ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ
Team Udayavani, Sep 21, 2024, 8:59 PM IST
ಉಡುಪಿ: ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಸುಳ್ಳು ಪ್ರಕರಣವೆಂದು ಸಲ್ಲಿಸಿದ “ಬಿ’ ವರದಿಯನ್ನು ತಿರಸ್ಕರಿಸಿದ ಜಿಲ್ಲಾ ಪೋಕ್ಸೋ ನ್ಯಾಯಾಲಯ ಪ್ರಕರಣಕ್ಕೆ ಮರುಜೀವ ನೀಡಿದ ಘಟನೆ ನಡೆದಿದೆ.
ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ನೊಂದ ಬಾಲಕನೊಬ್ಬ ಸ್ಥಳೀಯ ಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪಿ ಫೈಜಲ್ ಬ್ಯಾರಿ ಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದ ಅಖೀಲಾ ಮತ್ತು ಮೊಹಾಜಮ್ ಅವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿತ್ತು.
ಪೊಲೀಸರು ಪ್ರಕರಣದ ವಿಚಾರಣೆ ನಡೆಸಿದ ತರುವಾಯ ಸುಳ್ಳು ಪ್ರಕರಣವೆಂದು ಉಡುಪಿಯ ಜಿಲ್ಲಾ ಪೋಕೊÕ ನ್ಯಾಯಾಲಯಕ್ಕೆ “ಬಿ’ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ಪೊಲೀಸರ “ಬಿ’ ವರದಿಯನ್ನು ಪ್ರಶ್ನಿಸಿ ನೊಂದ ಬಾಲಕ ನ್ಯಾಯಾಲಯಕ್ಕೆ ಹಾಜರಾಗಿ ವೈದ್ಯರು, ಇತರ ಸಾಕ್ಷಿಗಳನ್ನು ತನ್ನ ಪರವಾಗಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರುಪಡಿಸಿದ್ದಾನೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು ಮೇಲ್ನೊಟಕ್ಕೆ ಪ್ರಕರಣ ನಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪೊಲೀಸರ “ಬಿ’ ವರದಿಯನ್ನು ತಿರಸ್ಕರಿಸಿ ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರುವಾಗುವಂತೆ ಸಮನ್ಸ್ ನೀಡಿ ಆರೋಪಿಗಳ ಮೇಲೆ ಮರು ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಆದೇಶಿಸಿದ್ದಾರೆ. ಪ್ರಕರಣದಲ್ಲಿ ನೊಂದ ಬಾಲಕನ ಪರವಾಗಿ ಉಡುಪಿಯ ನ್ಯಾಯವಾದಿ ಚೇರ್ಕಾಡಿ ಅಖಿಲ್ ಬಿ. ಹೆಗ್ಡೆ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.