ಚುನಾವಣೆ ಅಖಾಡಕ್ಕೆ ಜಿಲ್ಲಾದ್ಯಂತ ಸಿದ್ಧತೆ

 154 ಗ್ರಾಮ ಪಂಚಾಯತ್‌ಗಳಲ್ಲಿ ಮತದಾನ

Team Udayavani, Oct 7, 2020, 11:41 AM IST

ಚುನಾವಣೆ ಅಖಾಡಕ್ಕೆ ಜಿಲ್ಲಾದ್ಯಂತ ಸಿದ್ಧತೆ

ಸಾಂದರ್ಭಿಕ ಚಿತ್ರ

ಉಡುಪಿ, ಅ. 6:  ರಾಜ್ಯ ಸರಕಾರ ಗ್ರಾ.ಪಂ. ಚುನಾವಣೆ ನಡೆಸುವಂತೆ ಮುನ್ಸೂಚನೆ ನೀಡಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಸುರಕ್ಷೆ, ಮುಂಜಾಗ್ರತೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಬಹು ಹಂತಗಳಲ್ಲಿ ರಾಜ್ಯದಲ್ಲಿ ಅವಧಿ ಮುಗಿದ ಸುಮಾರು 5,800 ಗ್ರಾಮ ಪಂಚಾಯತ್‌ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ಹಲವು ಪ್ರಕ್ರಿಯೆಗಳ ಮೂಲಕ ಸಿದ್ಧತೆ ಚುರುಕುಗೊಳಿಸಿದೆ.

890 ಮತಗಟ್ಟೆ, 7.93 ಲಕ್ಷ ಮತದಾರರು :

ಪಂಚಾಯತ್‌ ಚುನಾವಣೆಗೆ ಜಿಲ್ಲೆಯಲ್ಲಿ 890 ಮತಗಟ್ಟೆಗಳನ್ನು ಗುರುತಿಸಲಾಗಿದೆ. 3,81,867 ಮಂದಿ ಪುರುಷರು, 4,11,821 ಮಂದಿ ಮಹಿಳೆ ಯರು, ಇತರ 9 ಮಂದಿ ಸಹಿತ ಒಟ್ಟು 7,93,697 ಮಂದಿ ಮತ ಚಲಾಯಿಸಲು ಸಜ್ಜಾಗಿದ್ದಾರೆ.

ಹಂತಗಳಲ್ಲಿ  ಚುನಾವಣೆ :

ಸಾಮಾನ್ಯ ಪರಿಸ್ಥಿತಿಯಲ್ಲಿ ಈ 5,800 ಗ್ರಾ.ಪಂ. ಗಳಿಗೆ 2 ಅಥವಾ 3 ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕುವಾರು ವಿವಿಧ ಹಂತಗಳಲ್ಲಿ ಚುನಾವಣೆ ನಡೆಸುವ ಇರಾದೆ ಹೊಂದಿದೆ. ಅವಧಿ ಮುಗಿದ ಎಲ್ಲ ಗ್ರಾ.ಪಂ.ಗಳಿಗೆ ಜೂ. 26ರಂದು ಆಡಳಿತಾಧಿಕಾರಿಗಳನ್ನು ಸರಕಾರ ನೇಮಕ ಮಾಡಿತ್ತು.

ಇಎಂಎಸ್‌ ತಂತ್ರಾಂಶ  :

