ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೇಟಿ
Team Udayavani, Jul 24, 2019, 6:46 AM IST
ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಹಲವೆಡೆ ಹಾನಿ ಸಂಭವಿ ಸಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತ್ತು ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್ ಮಂಗಳವಾರ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಹವಾಮಾನ ಇಲಾಖೆ ಮುನ್ಸೂಚನೆ ಯಂತೆ 200 ಮಿ.ಮೀ.ಗೂ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತದಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಬೆಳ್ಳಂಪಳ್ಳಿ, ಕೋಟತಟ್ಟುವಿಗೆ ಭೇಟಿ
ಉಡುಪಿ ತಾಲೂಕು ಬೆಳ್ಳಂಪಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಸೀತಾ ಶೆಡ್ತಿ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ಆಸ್ತಿ ಹಾನಿಯಾಗಿರುವ ಬಗ್ಗೆ ಪರಿಶೀಲನೆ ನಡೆಸಿದರು. ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮದಲ್ಲಿ ಗೋಪಿ ಪೂಜಾರಿ ಅವರ ಮನೆಗೆ ಹಾನಿಯಾಗಿರುವುದನ್ನು ವೀಕ್ಷಿಸಿದರು.
ಗೋಪಾಡಿ ಟ್ಯಾಂಕ್: ಅಸಮಾಧಾನ
ಕುಂದಾಪುರ ತಾಲೂಕು ಗೋಪಾಡಿ ಗ್ರಾಮದಲ್ಲಿ ಅಪಾಯಕಾರಿಯಾಗಿರುವ ಶಿಥಿಲ ನೀರಿನ ಟ್ಯಾಂಕನ್ನು ತೆರವುಗೊಳಿಸದ ಸ್ಥಳೀಯ ಆಡಳಿತ ಮತ್ತು ಪಿಡಿಒ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ಆಡಳಿತಕ್ಕೆ ಮತ್ತು ಪಿಡಿಒಗೆ ನೋಟಿಸ್ ನೀಡುವಂತೆ ತಹಶೀಲ್ದಾರರಿಗೆ ಮೌಖೀಕ ಆದೇಶ ನೀಡಿದರು.
ಹೊಂಬಾಡಿ-ಮಂಡಾಡಿಗೆ ಭೇಟಿ
ಹೊಂಬಾಡಿ- ಮಂಡಾಡಿ ಗ್ರಾಮದ ರುಕ್ಮಿಣಿ ಕುಲಾಲ್ತಿ ಅವರ ಮನೆಗೆ ಹಾನಿ ಯಾಗಿರುವುದನ್ನು ಪರಿಶೀಲಿಸಿದರು. ಸ್ಥಳೀಯರೊಂದಿಗೆ ಸಮಾಲೋಚಿಸಿದರು.
ಕುಂದಾಪುರ ತಹಶೀಲ್ದಾರ್ ತಿಪ್ಪೇಸ್ವಾಮಿ, ರಾಜಸ್ವ ನಿರೀಕ್ಷಕ ಭರತ್ ವಿ. ಶೆಟ್ಟಿ, ಹೊಂಬಾಡಿ-ಮಂಡಾಡಿ ಗ್ರಾಮದ ಗ್ರಾಮ ಲೆಕ್ಕಿಗ ಆನಂದ ಡಿ.ಎಂ., ಗ್ರಾಮ ಸಹಾಯಕ ಭೋಜ, ಕೋಟದಲ್ಲಿ ರಾಜಸ್ವ ನಿರೀಕ್ಷಕ ಚಂದ್ರಹಾಸ ಬಂಗೇರ, ಗ್ರಾಮಲೆಕ್ಕಿಗ ಚೆಲುವರಾಜ್, ಬೆಳ್ಳಂಪಳ್ಳಿಯಲ್ಲಿ ಗ್ರಾಮಲೆಕ್ಕಿಗ ಗುರುಪ್ರಸಾದ್ ಉಪಸ್ಥಿತರಿದ್ದರು. ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆàಕರ್ ಉಡುಪಿಯ ಗುಂಡಿಬೈಲು, ನಿಟ್ಟೂರು ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿದರು.
ಫೋನ್ ಸ್ವಿಚ್ ಆಫ್ ಸಲ್ಲದು
ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕೇಂದ್ರ ಸ್ಥಾನದಲ್ಲೇ ಇರುವಂತೆ ಸೂಚಿಸಲಾಗಿದೆ. ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡದಂತೆ ಮತ್ತು ಹಾನಿ ಕುರಿತು ವರದಿ ಬಂದ ಕೂಡಲೇ ಸ್ಥಳಕ್ಕೆ ತೆರಳಿ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೆಪ್ಸಿಬಾ ತಿಳಿಸಿದರು. ಹಾನಿ ಬಗ್ಗೆ ಅರ್ಜಿದಾರರಿಂದ ಮತ್ತು ಗ್ರಾಮಲೆಕ್ಕಿಗರು ಹಾಗೂ ಗ್ರಾಮ ಸಹಾಯಕರಿಂದ ಮಾಹಿತಿ ಪಡೆದು ಸರಕಾರದಿಂದ ಸೂಕ್ತ ಪರಿಹಾರ ಒದಗಿ ಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ರೆಡ್ ಅಲರ್ಟ್ ಘೋಷಣೆ
ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಈಗಾಗಲೇ ಜು. 24ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕಂಟ್ರೋಲ್ ರೂಮ್ ಸಂಖ್ಯೆ 1077
ತಗ್ಗು ಪ್ರದೇಶದಲ್ಲಿರುವ ಜನ ಎಚ್ಚರಿಕೆಯಿಂದ ಇರುವಂತೆ ಮತ್ತು ತೊಂದರೆಯಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಸಂಖ್ಯೆ 1077 ತುರ್ತು ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.