Lok Sabha Election: ನಾನು ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್
ಅಪಪ್ರಚಾರ ಶುರುವಾಗಿದೆ
Team Udayavani, Aug 4, 2023, 9:12 PM IST
ಉಡುಪಿ: ಲೋಕಸಭೆ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ಅಮ್ಮುಂಜೆಯ ತಮ್ಮ ಮನೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿಯನ್ನು ತೊರೆಯುವ ಸಾಧ್ಯತೆಯ ಅಪಪ್ರಚಾರ ಶುರುವಾಗಿದೆ. ಮುಂದೊಂದು ದಿನ ರಾಜಕೀಯ ನಿವೃತ್ತಿ ಹೊಂದುವುದು ಅಥವಾ ನನ್ನ ದೇಹ ಅಂತ್ಯದವರೆಗೆ ಬಿಜೆಪಿ ಕಾರ್ಯಕರ್ತನಾಗಿ ಉಳಿಯುತ್ತೇನೆ. ಬಿಜೆಪಿಯಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಪಕ್ಷದ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ನಾನೇ ಅಭ್ಯರ್ಥಿ ಎಂಬ ಸ್ಪಷ್ಟತೆ ಇಲ್ಲ. ಪಕ್ಷದಿಂದ ಟಿಕೆಟ್ ನೀಡಿದಲ್ಲಿ ಎಲ್ಲರ ಆಶೀರ್ವಾದ ಪಡೆದು ಮತದಾರ ಸಹಕಾರ ಕೋರಿ ಸ್ಪರ್ಧೆಗೆ ಇಳಿಯಲು ಸಿದ್ಧನಿದ್ದೇನೆ. ಟಿಕೆಟ್ ನೀಡದೇ ಇದ್ದರೆ ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಪಕ್ಷ ಈವರೆಗೂ ಯಾವುದೇ ಪ್ರಮುಖ ಜವಾಬ್ದಾರಿ ನೀಡಿಲ್ಲ. ಆದರೆ, ಪಕ್ಷ ಕಾಲ ಕಾಲಕ್ಕೆ ಕೆಲವು ಜವಾಬ್ದಾರಿ ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾರವಾರ, ಭಟ್ಕಳ, ಹಾನಗಲ್, ಮೂಡಗೆರೆ, ಶೃಂಗೇರಿ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ ಸೇರಿ ಹಲವೆಡೆ ಕೆಲಸ ಮಾಡಿದ್ದೇನೆ. ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸಲಿದ್ದೇನೆ. ಹೀಗಾಗಿ ಮುಂದಿನ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಮತ್ತು ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸಲಿದ್ದೇನೆ. ಶಾಸಕನಾಗಿಯೂ ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಿದ್ದೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.