Udupi ಹಿಂದುಳಿದ ವರ್ಗಕ್ಕೆ ಶಕ್ತಿ: ಸಚಿವೆ ಶೋಭಾ ಕರಂದ್ಲಾಜೆ
ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ
Team Udayavani, Aug 20, 2023, 11:07 PM IST
ಉಡುಪಿ: ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆ ಅರಿತಿದ್ದ ದಿ| ಡಿ. ದೇವರಾಜ ಅರಸು ಸಮಸ್ಯೆಗಳಿಗೆ ದನಿಯಾಗಿ, ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ರವಿವಾರ ಜಿಲ್ಲಾಡಳಿತ, ಜಿ. ಪಂ. ಉಡುಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿ ಯಿಂದ, ರಜತಾದ್ರಿಯ ಅಟಲ್‌ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ದಿ| ಡಿ. ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅರಸು ಅವರು ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು. ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಾಸ್ಟೆಲ್‌ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಕೊಡುಗೆ ನೀಡಿದ್ದರು ಎಂದರು.
ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ಮಾಜಿ ಶಿಕ್ಷಕ ಹಾಗೂ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ರಾಘವೇಂದ್ರ ಉಪನ್ಯಾಸ ನೀಡಿದರು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರಸನ್ನ ಎಚ್. , ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ. ಹಾಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ನಗರಸಭೆ ಪೌರಾಯುಕ್ತ ರಾಯಪ್ಪ, ಭಾರತ ಸೇವಾ ದಳದ ಕೇಂದ್ರ ಸಮಿತಿ ಸದಸ್ಯ ಆರೂರು ತಿಮ್ಮಪ್ಪ ಶೆಟ್ಟಿ ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್. ಲಮಾಣಿ ಸ್ವಾಗತಿಸಿದರು. ಎಸೆಸೆಲ್ಸಿ, ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಅಭಿನಂದನೆ, ದೇವರಾಜ ಅರಸು ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪಧೇìಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಹಾಗೂ ಹಿಂದುಳಿದ ವರ್ಗದ ವಿವಿಧ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.
ಸೇನಾ ತರಬೇತಿ ಶಾಲೆ ಪುನಾರಂಭಗೊಳ್ಳಲಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ದೇವರಾಜ ಅರಸು ಅವರು ರಾಜ್ಯದ ಜನಸಂಖ್ಯೆಯಲ್ಲಿ ಬಹುಸಂಖ್ಯಾಕವಾಗಿರುವ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಬಹುತೇಕ ಮಂದಿ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣ ನಡೆಯಬೇಕು ಮತ್ತು ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿಯ ಶಾಲೆಯ ಪುನಾರಾರಂಭ ಆಗಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.