PM Modi ಸರಕಾರದ ಸಾಧನೆಯೇ ಕೋಟ ಗೆಲುವಿಗೆ ಶ್ರೀರಕ್ಷೆ: ಯಶ್‌ಪಾಲ್ ಸುವರ್ಣ
Team Udayavani, Apr 22, 2024, 12:48 AM IST
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 10 ವರ್ಷಗಳ ಅಭಿವೃದ್ಧಿ ಕಾರ್ಯಗಳೇ ಕೋಟ ಶ್ರೀನಿವಾಸ ಪೂಜಾರಿ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ, ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಕರ್ನಾಟಕ ಬಿಜೆಪಿಯ ಭದ್ರಕೋಟೆ ಎಂಬುದನ್ನು ಜನತೆ ಮತ್ತೂಮ್ಮೆ ಸಾಬೀತು ಮಾಡಲಿದ್ದಾರೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಉಡುಪಿ ಜಿಲ್ಲಾ ಯುವಮೋರ್ಚಾ ಆಯೋಜಿಸಿದ್ದ ಯುವ ಭಾರತ ಸಮಾ ವೇಶದಲ್ಲಿ ಅವರು ಮಾತನಾಡಿದರು.
ಮೋದಿ 2014ರಿಂದ ದೇಶದ ಸಾರಥ್ಯ ವಹಿಸಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ.ಸಹಕಾರ ಕ್ಷೇತ್ರದ ಬಲವರ್ಧನೆಗೆ ಪ್ರತ್ಯೇಕ ಸಚಿವಾಲಯ, ಮೀನುಗಾರಿಕೆ ಅಭಿವೃದ್ಧಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ನೂತನ ಸಚಿವಾಲಯ ಸ್ಥಾಪಿಸಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 26 ಸಾವಿರ ಕೋಟಿ ರೂ. ಅನು ದಾನ ಒದಗಿಸಿ ಮೀನುಗಾರಿಕೆ ಚಟು ವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡಿದ್ದಾರೆ ಎಂದರು.
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು, ಆಯುಷ್ಮಾನ್ ಭಾರತ್, ಜನೌಷಧ ಕೇಂದ್ರ, ಕಿಸಾನ್ ಸಮ್ಮಾನ್ ಯೋಜನೆ, ಸ್ವ ಉದ್ಯೋಗಕ್ಕಾಗಿ ವಿಶ್ವಕರ್ಮ ಯೋಜನೆ, ಮುದ್ರಾ ಯೋಜನೆ, ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಮುಂತಾದ ಹಲವು ಯೋಜನೆಗಳ ಅನುಷ್ಠಾನದ ಮೂಲಕ ಮೋದಿ ಸರಕಾರ ದೇಶದ ಜನತೆಯ ಮೆಚ್ಚುಗೆಗೆ ಪಾತ್ರವಾಗಿವೆ ಎಂದು ತಿಳಿಸಿದರು.
ಈ ಬಾರಿ ಪಕ್ಷ ಸರಳ ಸಜ್ಜನ ವ್ಯಕ್ತಿತ್ವದ ಕೋಟ ಶ್ರೀನಿವಾಸ ಪೂಜಾರಿ, ನಿವೃತ್ತ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ, ಅನುಭವಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಂತಹ ಸಮರ್ಥ ಅಭ್ಯರ್ಥಿಗಳನ್ನು ನೀಡಿದ್ದು, ಕಾರ್ಯಕರ್ತರು ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿಯನ್ನಾ ಗಿಸುವ ಪಣತೊಟ್ಟಿದ್ದಾರೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡರಾದ ಅರುಣ್ ಕುಮಾರ್‌ಪುತ್ತಿಲ, ಶಾಸಕರಾದ ಸುನಿಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಹರೀಶ್ ಪೂಂಜಾ ಹಾಗೂ ಪಕ್ಷದ ಮುಖಂಡರಾದ ಪ್ರಮೋದ್ ಮಧ್ವರಾಜ್, ಕೆ. ರಘುಪತಿ ಭಟ್, ಉದಯ ಕುಮಾರ್‌ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಚೊಂಬು ಮತ್ತು ಬಾಂಬುಗಳೇ ಕಾಂಗ್ರೆಸ್ ಸರಕಾರದ ಸಾಧನೆ!
ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುವ ಮುನ್ನ ಘೋಷಣೆ ಮಾಡಿದಂತೆ ನಾರಾಯಣ ಗುರು ನಿಗಮಕ್ಕೆ ಯಾವುದೇ ಅನುದಾನ ಒದಗಿಸಿಲ್ಲ. ಉಡುಪಿಯಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದಂತೆ ಬಂಟರ ಅಭಿವೃದ್ಧಿ ನಿಗಮವನ್ನು ಕೂಡ ಸ್ಥಾಪಿಸಿಲ್ಲ. ಉಡುಪಿ ಪರ್ಯಾಯ ಮಹೋತ್ಸವಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಘೋಷಣೆ ಮಾಡಿದ 10 ಕೋಟಿ ರೂ. ಇನ್ನೂ ಬಂದಿಲ್ಲ ಎಂದು ಯಶ್‌ಪಾಲ್ ಸುವರ್ಣ ತಿಳಿಸಿದರು.
ದಲಿತ ವಿರೋಧಿ ನೀತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ 11 ಸಾವಿರ ಕೋಟಿ ಅನುದಾನ ಕಡಿತವಾಗಿದೆ. ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ಅನುದಾನದ ಭರವಸೆ ನೀಡಿದ್ದಾರೆ. ಆದರೆ ಕರಾವಳಿ ಜಿಲ್ಲೆಗಳ ದೇವಸ್ಥಾನ, ದೈವಸ್ಥಾನ, ಗರಡಿ, ಮಂದಿರಗಳ ಅಭಿವೃದ್ಧಿಗೆ ಯಾವುದೇ ಅನುದಾನ ನೀಡಿಲ್ಲ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ರಾಮ ನವಮಿ/ಜೈ ಶೀರಾಮ್ ಘೋಷಣೆಗೆ ಅಡ್ಡಿ, ಲವ್ ಜೆಹಾದ್ ಭಾಗವಾಗಿ ಜೆಹಾದಿ ಮನಸ್ಥಿತಿಯ ಫಯಾಜ್‌ನಿಂದ ಹುಬ್ಬಳ್ಳಿಯ ನೇಹಾ ಹಿರೇಮಠ ಕಗ್ಗೊಲೆ, ನಾಸೀರ್‌ಹುಸೇನ್ ಬೆಂಬಲಿಗರಿಂದ ಪಾಕ್ ಪರ ಘೋಷಣೆ ಮುಂತಾದ ಘಟನೆಗಳಿಂದ ರಾಜ್ಯದ ಜನತೆ ಬೇಸತ್ತಿದ್ದು ಸಿದ್ದರಾಮಯ್ಯ ಅವರ ಚೊಂಬು, ಬಾಂಬು ಸರಕಾರಕ್ಕೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲು ಸಿದ್ಧವಾಗಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.