ಪ್ರಮುಖ ದೇಗುಲಗಳಲ್ಲಿ ಸಾಮೂಹಿಕ ವಿವಾಹಕ್ಕೆ ಪೂರ್ವ ಸಿದ್ಧತಾ ಸಭೆ
Team Udayavani, Jan 25, 2020, 5:23 AM IST
ಉಡುಪಿ: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಎ. 26 ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ದೇವಾಲಯಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎ. 26 ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧುವಿಗೆ ನೀಡಬೇಕಾದ ಒಟ್ಟು 8 ಗ್ರಾಂ. ತೂಕದ ಚಿನ್ನದ ತಾಳಿ ಮತ್ತು ಚಿನ್ನದ ಗುಂಡುಗಳನ್ನು ಖರೀದಿಸಲು ಪಾರದರ್ಶಕ ನಿಯಮದಂತೆ ಟೆಂಡರ್ ಮೂಲಕ ಖರೀದಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸ್ಥಳೀಯ ಸಂಪ್ರದಾಯಕ್ಕೆ ತಕ್ಕಂತೆ ತಾಳಿಯ ಮಾದರಿಯನ್ನು ವಿನ್ಯಾಸಗೊಳಿಸುವಂತೆ ತಿಳಿಸಿದರು. ಸರಬರಾಜು ಮಾಡುವ ಚಿನ್ನವು ಕಡ್ಡಾಯವಾಗಿ 22 ಕ್ಯಾರೆಟ್ (916 ಹಾಲ್ ಮಾರ್ಕ್) ಇರುವ ಬಗ್ಗೆ ದೃಢೀಕರಣ ಪತ್ರ ಪಡೆಯುವಂತೆ ಸೂಚಿಸಿದರು.
ವಿವಾಹ ಸಂದರ್ಭದಲ್ಲಿ ಸಹಾಯಧನ
ಸಾಮೂಹಿಕ ವಿವಾಹ ಕಾರ್ಯಕ್ರಮ ಕುರಿತಂತೆ ದೇವಾಲಯಗಳಲ್ಲಿ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ಸಹಾಯಧನವನ್ನೂ ವಿವಾಹ ಸಂದರ್ಭದಲ್ಲಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಮಾ.27ರವರೆಗೆ ನೋಂದಣಿ
ಎ. 26 ರಂದು ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮಾ.27ರ ವರೆಗೆ ವಧು-ವರರನ್ನು ನೋಂದಾಯಿಸಿಕೊಂಡು, ಎ. 1 ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸ ಬೇಕು. ಈ ಪಟ್ಟಿಗೆ ಎ. 6 ವರೆಗೆ ಆಕ್ಷೇಪ ಸಲ್ಲಿಸಲು ದಿನಾಂಕ ನೀಡಿ, ಅಂತಿಮ ವಧು-ವರರ ಪಟ್ಟಿಯನ್ನು ಎ. ರಂದು ಪ್ರಕಟಿಸುವಂತೆ ತಿಳಿಸಿದರು.
ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ರವಿಕುಮಾರ್, ಇಲಾಖೆ ತಹಶೀಲ್ದಾರ್ ಸುಧಾಕರ್, ಜಿಲ್ಲೆಯಲ್ಲಿ ಸಾಮೂಹಿಕ ವಿವಾಹ ಏರ್ಪಡಿಸುವ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿಗಳು, ಆಡಳಿತಾ ಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.