“ಅಂಚೆ ನೌಕರರ ಸಂಘಟನೆಗಳು ಒಗ್ಗಟ್ಟಾದರೆ  ಸಮಸ್ಯೆ ಪರಿಹಾರ ‘

Team Udayavani, Mar 13, 2017, 2:16 PM IST

1203kota1e.jpg

ಕೋಟ: ಗ್ರಾಮೀಣ  ಅಂಚೆ ನೌಕರರಿಗೆ ಹಲವಾರು ಸಮಸ್ಯೆಗಳಿದ್ದು, ಇವುಗಳನ್ನು ಪರಿಹರಿಸಲು ಇದುವರೆಗೆ ಆಡಳಿತಕ್ಕೆ ಬಂದ ಎಲ್ಲ ಸರಕಾರಗಳು ವಿಫಲವಾಗಿವೆ. ಇವರ ಸಂಘಟನೆಗಳ ನಡುವೆ ಸಮನ್ವಯತೆ ಇಲ್ಲದಿರುವುದರಿಂದ ಆಡಳಿತ ವ್ಯವಸ್ಥೆ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. 

ಬೇರೆ-ಬೇರೆ ವಿಭಾಗಗಳಾಗಿ ಹರಿದು ಹಂಚಿಹೋಗಿರುವ ಅಂಚೆ ನೌಕರರ ಸಂಘಟನೆಗಳು ಒಂದೇ  ವೇದಿಕೆಯಲ್ಲಿ ನಿಂತು ಹೋರಾಟ ಮಾಡಿದ್ದಲ್ಲಿ  ಸರಕಾರ ನಿಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು  ಮೀನುಗಾರಿಕೆ, ಯುವಸಬಲೀಕರಣ,  ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ಅವರು  ಮಾ.12ರಂದು ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಜರಗಿದ ಅಖೀಲ ಭಾರತ ಗ್ರಾಮೀಣ ಅಂಚೆನೌಕರರ ಸಂಘ ಉಡುಪಿ ವಿಭಾಗದ ದ್ವೆ„ವಾರ್ಷಿಕ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಇಲಾಖೆ ಇದ್ದರೆ ಅದು ಅಂಚೆ ಇಲಾಖೆ ಮಾತ್ರ. ಆದರೂ ಈ ಇಲಾಖೆಯಲ್ಲಿ ದುಡಿಯುವವರಿಗೆ ವೇತನ, ಸವಲತ್ತುಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ.  ಇವರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ  ಹಾಗೂ ಹೋರಾಟದಲ್ಲಿ ನಿಮ್ಮ ಜತೆ ಕೈಜೋಡಿಸುತ್ತೇನೆ ಎಂದರು.

ಸಮಸ್ಯೆಗಳನ್ನು ಕೇಂದ್ರ 
ಸರಕಾರದ ಗಮನಕ್ಕೆ ತರುವೆ

ಅಂಚೆ ಇಲಾಖೆ ನೌಕರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಕುರಿತು ನನ್ನ ಗಮನದಲ್ಲಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂಸದರು, ಸಚಿವರ ಮೂಲಕ ಕೇಂದ್ರ ಸರಕಾರದ ಗಮನ ಸೆಳೆಯಲಾಗುವುದು ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ಅಂಚೆ ಇಲಾಖೆಯ ಅಧೀಕ್ಷಕರಾದ ರಾಜಶೇಖರ ಭಟ್‌ ಕಾರ್ಯಕ್ರಮ ಉದ್ಘಾಟಿಸಿ, ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಗ್ರಾಮೀಣ ಅಂಚೆ ನೌಕರರ ಸಂಘದ ಉಡುಪಿ ವಿಭಾಗದ ಅಧ್ಯಕ್ಷ ಬಸವ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ನಿವೃತ್ತ ನೌಕರರಿಗೆ ಸಮ್ಮಾನ, ನಿಧನರಾದ ನೌಕರರಿಗೆ ಶ್ರದ್ಧಾಂಜಲಿ, ಗೌರವಾರ್ಪಣೆ ನಡೆಯಿತು. ಕರ್ನಾಟಕ ರೈತ ಸಂಘ ಆಂದೋಲನದ ಮುಖಂಡ ವಿಜಯ ಕುಮಾರ್‌ ಹೆಗ್ಡೆ, ರೈತ ಮುಖಂಡ  ರಾಘವೇಂದ್ರ ಉಪ್ಪೂರು, ಸಂಸ್ಥೆಯ ಮುಖಂಡರಾದ ಕೆ.ಸಿ. ಅಣ್ಣಪ್ಪ, ರುದ್ರೇಶ, ಎಂ.ಎನ್‌.ಕುರಹಟ್ಟಿ, ಎಸ್‌.ಎಸ್‌. ಮಂಜುನಾಥ, ಎಂ.ಜಿ.ಹೆಗ್ಡೆ, ಶೇಷಪ್ಪ  ಉಪಸ್ಥಿತರಿದ್ದರು.

ಸಂಸ್ಥೆಯ ಸದಸ್ಯ ನಾರಾಯಣ ಸ್ವಾಗತಿಸಿ, ಶಿವರಾಮ್‌ ಕಾರ್ಕಡ  ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಸಂತೋಷ ಮಧ್ಯಸ್ಥ ವರದಿ ವಾಚಿಸಿ, ಖಜಾಂಚಿ ರಮಾನಾಥ ಆರ್‌. ಮಾçಲಿ ವಂದಿಸಿದರು.
 
ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.