ಕಾಮಗಾರಿ ನಡೆದು ಮೂರು ತಿಂಗಳಿನಲ್ಲಿ ರಸ್ತೆ ಹೊಂಡಮಯ
Team Udayavani, Aug 1, 2021, 3:20 AM IST
ಅಜೆಕಾರು: ಕಾರ್ಕಳ -ಉಡುಪಿ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಅಭಿವೃದ್ಧಿ ಕಾಮಗಾರಿ ಕಳೆದ 3 ತಿಂಗಳುಗಳ ಹಿಂದೆ ನಡೆದಿದ್ದು ನೀರೆ ಜಡ್ಡಿನಂಗಡಿ ಬಳಿ ಮತ್ತೆ ಹೊಂಡಗಳು ನಿರ್ಮಾಣಗೊಂಡಿವೆ.
ಮೊದಲ ಮಳೆಗಾಲದಲ್ಲಿಯೇ ರಸ್ತೆ ಯಲ್ಲಿ ಇಷ್ಟು ಹೊಂಡಗಳು ಉಂಟಾದರೆ,ಮುಂದಿನ ದಿನಗಳಲ್ಲಿ ರಸ್ತೆಯ ಸ್ಥಿತಿ ಯಾವ ರೀತಿ ಇರಬಹುದೆಂದು ವಾಹನ ಸವಾರರು ಕಾಮಗಾರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀರೆ ಜಡ್ಡಿನಂಗಡಿ ಬಳಿ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಹೊಂಡಗಳು ನಿರ್ಮಾಣವಾಗಿದ್ದು ಮಳೆ ನೀರು ಈ ಹೊಂಡಗಳಲ್ಲಿ ತುಂಬಿಕೊಂಡಿ ರುವುದರಿಂದ ವಾಹನಗಳು ನಿತ್ಯ ಅಪಘಾತಕ್ಕಿಡಾಗುತ್ತಿವೆ. ಇದು ಉಡುಪಿ ಕಾರ್ಕಳ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿ ರುವುದರಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ನಡೆಸುತ್ತವೆ. ಹೊಂಡಗಳನ್ನು ತ್ವರಿತವಾಗಿ ಮುಚ್ಚುವ ಕೆಲಸ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮಳೆ ಬಂದ ಸಂದರ್ಭ ರಸ್ತೆ ಡಾಮರು ಕಾಮಗಾರಿ ನಡೆಸಿರುವುದರಿಂದ ಈಗ ರಸ್ತೆಯ ಡಾಮರು ಕಿತ್ತು ಹೋಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಬೈಲೂರು ಪಳ್ಳಿ ಕ್ರಾಸ್‌ನಿಂದ ಗುಡ್ಡೆಯಂಗಡಿ ವರೆಗೆ ಮಳೆಗಾಲದ ಮೊದಲು ರಸ್ತೆ ಡಾಮರು ಕಾಮಗಾರಿ ಹಲವೆಡೆ ಗುಂಡಿಗಳು ಬಿದ್ದಿರುವುದರಿಂದ ದ್ವಿಚಕ್ರ ವಾಹನಗಳು ಅಪಘಾತಕ್ಕೊಳಗಾಗುತ್ತಿವೆ. ತ್ವರಿತವಾಗಿ ಹೊಂಡಗಳನ್ನು ಮುಚ್ಚುವ ಕಾರ್ಯ ಮಾಡಿದ್ದಲ್ಲಿ ರಸ್ತೆ ಸಂಪೂರ್ಣ ಹಾಳಾಗುವುದನ್ನು ತಡೆಯಬಹುದಾಗಿದೆ.– ಶಂಕರ್ ಶೆಟ್ಟಿ, ನೀರೆ
ರಸ್ತೆಯಲ್ಲಿರುವ ಗುಂಡಿ ಮುಚ್ಚುವ ಕೆಲಸ ತ್ವರಿತವಾಗಿ ನಡೆಸಲಾಗುವುದು. ಮಳೆಗಾಲ ಮುಗಿದ ಬಳಿಕ ಮರು ಡಾಮರು ಕಾಮಗಾರಿ ನಡೆಸಲಾಗುವುದು. –ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
ಆನ್‌ಲೈನ್‌ನಲ್ಲಿ ಅಧಿಕ ಲಾಭಾಂಶದ ಆಮಿಷ: ಬ್ಯಾಂಕ್ ಮ್ಯಾನೇಜರ್‌ಗೆ ಲಕ್ಷಾಂತರ ರೂ. ವಂಚನೆ
Udupi: ಹೂಡೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ
Hiriydaka: ಒಟಿಪಿ ನೀಡಿ 5 ಲಕ್ಷ ರೂ. ಕಳೆದುಕೊಂಡ ಯುವತಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.