ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ನಿಧನ
Team Udayavani, Aug 31, 2022, 8:17 PM IST
ಉಡುಪಿ: ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ಆಚಾರ್ಯ ಇಂದು (ಆ.31 ರಂದು) ನಿಧನರಾಗಿದ್ದಾರೆ.
ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಅಧ್ಯಾಪಕರು ಹಾಗೂ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಅವರು, ಆನಂತರ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ತನ್ನ ನಿವೃತ್ತ ಜೀವನದಲ್ಲಿ ಇವರು ಅನೇಕ ಸಂಘ-ಸಂಸ್ಥೆಗಳಲ್ಲಿ ಅವಿವರತವಾಗಿ ತನ್ನನ್ನು ತೊಡಗಿಸಿಕೊಂಡವರು. ಶ್ರೀ ಶ್ರೀ ವಿಬುಧೇಶತೀರ್ಥ ಶ್ರೀಪಾದರ ಒಡನಾಡಿಯಾಗಿ, ನಿವೃತ್ತ ಜೀವನದ ನಂತರವೂ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.
ಸುಮಾರು 15 ವರ್ಷಗಳಿಂದ ಶ್ರೀ ಅದಮಾರು ಮಠ ಗೆಸ್ಟ್ ಹೌಸ್, ಶ್ರೀ ವಿಬುಧೇಶತೀರ್ಥ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಶ್ರೀ ಶ್ರೀ ವಿಬುಧೇಶತೀರ್ಥ ಶ್ರೀಪಾದರು, ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಪ್ರಸ್ತುತ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಅವಧಿಯಲ್ಲಿಯೂ ಟ್ರಸ್ಟಿನ ಉಪಾಧ್ಯಕ್ಷರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುತ್ತಿದ್ದು, ಶ್ರೀಪಾದತ್ರಯರಿಗೆ ಆಪ್ತರಾಗಿದ್ದರು.
ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದ ಸರಳ ಸ್ವಭಾವದ ಶ್ರೀ ರಾಧಕೃಷ್ಣ ಆಚಾರ್ಯರ ಅಗಲಿಕೆ ಸಮಾಜಕ್ಕೆ ಬಹುದೊಡ್ಡ ನಷ್ಟ. ಅಗಲಿದ ಸರಳ ಸಜ್ಜನಿಕೆಯ ಮೂರ್ತಸ್ವರೂಪರಾದ ಶ್ರೀ ರಾಧಕೃಷ್ಣ ಆಚಾರ್ಯ ಇವರ ದಿವ್ಯಾತ್ಮಕ್ಕೆ ಸದ್ಗತಿ ಸಿಗಲೆಂದು ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
MUST WATCH
ಹೊಸ ಸೇರ್ಪಡೆ
Udupi: ಟವರ್ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್ ದಾವೆ: ಸಂಸದ ಕೋಟ
Mangaluru: ಅಡಿಕೆ ಕ್ಯಾನ್ಸರ್ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.