ಪೊಲೀಸ್‌ ಗಸ್ತು ವ್ಯವಸ್ಥೆಯಿಂದ ಜನರ ಆಶೋತ್ತರಗಳಿಗೆ ಸ್ಪಂದನೆ

Team Udayavani, Jul 23, 2017, 6:30 AM IST

220717ppe7-1.gif

ಉಡುಪಿ: ರಾಜ್ಯದಲ್ಲಿ ಜಾರಿಗೆ ತಂದಿರುವ ಸುಧಾರಿತ ಗಸ್ತು ವ್ಯವಸ್ಥೆಯನ್ನು ಆಯಾ ಪೊಲೀಸ್‌ ಠಾಣೆಯ ಸಿಬಂದಿ ಸಂಖ್ಯೆನುಗುಣವಾಗಿ ವಿಂಗಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 2000 ಪೊಲೀಸ್‌ ಸಿಬಂದಿಯಿದ್ದು, 23 ಸಾವಿರ ನಾಗರಿಕ ಸಮಿತಿ ಸದಸ್ಯರಿದ್ದಾರೆ. ಇದು ಮುಂದಿನ ದಿನಗಳಲ್ಲಿ ಉತ್ತಮ ರೀತಿಯಲ್ಲಿ ಜನರಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಟಿ. ಬಾಲಕೃಷ್ಣ ಹೇಳಿದರು. 

ಜಿಲ್ಲಾ ಪೊಲೀಸ್‌ ಇಲಾಖೆಯ ಉಡುಪಿ ಉಪವಿಭಾಗದ ವತಿಯಿಂದ ಶನಿವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂ ಗಣದಲ್ಲಿ ನಡೆದ ಉಡುಪಿ ನಗರ ವೃತ್ತ ಮತ್ತು ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ನೂತನ ಸುಧಾರಿತ ಗಸ್ತು ವ್ಯವಸ್ಥೆಯ ಗಸ್ತು ನಾಗರಿಕ ಸಮಿತಿ ಸದಸ್ಯರ ಸಭೆಯಲ್ಲಿ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿದರು. 

ಈ ನೂತನ ವ್ಯವಸ್ಥೆಯ ಮೂಲಕ ಪೊಲೀಸ್‌ ಇಲಾಖೆಯು ಜನರ ಆಶೋತ್ತರ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಗಸ್ತು ಸದಸ್ಯರ ಸಂಖ್ಯೆ ಸುಮಾರು 12ರಿಂದ 13 ಲಕ್ಷವಿದ್ದು, ಇವರ ಭಾವಚಿತ್ರ, ವಿಳಾಸ ಹಾಗೂ ಮೊಬೈಲ್‌ ಸಂಖ್ಯೆಗಳ ದಾಖಲೆಗಳು ಪೊಲೀಸ್‌ ಇಲಾಖೆಯಲ್ಲಿವೆ. ಸಾರ್ವಜನಿಕರು ನೀಡುವ ಯಾವುದೇ ಮಾಹಿತಿ ಸೋರಿಕೆ ಮಾಡದೆ ಗೌಪ್ಯವಾಗಿಡಲಾಗುವುದು. ಈ ಸದಸ್ಯರು ಒಂದು ವರ್ಷಗಳ ಕಾಲ ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ ಎಂದರು.

ಉಡುಪಿ ಉಪ ವಿಭಾಗದ ಡಿವೈಎಸ್ಪಿ ಕುಮಾರಸ್ವಾಮಿ ಮಾತನಾಡಿ, ಸಮಾಜದಲ್ಲಿ ಅಪರಾಧ ತಡೆಗಟ್ಟುವುದು, ಪತ್ತೆ ಹಚ್ಚುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಈ ಗಸ್ತು ವ್ಯವಸ್ಥೆಯ ಉದ್ದೇಶ. ಅಪರಾಧಕ್ಕೆ ಸಂಬಂಧಿಸಿ ಮಾಹಿತಿಯನ್ನು ಈ ಸಮಿತಿ ಮೂಲಕ ಸಂಗ್ರಹಿಸಲಾಗುತ್ತದೆ. ಈ ಸುಧಾರಿತ ಗಸ್ತು ವ್ಯವಸ್ಥೆಯಲ್ಲಿ ಗ್ರಾಮ/ವಾರ್ಡ್‌ಗೆ ಓರ್ವ ಪೊಲೀಸ್‌ ನೇಮಕ ಮಾಡಲಾಗುತ್ತದೆ. ಇದು ಪೊಲೀಸ್‌ ಹಾಗೂ ಸಾರ್ವಜನಿಕರ ಮಧ್ಯೆ ಉತ್ತಮ ಬಾಂಧವ್ಯಕ್ಕೆ ನೆರವಾಗುವುದು ಎಂದರು.

