ಬಿಜೆಪಿಯನ್ನೇ ತಿದ್ದುವೆ, ಕಾಂಗ್ರೆಸ್‌ ಸೇರುವೆ ಮಾತೇ ಇಲ್ಲ…: ಮುತಾಲಿಕ್‌

Team Udayavani, Dec 18, 2022, 8:12 AM IST

ಬಿಜೆಪಿಯನ್ನೇ ತಿದ್ದುವೆ, ಕಾಂಗ್ರೆಸ್‌ ಸೇರುವೆ ಮಾತೇ ಇಲ್ಲ…: ಮುತಾಲಿಕ್‌

ಉಡುಪಿ : ಕೇಂದ್ರ ಸರಕಾರದ ನರೇಂದ್ರ ಮೋದಿ ಅವರಂತೆ ರಾಜ್ಯದಲ್ಲಿ ಬಿಜೆಪಿ ಆಡಳಿತ ಕೊಡಬೇಕು. ಮನೆ ಮನೆಗೆ ತೆರಳಿ ಮತ ಭಿಕ್ಷೆ ಬೇಡುತ್ತೇನೆ. ಬಿಜೆಪಿಯನ್ನೇ ತಿದ್ದಿ ಸರಿ ಮಾಡುತ್ತೇನೆ ವಿನಾ ಕಾಂಗ್ರೆಸ್‌ ಸೇರುವೆ ಮಾತೇ ಇಲ್ಲ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹೇಳಿದರು.

ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಹೋರಾಟ ಬಿಜೆಪಿ ವಿರುದ್ಧವಲ್ಲ. ಹಿಂದುತ್ವಕ್ಕಾಗಿ, ಅಭಿವೃದ್ಧಿಗಾಗಿ, ಪ್ರಾಮಾಣಿಕ ವ್ಯವಸ್ಥೆ ರೂಪಿಸಲು ನನ್ನ ಹೋರಾಟ ನಿರಂತರ. ಈ ಕಾರಣ ದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.

ಕಾರ್ಯಕರ್ತರಿಗೆ ಶಕ್ತಿ ತುಂಬಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಬಗ್ಗೆ ಏಳೆಂಟು ಕ್ಷೇತ್ರಗಳಲ್ಲಿ ಅಧ್ಯಯನ ಮಾಡಿದ್ದು ಕಾರ್ಕಳ ಕೂಡ ಇದರಲ್ಲಿ ಒಂದು. ಈ ತಿಂಗಳ ಕೊನೆಗೆ ಅಧಿಕೃತವಾಗಿ ಘೋಷಣೆ ಮಾಡುತ್ತೇನೆ. ಕಾರ್ಕಳದಲ್ಲಿನ ಓಡಾಟ ಶಾಸಕರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಕಾರ್ಯಕರ್ತರಿಗೆ ಕೇಸು ಹಾಕೋದು, ಹೆದರಿಸೋದು ಮಾಡು ತ್ತಿದ್ದಾರೆ. ಹಿಂದುತ್ವದ ನೈತಿಕತೆ ಇದ್ದರೆ ಹೆದರಿಸುವ ಆವಶ್ಯಕತೆ ಇರಲಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಮೂರು ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಕೇಸು ಇದೆ. ರಾಜ್ಯದಲ್ಲಿ 18 ಹಿಂದೂ ಒಕ್ಕೂಟ ಬಿಜೆಪಿಗೆ ವಿರುದ್ಧವಾಗಿದೆ ಎಂದರು.

ಕಾರ್ಕಳದ ಭ್ರಷ್ಟಾಚಾರದ ದಾಖಲೆ ಇದೆ. ಒಂದೊಂದಾಗಿ ತಿರುಗೇಟು ಕೊಡುತ್ತೇನೆ. ಮುಂದಿನ ದಿನಗಳಲ್ಲಿ ನಾನು ಕೇಸು ಹಾಕುತ್ತೇನೆ. ನಮ್ಮ ಕಾರ್ಯಕರ್ತರಿಗೆ ಭಯಪಡಿಸಿದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು. ಕಾರ್ಕಳದಲ್ಲಿ ಬೂತ್‌ ಮಟ್ಟದಲ್ಲಿ ಸಂಘಟನೆ ಕಾರ್ಯ ನಡೆಯುತ್ತಿದೆ. ಲವ್‌ ಜೆಹಾದ್‌, ಗೋವು ಕಳ್ಳತನ ಕಾರ್ಕಳದಲ್ಲಿ ಹೆಚ್ಚಿದೆ. ಕಾರ್ಕಳದಲ್ಲಿ ಈಗಾಗಲೆ ಜನರು ಸಕಾರಾತ್ಮಕವಾಗಿ ಸ್ಪಂದಿಸಿ ಸ್ವಾಗತಿಸಿದ್ದಾರೆ.

ಬಾಲಿವುಡ್‌ ವಿರುದ್ಧ ಗುಡುಗು
ಬಾಲಿವುಡ್‌ ಸಿನೆಮಾಗಳು ಇಸ್ಲಾಮೀಕರಣ ಹೇರುತ್ತಿದ್ದು, ನಾಸ್ತಿಕವಾದ, ಕಮ್ಯುನಿಸಂನ್ನು ಹೆಚ್ಚು ಪ್ರಚಾರಪಡಿಸುತ್ತಿದೆ. ಬಾಲಿವುಡ್‌ಗೆ ದಾವೂದ್‌ ಬೆಂಬಲವಾಗಿ¨ªಾನೆ. ಈ ಮೂಲಕ ವ್ಯವಸ್ಥಿತವಾಗಿ ಹಿಂದೂಗಳನ್ನೇ ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಬಾಲಿವುಡ್‌ ವಿರುದ್ದ ಮುತಾಲಿಕ್‌ ಗುಡುಗಿದರು.

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಪ್ರಮುಖ ರಾದ ಗಂಗಾಧರ್‌ ಕುಲಕರ್ಣಿ, ಆನಂದ್‌ ಶೆಟ್ಟಿ ಅಡ್ಯಾರು, ಹರೀಶ್‌ ಅಧಿಕಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.