“ಪ್ರತಿಭೆ ಹೊರಬರಲು ಪ್ರತಿಭಾ ಕಾರಂಜಿ ವೇದಿಕೆ’
Team Udayavani, Sep 7, 2017, 7:25 AM IST
ಉಡುಪಿ: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತರುವಲ್ಲಿ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ವಿದ್ಯಾರ್ಥಿಗಳಿಗೆ ಅಂಕವೇ ಮುಖ್ಯವಲ್ಲ. ಪೋಷಕರು ಈಗಿನ ಮಕ್ಕಳಿಗೆ ಸೋಲಲು ಕೂಡ ಕಳುಹಿಸಬೇಕು. ಆಗ ಮಾತ್ರ ಯಾವ ಸವಾಲನ್ನೂ ಕೂಡ ದಿಟ್ಟವಾಗಿ ಎದುರಿಸುತ್ತಾರೆ ಎಂದು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಡಾ| ಎಚ್. ಶಾಂತರಾಮ್ ಹೇಳಿದರು.
ಜಿ.ಪಂ. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿಯ ನಾರ್ತ್ ಹಾಗೂ ಮಲ್ಪೆ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ವಿಭಾಗದ ಕ್ಲಸ್ಟರ್ ಮಟ್ಟದ ಮುಕುಂದಾ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹನುಮಾನ್ ಗ್ರೂಪ್‌ನ ಮ್ಯಾನೇಜಿಂಗ್ ಡೈರೆಕ್ಟರ್, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಲಾಸ್ ನಾಯಕ್ ಮಾತನಾಡಿ ಪ್ರತಿಭೆ ಎಲ್ಲರಲ್ಲೂ ಇರುತ್ತದೆ. ಆದರೆ ಅದನ್ನು ಹುಡುಕಿ ತೆಗೆಯುವ ಕೆಲಸ ಸಮಾಜದಿಂದ ಆಗಬೇಕಿದೆ ಎಂದರು.
ನಗರಸಭಾ ಸದಸ್ಯ ಶ್ಯಾಂಪ್ರಸಾದ್ ಕುಡ್ವ, ಕ್ಷೇತ್ರ ಸಂಯೋಜನಾಧಿಕಾರಿ ಉಮಾ, ಶಿಕ್ಷಣ ಸಂಯೋಜಕ ಚಂದ್ರ ನಾಯಕ್, ಪ್ರೌಢಶಾಲಾ ಬಿಆರ್‌ಪಿ ಶಿವರಾಮ ಶೆಟ್ಟಿ, ಶಾಲಾ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಅಶೋಕ್ ಕುಮಾರ್, ಸಿಆರ್‌ಪಿ ವಿಜಯಾ ಪೈ, ಸುಮನಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಮುಕ್ತಾ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಉಮಾಮಹೇಶ್ವರಿ ವಂದಿಸಿದರು. ಶಿಕ್ಷಕಿ ಸುಜಾತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.