ಪ್ರೋಬೇಶನರಿ ಐಎಎಸ್‌ ಅಧಿಕಾರಿ ಪೂವಿತಾ, ಮಣಿಪಾಲ ಪೊಲೀಸ್‌ ನಿರೀಕ್ಷಕ ಸುದರ್ಶನ್‌, ಗಸ್ತು ಸಿಬಂದಿ ಉಡುಪಿ ನಗರ ಠಾಣೆಯ ಲಕ್ಷ್ಮಣ್‌, ಮಲ್ಪೆಯ ಭರಮ ರೆಡ್ಡಿ, ಮಣಿಪಾಲದ ನೇತ್ರಾವತಿ, ನಾಗರಿಕ ಸಮಿತಿ ಸದಸ್ಯ ಮೇಟಿ ಮುದಿಯಪ್ಪ ಉಪಸ್ಥಿತರಿದ್ದರು.
 
ಇದೇ ವೇಳೆ ಎಸ್‌ಪಿ ಅವರು ಉದಯವಾಣಿ ಪತ್ರಿಕೆ ಉಚಿತವಾಗಿ ಮುದ್ರಿಸಿರುವ ಸಾರಿಗೆ ನಿಯಮ ಸೂಚಿಸುವ ಸಂಕೇತಗಳನ್ನೊಳಗೊಂಡ ಕೈಪಿಡಿ ಹಾಗೂ ಸಂಚಾರ ಜಾಗೃತಿ ಕುರಿತ ಬುಕ್‌ಲೆಟ್‌ನ್ನು ಬಿಡುಗಡೆಗೊಳಿಸಿದರು. ವಳಕಾಡು ಸರಕಾರಿ ಶಾಲೆ ಮತ್ತು ಮಣಿಪಾಲ ಎಂಜೆಸಿ ವಿದ್ಯಾರ್ಥಿಗಳಿಂದ ಪ್ರಹಸನ ಜರಗಿತು.ಉಡುಪಿ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಸ್ವಾಗತಿಸಿ, ಮನಮೋಹನ್‌ ಕಾರ್ಯಕ್ರಮ ನಿರೂಪಿಸಿದರು. 

“ಉದಯವಾಣಿ’ಗೆ ಎಸ್‌ಪಿ ಮೆಚ್ಚುಗೆ
ಪೋಲೀಸರ ಬಗ್ಗೆ ಇರುವ ಭಯ ನಿವಾರಿಸಿ ಪೊಲೀಸ್‌ ಸೇವೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮಹತ್ವದ ಹೆಜ್ಜೆ ಮತ್ತು ಅಪರಾಧ ಮುಕ್ತ ಸಮಾಜಕ್ಕೆ ನಾಂದಿ ಹಾಡುವ ಮೈಲಿಗಲ್ಲು ಇದು ಎಂದು ಹೇಳಿದ ಎಸ್‌ಪಿ ಕೆ. ಟಿ. ಬಾಲಕೃಷ್ಣ ಅವರು, ಸಾರಿಗೆ ನಿಯಮವನ್ನು ಸೂಚಿಸುವ ಸಂಕೇತಗಳನ್ನೊಳಗೊಂಡ ಕೈಪಿಡಿಯನ್ನು ಉದಯವಾಣಿ ಪತ್ರಿಕೆ ಉಚಿತವಾಗಿ ಮುದ್ರಣ ಮಾಡಿಕೊಟ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.