ಕೋವಿಡ್‌-19 ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಅಭ್ಯರ್ಥಿ ಚುನಾವಣೆ ಪ್ರಕ್ರಿಯೆ ಸಂಪೂರ್ಣ ತಂತ್ರಾಂಶದಿಂದಲೇ ಕೂಡಿರಲಿದೆ. ಇದಕ್ಕಾಗಿ ಇಎಂಎಸ್‌ (ಎಲೆಕ್ಷನ್‌ ಮಾನಿಟರಿಂಗ್‌ ಸಿಸ್ಟಮ್‌) ಸಾಫ್ಟ್‌ವೇರ್‌ ಅಳವಡಿಸಲಾಗಿದ್ದು ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಹಿಂಪಡೆಯುವಿಕೆ (ಫಾರ್ಮ್ ನಂ. 9, 10), ಅಭ್ಯರ್ಥಿ ಚಿಹ್ನೆ ದಾಖಲೀಕರಣ ಎಲ್ಲವೂ ಆನ್‌ಲೈನ್‌ ಪ್ರಕ್ರಿಯೆಯಾಗಿದೆ. ಚುನಾವಣಾಧಿಕಾರಿ ಲಾಗಿನ್‌ ಹಕ್ಕು ಹೊಂದಿರುತ್ತಾರೆ. ಈ ಹಿಂದೆ ಅಭ್ಯರ್ಥಿ ಚಿಹ್ನೆ ಅಧಿಕೃತಗೊಳ್ಳಲು 3 ದಿನಗಳ  ಪ್ರಕ್ರಿಯೆ ನಡೆಯುತ್ತಿದ್ದು, ಪ್ರಸಕ್ತ ತತ್‌ಕ್ಷಣದಲ್ಲೇ ಲಭ್ಯವಾಗುವಂತೆ ತಂತ್ರಾಂಶ ಸಿದ್ಧಪಡಿಸಲಾಗಿದೆ. ಚುನಾವಣೆಯ ಪ್ರತಿಯೊಂದು ಪ್ರಕ್ರಿಯೆ ಬೆಂಗಳೂರಿನಲ್ಲಿ ಮಾನಿಟರಿಂಗ್‌ ವ್ಯವಸ್ಥೆ ಗೊಳಪಡಿಸಲಾಗುತ್ತದೆ. ಹಿಂದೆ ಫಾರ್ಮ್ ನಂ. 10 ಕೈಯಲ್ಲೆ ಬರೆಯುವ ಪದ್ಧತಿ ಇದ್ದು, ಇದೂ ಈ ಬಾರಿ ತಂತ್ರಾಂಶದಲ್ಲೇ ಬಳಕೆಯಾಗಲಿದೆ.

ಮತಗಟ್ಟೆ  ವಿಭಜಿಸಲು ಸೂಚನೆ  :

ರಾಜ್ಯದಲ್ಲಿ ಈಗ 5,800 ಗ್ರಾ.ಪಂ.ಗಳ 93 ಸಾವಿರಕ್ಕೂ ಹೆಚ್ಚು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಬೇಕಾಗಿದೆ. ಕೋವಿಡ್‌ -19 ಹಿನ್ನೆಲೆಯಲ್ಲಿ 10 ಸಾವಿರ ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಬೇಕಿದೆ. ಇದಕ್ಕಾಗಿ ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ 1,000 ಮತದಾರರು ಇದ್ದಲ್ಲಿ ಅದನ್ನು ಎರಡು ಬೂತ್‌ಗಳಾಗಿ ತಲಾ 500 ರಂತೆ ವಿಭಜಿಸಲು ಸೂಚಿಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ  890 ಮತಗಟ್ಟೆಗಳನ್ನು ಅಂದಾಜಿಸಲಾಗಿದೆ.

ಚುನಾವಣಾಧಿಕಾರಿ ನೇಮಕ : ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ. ತಾ|ಗೆ ಓರ್ವ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ, ಡಾಟಾ ಎಂಟ್ರಿ ಆಪರೇಟರ್‌ ಇದ್ದು, ಒಂದು ಮತಗಟ್ಟೆಗೆ 5 ಮಂದಿ ಸಿಬಂದಿ ನಿಯೋಜಿಸ ಲಾಗುತ್ತದೆ. ಮತಗಟ್ಟೆ ಅಧ್ಯಕ್ಷ ಅಧಿಕಾರಿ-1, ಮೂವರು ಸಿಬಂದಿ, ಸಹಾಯಕರಾಗಿ ಓರ್ವ ಗ್ರೂಪ್‌ “ಡಿ’ ನೌಕರ ನೇಮಕಗೊಳ್ಳಲಿದ್ದಾರೆ.

