ಉಡುಪಿಯಲ್ಲಿ ರಾಷ್ಟ್ರಪತಿ:ಶ್ರೀಕೃಷ್ಣನ ದರ್ಶನ,ಆಸ್ಪತ್ರೆಗೆ ಶಿಲಾನ್ಯಾಸ
Team Udayavani, Jun 18, 2017, 3:49 PM IST
ಉಡುಪಿ: ದೇಶದ ಪ್ರಥಮ ಪ್ರಜೆ ಪ್ರಣವ್ ಮುಖರ್ಜಿ ಅವರು ಭಾನುವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಐಎಎಫ್ ವಿಮಾನದಲ್ಲಿ ಆಗಮಿಸಿ ಅಲ್ಲಿಂದ ಐಎಎಫ್ ಹೆಲಿಕಾಪ್ಟರ್ ಮುಖಾಂತರ ಆದಿ ಉಡುಪಿಯ ಹೆಲಿಪ್ಯಾಡ್‌ನಲ್ಲಿ ಬಂದಿಳಿದ ರಾಷ್ಟ್ರಪತಿಗಳಿಗೆ ಜಿಲ್ಲಾ ಉಸ್ತುವಾರ ಸಚಿವ ಪ್ರಮೋದ್ ಮಧ್ವರಾಜ್ ಅವರು ಸ್ವಾಗತ ನೀಡಿದರು. ಆ ಬಳಿಕ ಬನ್ನಂಜೆ ಸರಕಾರಿ ಪ್ರವಾಸಿ ಮಂದಿರಕ್ಕೆ ತೆರಳಿದರು.
ಉಡುಪಿ ಶ್ರೀಕೃಷ್ಣ ಮಠಕ್ಕೆ ತೆರಳಿ ಕೃಷ್ಣ ದರ್ಶನ ಮಾಡಿದರು. ಈ ವೇಳೆ ಪೇಜಾವರ ಶ್ರೀಗಳು ಪ್ರಣವ್ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.
ರಾಜಾಂಗಣದಲ್ಲಿ ಬಿಆರ್‌ಎಸ್ ಹೆಲ್ತ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ವೇಳೆ ಮಾತನಾಡಿದ ಅವರು ಆರೋಗ್ಯವಂತ ಜನರು ಇದ್ದಾಗ ಮಾತ್ರ ಸಧೃಡ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ. ಜನರಿಗೆ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆ ಸಿಗಬೇಕು. ವಿಜ್ಞಾನ, ತಂತ್ರಜ್ಞಾನದಿಂದ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಆಗುತ್ತಿದ್ದು ಇದು ಪ್ರತಿಯೊಬ್ಬರಿಗೂ ದೊರಕಬೇಕು ಎಂದರು.
ಕಾರ್ಯಕ್ರಮದಲ್ಲಿ ಉದ್ಯಮಿ ಬಿ.ಆರ್.ಶೆಟ್ಟಿ, ಸಚಿವ ಕೆ.ಜೆ.ಜಾರ್ಜ್, ರಮೇಶ್‌ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಉಡುಪಿ ನಗರದಲ್ಲಿ ರಾಷ್ಟ್ರಪತಿಗಳು ಸಂಚರಿಸಲಿರುವ ರಸ್ತೆ, ಸ್ಥಳಗಳಲ್ಲಿ ಝಿರೋ ಟ್ರಾಫಿಕ್ ವ್ಯವಸ್ಥೆ ನಿರ್ಮಾಣ ಮಾಡಲಾಗಿತ್ತು.
ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಶನಿವಾರವೇ ಕೃಷ್ಣಮಠದ ರಥಬೀದಿ, ರಾಜಾಂಗಣದ ಹೊರ ಬದಿಯಲ್ಲಿರುವ ಅಂಗಡಿ- ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ವ್ಯಾಪಾರ ವಹಿವಾಟಿಲ್ಲದೆ ಭಣಗುಡುತ್ತಿದ್ದವು.
ಕೊಲ್ಲೂರು ದೇವಸ್ಥಾನಕ್ಕೆ ತೆರಳಿ ಮೂಕಾಂಬಿಕೆಯ ದರ್ಶನ ಪಡೆಯಲಿದ್ದು ಉಡುಪಿ ಕುಂದಾಪುರ ಕೊಲ್ಲೂರಿನ ವರೆಗೂ ಹೆದ್ದಾರಿಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.