ಸಾಂಕ್ರಾಮಿಕ ರೋಗ ತಡೆಗಟ್ಟಿ
Team Udayavani, Aug 22, 2017, 7:50 AM IST
ಉಡುಪಿ/ಮಂಗಳೂರು: ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕೂನ್‌ಗುನ್ಯಾ ಎಚ್1ಎನ್1 ಮುಂತಾದ ಕಾಯಿಲೆಗಳು ಹರಡದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಸಾರ್ವಜನಿಕರು, ಹೊಸ ಕಟ್ಟಡ ನಿರ್ಮಾಣಕಾರರು ಹಾಗೂ ಉದ್ದಿಮೆದಾರರು ಈ ಕೆಳಗಿನ ಸೂಚನೆಗಳನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕಟ್ಟುನಿಟ್ಟಾಗಿ ಪಾಲಿಸಲು ಸರಕಾರ ಸೂಚಿಸಿದೆ.
ಕಟ್ಟಡ/ಮನೆಗಳ ನೀರಿನ ತೊಟ್ಟಿ, ಡ್ರಮ್, ಬಕೆಟ್‌ಗಳಲ್ಲಿರುವ ನೀರನ್ನು ಆಗಾಗ ಬದಲಾಯಿಸಿ ಶುಚಿಗೊಳಿಸಬೇಕು, ನೀರು ಸಂಗ್ರಹ ಪರಿಕರಗಳನ್ನು ಸೊಳ್ಳೆ ಪ್ರವೇಶಿಸದಂತೆ ಭದ್ರವಾಗಿ ಮುಚ್ಚಿಡಬೇಕು, ಮನೆ ಮತ್ತು ಕಟ್ಟಡದ ಪರಿಸರವನ್ನು ಸ್ವಂತ ಜವಾಬ್ದಾರಿಯಿಂದ ಶುಚಿಗೊಳಿಸಬೇಕು ಮತ್ತು ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು, ಹೊಟೇಲ್ ಉದ್ದಿಮೆದಾರರು ಶುಚಿತ್ವದೊಂದಿಗೆ ಸಾರ್ವಜನಿಕರಿಗೆ ಕುಡಿಯಲು ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನು ಮಾತ್ರ ನೀಡಬೇಕು, ಕಾರ್ಮಿಕರಿಗೆ ಮತ್ತು ಲಾಡ್ಜ್ನಲ್ಲಿ ತಂಗುವವರಿಗೆ ಸೊಳ್ಳೆ ಪರದೆ ನೀಡಬೇಕು, ಹೊಟೇಲ್ ಸುತ್ತಮುತ್ತ ನೀರು ನಿಂತಿದ್ದಲ್ಲಿ ವೇಸ್ಟ್ ಆಯಿಲ್ ಸಿಂಪಡಿಸಬೇಕು.
ಮನೆ ಸುತ್ತಮುತ್ತ ಎಸೆದ ಟಯರ್, ತೆಂಗಿನ ಚಿಪ್ಪುಗಳಲ್ಲಿ ಮತ್ತು ಇತರ ತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಜಾಗ್ರತೆ ವಹಿಸಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಕೀಟ ತಡೆಗಟ್ಟುವ ಮೆಶ್/ಪರದೆಗಳನ್ನು ಅಳವಡಿಸಿಕೊಳ್ಳುವುದು, ಸೊಳ್ಳೆ ಕಡಿತದಿಂದ ರಕ್ಷಣೆಗೆ ಮೈತುಂಬಾ ಬಟ್ಟೆ ಧರಿಸುವುದು, ಸೊಳ್ಳೆ ನಿರೋಧಕ ಕ್ರೀಮ್ ಉಪಯೋಗಿಸಬೇಕು ಅಥವಾ ಸೊಳ್ಳೆ ಪರದೆ ಉಪಯೋಗಿಸಬೇಕು.
ನಿರ್ಲಕ್ಷ é ಬೇಡ
ಯಾವುದೇ ಜ್ವರ ಬಂದರೂ ನಿರ್ಲಕ್ಷ é ಮಾಡದೆ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಕಟ್ಟಡ ಕಾಮಗಾರಿ ಕೆಲಸಗಾರರಲ್ಲಿ ಮಲೇರಿಯಾ ಪ್ರಕರಣ ಕಂಡು ಬಂದಲ್ಲಿ ಅಲ್ಲಿ ಸಂಗ್ರಹವಾಗಿರುವ ನೀರು ಮತ್ತು ಕ್ಯೂರಿಂಗ್‌ಗಾಗಿ ನಿಲ್ಲಿಸಿರುವ ನೀರಿಗೆ ಅಬೇಟ್/ವೇಸ್ಟ್ ಆಯಿಲನ್ನು ವಾರಕ್ಕೊಮ್ಮೆ ಸಿಂಪಡಿಸಬೇಕು. ಕೆಲಸಗಾರರಿಗೆ ಸೊಳ್ಳೆ ಪರದೆ ಒದಗಿಸಬೇಕು. ಜ್ವರ ಕಂಡುಬಂದಲ್ಲಿ ತತ್‌ಕ್ಷಣ ಚಿಕಿತ್ಸೆ ಕೊಡಿಸಬೇಕು ಎಂದು ಸೂಚಿಸಲಾಗಿದೆ.
ಹೊಸ ಕಟ್ಟಡ ನಿರ್ಮಾಣಕಾರರು ಕಟ್ಟಡ ನಿರ್ಮಾಣದ ಕಲ್ಲು ಜಲ್ಲಿ ಇತ್ಯಾದಿ ಸಾಮಗ್ರಿಗಳನ್ನು ಮಳೆ ನೀರು ಹರಿಯುವ ರಸ್ತೆ/ಚರಂಡಿಯಲ್ಲಿ ಶೇಖರಿಸಿದ್ದಲ್ಲಿ ತತ್‌ಕ್ಷಣ ತೆರವುಗೊಳಿಸಬೇಕು. ಇದಕ್ಕೆ ಸ್ಪಂದಿಸದಿದ್ದಲ್ಲಿ ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಂಸ್ಥೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.