ಮುನ್ಸೂಚನೆ ನೀಡಿ ಹೆಚ್ಚಿನ ಹಾನಿ ತಪ್ಪಿಸಿ: ಡಿಸಿ

ಜಿಲ್ಲಾ ವಿಪತ್ತು ನಿರ್ವಹಣ ಸಮಿತಿ ಸಭೆ

Team Udayavani, Apr 27, 2022, 12:49 PM IST

predict

ಉಡುಪಿ: ಮಳೆಯಿಂದಾಗುವ ಅತಿವೃಷ್ಟಿ ಸೇರಿದಂತೆ ನೈಸರ್ಗಿಕ ಪ್ರಾಕೃತಿಕ ವಿಕೋಪಗಳು ಉಂಟಾಗುವ ಮುನ್ಸೂಚನೆ ಗಳನ್ನು ಜನರಿಗೆ ಮುಂಚಿತವಾಗಿಯೇ ತಿಳಿಸಿ ಅವುಗಳನ್ನು ಎದುರಿಸುವ ಬಗ್ಗೆ ಅರಿವು ಮೂಡಿಸಿ, ಹಾನಿ ಉಂಟಾಗದಂತೆ ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್‌ ಹಾಲ್‌ನಲ್ಲಿ ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನರಿಗೆ ವಿಕೋಪಗಳನ್ನು ಎದುರಿಸುವ ಹಾಗೂ ಸುರಕ್ಷಿತವಾಗಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಜೀವ, ಆಸ್ತಿ ಹಾಗೂ ಮಾನವ ಸಂಕಷ್ಟವನ್ನು ಕಡಿಮೆಗೊಳಿಸಬೇಕು ಎಂದರು.

ಎಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ಜೋರಾದ ಗಾಳಿ, ಮಳೆಯಿಂದ ಸಾಮಾನ್ಯವಾಗಿ ಮಧ್ಯಾಹ್ನದ ಅನಂತರ ಗುಡುಗು-ಸಿಡಿಲು ಹೆಚ್ಚು ಇದ್ದು, ಗ್ರಾಮಾಂತರ ಪ್ರದೇಶಗಳ ಬಯಲು ಪ್ರದೇಶಗಳಲ್ಲಿ, ಎತ್ತರದ ಮರ ಗಿಡಗಳಿಗೆ ಹೊಡೆಯುತ್ತದೆ. ಪ್ರಸ್ತುತ ಸಾಲಿನಲ್ಲಿ ಸಿಡಿಲು ಹೆಚ್ಚುವ ಸಾಧ್ಯತೆ ಇವೆ. ಈ ಬಗ್ಗೆ ಅಗತ್ಯವಿರುವ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳಿತು ಎಂದರು.

ಆ್ಯಪ್‌ ಸದುಪಯೋಗಿಸಿ

ಸರಕಾರ ಗುಡುಗು ಸಿಡಿಲಿನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ಸಿಡಿಲು ಆ್ಯಪ್‌ ಅಭಿವೃದ್ಧಿ ಪಡಿಸುವುದರೊಂದಿಗೆ ಸ್ಥಳೀಯ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಆಗುವ ಬಗ್ಗೆ ನಿಖರ ಮಾಹಿತಿಯನ್ನು ಒದಗಿಸುತ್ತಿದೆ. ಇದರ ಸದುಪಯೋಗಪಡಿಸಿಕೊಳ್ಳುವುದರೊಂದಿಗೆ ರಕ್ಷಣೆ ಪಡೆಯಬೇಕು ಎಂದರು.

ಅರಿವು ಮೂಡಿಸಿ

ಶಾಲೆಯ ಪ್ರಾರಂಭದ ದಿನಗಳಲ್ಲಿಯೇ ಪ್ರಕೃತಿ ವಿಕೋಪ ಸಂದರ್ಭದಲ್ಲಿ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಅವುಗಳನ್ನು ತಮ್ಮ ನೆರೆ ಹೊರೆ ಹಾಗೂ ಕುಟುಂಬದವರೊಂದಿಗೆ ಹಂಚಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸೂಕ್ತ ತರಬೇತಿ

ಆರೋಗ್ಯ ಇಲಾಖೆಯವರು ಪ್ರಕೃತಿ ವಿಕೋಪದಿಂದ ತೊಂದರೆಗೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡುವ ಕುರಿತು ಪ್ರಾಯೋಗಿಕ ತರಬೇತಿಗಳನ್ನು ಸಂಘ-ಸಂಸ್ಥೆಯವರಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಿ ಅವರ ಮೂಲಕ ಇತರ ಸಾರ್ವಜನಿಕರಿಗೆ ತಲುಪಿಸುವ ಕೆಲಸವಾಗಬೇಕು. ಇವುಗಳಿಂದ ತೊಂದರೆ ಉಂಟಾದವರಿಗೆ ಚಿಕಿತ್ಸೆ ನೀಡಲು ಎಲ್ಲ ರೀತಿಯ ಔಷಧಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು. ಘಟನೆ ಸಂಭವಿಸಿದರೆ ತತ್‌ಕ್ಷಣ ಸಮೀಪದ 108 ಗೆ ಮಾಹಿತಿ ನೀಡುವುದು ಉತ್ತಮ ಎಂದರು.

ಮೆಸ್ಕಾಂ, ಅರಣ್ಯ ಇಲಾಖೆಗೆ ಸೂಚನೆ

ಮೆಸ್ಕಾಂ ಇಲಾಖೆಯವರು ಜೋರಾದ ಮಳೆ, ಗಾಳಿ ಸಂದರ್ಭದಲ್ಲಿ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸುವುದರ ಜತೆಗೆ ಯಾವುದೇ ರೀತಿಯ ವಿದ್ಯುತ್‌ ಅವಘಡಗಳು ಆಗದಂತೆ ಎಚ್ಚರವಹಿಸಬೇಕು. ರಸ್ತೆ ಬದಿಯಲ್ಲಿ ಅಸುರಕ್ಷಿತ ಮರಗಳಿದ್ದಲ್ಲಿ ಅವುಗಳನ್ನು ತೆರವುಗೊಳಿಸುವ ಕಾರ್ಯ ಶೀಘ್ರದಲ್ಲಿ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಂದಾಪುರ ಡಿಎಫ್ಒ ಆಶೀಶ್‌ ರೆಡ್ಡಿ, ಅಪರ ಜಿಲ್ಲಾಧಿಕಾರಿ ವೀಣಾ, ಉಪವಿಭಾಗಾಧಿಕಾರಿ ರಾಜು, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.