ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ: ಅಧಿಕೃತವಾಗಿ ಘೋಷಿಸಿದ ಪ್ರಮೋದ್ ಮುತಾಲಿಕ್
Team Udayavani, Jan 23, 2023, 1:16 PM IST
ಕಾರ್ಕಳ: ಕಳೆದ ಕೆಲವು ತಿಂಗಳಿನಿಂದ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಹಲವು ಸುದ್ದಿಗಳಿಗೆ ಕಾರಣವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇದೀಗ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾರ್ಕಳ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಪ್ರಮೋದ್ ಮುತಾಲಿಕ್ ಸ್ಪರ್ಧೆ ಘೋಷಣೆಯಿಂದ ಕಾರ್ಕಳ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇದೀಗ ತ್ರಿಕೋನ ಸ್ಪರ್ಧೆ ಉಂಟಾಗಿದೆ.
ಕಾರ್ಕಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದರು.
ಇದನ್ನೂ ಓದಿ:ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು
ನಾನು ಬಿಜೆಪಿ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಹಿಂದುತ್ವದ ಪರವಾಗಿದ್ದೇನೆ, ಗೆದ್ದ ನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ಧ, ಭ್ರಷ್ಟರ ವಿರುದ್ದ, ಹಿಂದು ವಿರೋಧಿಗಳ ವಿರುದ್ಧ ಎಂದರು.
ಮುತಾಲಿಕ್ ಸ್ಪರ್ಧೆಯಿಂದ ಕಾಂಗ್ರೆಸ್ ಗೆ ಲಾಭ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆ ಪ್ರಶ್ನೆಯೇ ಇಲ್ಲ. ನಾನು ಎಂದಿಗೂ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದವ. ಇಲ್ಲಿ ನಾನು ಗೆಲ್ಲಬೇಕು, ಹಿಂದುತ್ವ ಗೆಲ್ಲಬೇಕು ಅಷ್ಟೇ ಎಂದರು.
ಉಡುಪಿ ಜಿಲ್ಲೆಯಲ್ಲಿ ಗೋ ಹತ್ಯೆಯಾಗುವ ನಂಬರ್ ಒಂದು ಜಾಗ ಇದ್ದರೆ ಅದು ಕಾರ್ಕಳ ಎನ್ನುತ್ತಿದ್ದಾರೆ. ಇವರಿಗೆ ಗೋ ಮಾತೆಯ ರಕ್ಷಣೆಗಾಗಿ ಅಧಿಕಾರ ಕೊಟ್ಟರೆ ಗೋಮಮಾತೆ ರಕ್ಷಣೆ ಆಗುತ್ತಿಲ್ಲ ಎಂದು ಸಚಿವ ಸುನೀಲ್ ಕುಮಾರ್ ವಿರುದ್ಧ ಟೀಕೆ ಮಾಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.