Pradhan mantri ಮಾತೃವಂದನ ಯೋಜನೆ: ನೋಂದಣಿಗೆ ಸೂಚನೆ
Team Udayavani, Oct 20, 2023, 11:48 PM IST
ಉಡುಪಿ/ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಾರಿಗೊಳಿಸಲಾದ ಪ್ರಧಾನ ಮಂತ್ರಿ ಮಾತೃವಂದನ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಗರ್ಭಿಣಿ ಹಾಗೂ ಬಾಣಂತಿಯರು ನೋಂದಾಯಿಸಿಕೊಳ್ಳಬಹುದಾಗಿದೆ.
ಮೊದಲ ಪ್ರಸವದ ಗರ್ಭಿಣಿ ಹಾಗೂ ಬಾಣಂತಿಯರಿಗೆ 5 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಎರಡನೇ ಪ್ರಸವದಲ್ಲಿ ಜನಿಸುವ ಹೆಣ್ಣು ಮಗುವಿಗೆ 6 ಸಾವಿರ ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. ಈ ಪ್ರೋತ್ಸಾಹಧನವು ಗರ್ಭಿಣಿ / ಬಾಣಂತಿಯರು ಪೂರಕ ಆಹಾರ ಪಡೆಯಲು ಹಾಗೂ ಆರೋಗ್ಯವಂತ ಮಗುವಿನ ಜನನಕ್ಕೆ ಮತ್ತು ಪಾಲನೆಗೆ ಸಹಕಾರಿಯಾಗಲಿದೆ.
ಮೊದಲನೇ ಪ್ರಸವದ ಗರ್ಭಿಣಿ/ ಬಾಣಂತಿಗೆ ಮೊದಲನೇ ಕಂತಿನಲ್ಲಿ 3 ಸಾವಿರ ರೂ.ಗಳನ್ನು ಗರ್ಭಧಾರಣೆ ಖಾತರಿ ಅನಂತರ ಎರಡನೇ ಕಂತಿನಲ್ಲಿ 2 ಸಾವಿರ ರೂ.ಗಳನ್ನು ಮಗು ಜನಿಸಿದ ಅನಂತರ ಹಾಗೂ ಎರಡನೇ ಪ್ರಸವದ ಹೆಣ್ಣು ಮಗು ಜನಿಸಿದ 3 ತಿಂಗಳ ಅನಂತರದಲ್ಲಿ 6 ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು.
ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ / ಜಾತಿ ಮತ್ತು ಆದಾಯ ಪ್ರಮಾಣ ಪತ್ರ/ ನರೇಗಾ ಕಾರ್ಡ್/ ಆಯುಷ್ಮಾನ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದರ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.