Navaratri: ಉಚ್ಚಿಲ ದಸರಾ 2024ಕ್ಕೆ ಸಿದ್ಧತೆ ಪೂರ್ಣ
Team Udayavani, Oct 3, 2024, 12:18 AM IST
ಕಾಪು: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ, ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ. 3ರಿಂದ 12ರ ವರೆಗೆ ಜರಗಲಿರುವ ಉಡುಪಿ ಉಚ್ಚಿಲ ದಸರಾ 2024ಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ.
ಅ. 3ರಂದು ಅಧಿಕೃತ ಚಾಲನೆ: ಅ. 3ರಂದು ಬೆಳಗ್ಗೆ 9.30ಕ್ಕೆ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ನವದುರ್ಗೆಯರು ಮತ್ತು ಶಾರದ ಮಾತೆಯ ವಿಗ್ರಹ ಪ್ರತಿಷ್ಠಾಪನೆ, 10.30ಕ್ಕೆ ಜಿಲ್ಲಾಧಿಕಾರಿ ಸಹಿತ ಗಣ್ಯರು ಉಚ್ಚಿಲ ದಸರಾಕ್ಕೆ ಚಾಲನೆ ನೀಡಲಿದ್ದಾರೆ.
10.45ಕ್ಕೆ ವಸ್ತು ಪ್ರದರ್ಶನ ಉದ್ಘಾಟನೆ, 11 ಗಂಟೆಗೆ ದ.ಕ. ಮೊಗವೀರ ಮಹಾಜನ ಸಂಘದ ಶತಮಾನೋತ್ಸವದ ಸವಿನೆನಪಿನಲ್ಲಿ ನಿರ್ಮಿಸಲಾದ ನವೀಕೃತ ಕಾರ್ಯಾಲಯ ಉದ್ಘಾಟನೆ, ಸಂಜೆ 6.30ಕ್ಕೆ ವಿದ್ಯುತ್ ದೀಪಾಲಂಕಾರ ಉದ್ಘಾಟನೆಗೊಳ್ಳಲಿದೆ.
ಪ್ರತಿದಿನ ಚಂಡಿಕಾ ಹೋಮ, ಅನ್ನಸಂತರ್ಪಣೆ
ಅ. 3ರಿಂದ 12ರ ವರೆಗೆ ಪ್ರತಿದಿನ ಬೆಳಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಭಜನೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾವಿರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀದುರ್ಗಾ ಕಲೊ³àಕ್ತ ಪೂಜೆ, ಪ್ರಸಾದ ವಿತರಣೆ, ಆಕರ್ಷಕ ಲೇಸರ್ ಶೋ ಮತ್ತು ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆಯಲಿವೆ.
ಅ.12ರಂದು ಶೋಭಾಯಾತ್ರೆ
ಅ. 12ರಂದು ಸಂಜೆ ಉಚ್ಚಿಲ – ಎರ್ಮಾಳು – ಉಚ್ಚಿಲ – ಮೂಳೂರು – ಕಾಪುವಿ ವರೆಗೆ ವೈಭವದ ಶೋಭಾಯಾತ್ರೆ ನಡೆದು ಕಾಪು ಲೈಟ್ ಹೌಸ್ ಬಳಿಯ ಕಡಲ ಕಿನಾರೆಯಲ್ಲಿ ಸುಮಂಗಲೆಯರಿಂದ ಮಹಾಮಂಗಳಾರತಿ, ಬೃಹತ್ ಗಂಗಾರತಿ, ಲೇಸರ್ ಶೋ, ಮ್ಯೂಸಿಕಲ್ ನೈಟ್ ಸಹಿತವಾಗಿ ರಾತ್ರಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ನಡೆಯಲಿದೆ.
ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದೊಂದಿಗೆ ನಡೆಯುವ 3ನೇ ವರ್ಷದ ಉಚ್ಚಿಲ ದಸರಾ ಪ್ರಯುಕ್ತ ಅ.3ರಂದು ಸಂಜೆ ನೃತ್ಯ ಸ್ಪರ್ಧೆ, ಅ. 5ರಂದು ಬೆಳಗ್ಗೆ ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಮಧ್ಯಾಹ್ನ ಚಿತ್ರಕಲಾ ಸ್ಪರ್ಧೆ, ಸಂಜೆ ಸಾಮೂಹಿಕ ಕುಣಿತ ಭಜನೆ, ಶ್ರೀ ರಾಮ ಹನುಮಂತ ನೃತ್ಯ ರೂಪಕ, ಅ. 6ರಂದು ಬೆಳಗ್ಗೆ ಕುಸ್ತಿ ಸ್ಪರ್ಧೆ, ಮಧ್ಯಾಹ್ನ ಹೆಣ್ಮಕ್ಕಳ ಹುಲಿಕುಣಿತ ಸ್ಪರ್ಧೆ, ಸಂಜೆ ಸಾಮೂಹಿಕ ದಾಂಡಿಯಾ ನೃತ್ಯ, ವಿಸ್ಮಯ ಜಾದೂ, ಅ. 7ರಂದು ಮಧ್ಯಾಹ್ನ ಮಹಿಳೆಯರಿಗೆ ಮತ್ತು ಪುರುಷರಿಗೆ ರಂಗೋಲಿ ಸ್ಪರ್ಧೆ, ಶತವೀಣಾವಲ್ಲರಿ, ಅ. 10ರಂದು ದೇಹದಾರ್ಢ್ಯ ಸ್ಪರ್ಧೆ, ಅ. 11ರಂದು ಅಜಯ್ ವಾರಿಯರ್ ಮತ್ತು ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.