟಕ ಅಳವಡಿಕೆ ಬಗ್ಗೆ ಸೂಚಿಸುವ ಕಡ್ಡಾಯ ನಿಯಮಗಳ ಪಾಲನೆ ಆಗುತ್ತಿರುವ ಬಗ್ಗೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನರೇಗಾದಡಿ ಜಲಶಕ್ತಿ ಅಭಿಯಾನದ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅನುಷ್ಠಾನಗೊಳಿಸುವಂತೆ ಹಾಗೂ ಅಂತರ್ಜಲ ವೃದ್ಧಿಯ ಪ್ರಯೋಜನ ಗಳ ಕುರಿತಂತೆ ಹೆಚ್ಚಿನ ಸಂಖ್ಯೆಯ ಸಾರ್ವಜನಿಕ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋ ಜಿಸುವಂತೆ ಹಾಗೂ ತ್ಯಾಜ್ಯ ನೀರಿನ ಸಮರ್ಪಕ ಬಳಕೆ ಮಾಡುವಂತೆ ತಿಳಿಸಿದರು.
ಅಂತರ್ಜಲ ವೃದ್ಧಿ
ಜಿಲ್ಲೆಯಲ್ಲಿ 1,400ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟುಗಳ ಮೂಲಕ ಅಂತರ್ಜಲ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಉದ್ಯೋಗ ಖಾತ್ರಿ ಯೋಜನೆಯಡಿ ಕರೆಗೆಳ ಅಭಿವೃದ್ಧಿ ಹಾಗೂ ತೆರೆದ ಬಾವಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ 180 ಅಡಿಯ ಕೆಳಗೆ ನೀರು ದೊರೆಯುತ್ತಿದ್ದು, ಪ್ರಸ್ತುತ ಈ ಪ್ರಮಾಣ 160 ಅಡಿಗಳಿಗೆ ತಲುಪಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು.
ಕೇಂದ್ರದ ಜಲಶಕ್ತಿ ಅಭಿಯಾನ ಯೋಜನೆಯ ವಿಜ್ಞಾನಿ ಹಾಗೂ ತಾಂತ್ರಿಕ ಅಧಿಕಾರಿ ಡಾ| ಲಕ್ಷ್ಮೀನಾರಾಯಣ್ ತುಕಾರಾಲ್, ಜಿ.ಪಂ. ಸಿಇಒ ಪ್ರಸನ್ನ ಎಚ್. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.