ಸಿದ್ಧತೆ ಪ್ರಕ್ರಿಯೆ ಆರಂಭ:ಗ್ರಾ.ಪಂ. ಚುನಾವಣೆ ನಿಮಿತ್ತ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆ ಪ್ರಕ್ರಿಯೆಗಳನ್ನು ಮಾಡಲಾಗುತ್ತಿದೆ. ಮತದಾರರು ಹಾಗೂ ಮತಗಟ್ಟೆಯ ವಿವರಗಳನ್ನು ಸಂಗ್ರಹಿಸಲಾಗಿದೆ. ಚುನಾವಣೆ ದಿನಾಂಕ ಯಾವುದೇ ಸಂದರ್ಭದಲ್ಲಿ ಘೋಷಣೆಯಾಗಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಕಲ ತಯಾರಿ ಮಾಡಲಾಗಿದೆ.-ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ

ಪೂರ್ವ ತಯಾರಿ ಆರಂಭ :ಜಿಲ್ಲೆಯ 7 ತಾಲೂಕುಗಳ 154 ಗ್ರಾ.ಪಂ. ಗಳಲ್ಲಿ ಚುನಾವಣೆ ಸಿದ್ಧತೆ ಪ್ರಕ್ರಿಯೆಗಳು ನಡೆಯುತ್ತಿವೆ. ಸರಕಾರ ನೀಡಿದ ಸೂಚನೆಯಂತೆ ಚುನಾವಣ ಶಾಖೆ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಚುನಾವಣೆಗೆ ದಿನ ನಿಗದಿಯೊಂದೇ ಬಾಕಿ ಇರುವಂತೆ ಪೂರ್ವತಯಾರಿ ಪ್ರಕ್ರಿಯೆ ನಡೆಯುತ್ತಿದೆ. ಮತಪೆಟ್ಟಿಗೆ ಜೋಡಣೆ ಮಾಡಿ, ಬಣ್ಣ ಬಳಿಯುವುದು ಸೇರಿದಂತೆ ಅಗತ್ಯ ಪರಿಕರಗಳ ಜೋಡಣೆಯಲ್ಲಿ ತೊಡಗಿದೆ.ಈಗಾಗಲೇ ಚುನಾವಣಾ ಪಟ್ಟಿಗೆ ಹೊಸ ಮತದಾರರ ಸೇರ್ಪಡೆ, ಹೆಸರು ಬದಲಾವಣೆ, ದಾಖಲಾತಿ ತಿದ್ದುಪಡಿಗೆ ಕಡತಗಳನ್ನು ಪರಿಶೀಲಿಸುವ ಪ್ರಕ್ರಿಯೆ ನಡೆಯುತ್ತಿದೆ.

ತಾಲೂಕು            ಗ್ರಾ.ಪಂ. ಮತಗಟ್ಟೆ ಪುರುಷರು            ಮಹಿಳೆಯರು        ಇತರ     ಒಟ್ಟು

ಉಡುಪಿ  16       125      53,101   57,294  4        1,10,399

ಕಾಪು     16       107      45,424 50,411   2        95,837

ಕಾರ್ಕಳ  27       150      62,610  68,648  0        1,31,258

ಕುಂದಾಪುರ       44      210      91,978   98,350  1         1,90,329

ಬ್ರಹ್ಮಾವರ           27       155      66,488  71,750   0        1,38,238

ಬೈಂದೂರು        15       95       42,746  44,802 2        87,550

ಹೆಬ್ರಿ     09       48       19,520  20,566  0        40,086

ಒಟ್ಟು      154       890       3,81,867            4,11,821            9          7,93,697

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.