ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: ವಿಚಾರ ಸಂಕಿರಣ
Team Udayavani, Jun 8, 2019, 6:00 AM IST
ಅಜೆಕಾರು: ತೋಟಗಾರಿಕೆ ಇಲಾಖೆ ಕಾರ್ಕಳ ಹಾಗೂ ಲೀಡ್ ಡಿಸ್ಟ್ರಿಕ್ ಬ್ಯಾಂಕ್ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ಬಿಮಾ ಯೋಜನೆ ಕುರಿತು ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಿತು.
ಜಿ.ಪಂ. ಕೃಷಿ ಹಾಗೂ ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ ಎಸ್. ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ, ಹವಾಮಾನ ವೈಪರೀತ್ಯದಿಂದ ರೈತರು ಬೆಳೆದ ಬೆಳೆ ಕೈಗೆ ಸಿಗದೆ ನಷ್ಟ ಉಂಟಾಗುತ್ತಿದೆ. ಇಂತಹ ಸಂದರ್ಭ ಬೆಳೆವಿಮೆಯಿಂದ ಹೆಚ್ಚಿನ ಅನು ಕೂಲವಾಗಲಿದ್ದು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಕೃಷಿ ಉಪ ನಿರ್ದೇಶಕ ಚಂದ್ರಶೇಖರ್ ಮಾತನಾಡಿ ಭತ್ತ ಬೆಳೆ ಬಗ್ಗೆ ಮಾಹಿತಿ ನೀಡಿ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ ಅನುಷ್ಠಾನದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಸಹಾಯಕ ತೋಟಗಾರಿಕೆ ನಿರ್ದೇ ಶಕರಾದ ನಿಧೀಶ್ ಕೆ.ಜೆ. ಮಾತನಾಡಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ಬ್ರಹ್ಮಾವರ ಕೆವಿಕೆಯ ವಿಜ್ಞಾನಿಗಳಾದ ಡಾ| ಧನಂಜಯ್ ತೋಟಗಾರಿಕೆ ಬೆಳೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಜಿ.ಪಂ. ಸದಸ್ಯರಾದ ಜ್ಯೋತಿ ಹರೀಶ್ ವಹಿಸಿದ್ದರು. ಜಿ.ಪಂ. ಸದಸ್ಯರಾದ ರೇಷ್ಮಾ ಉದಯ ಶೆಟ್ಟಿ, ಎಪಿಎಂಸಿ ನಿರ್ದೇಶಕರಾದ ಮುಟ್ಲುಪಾಡಿ ಸತೀಶ್ ಶೆಟ್ಟಿ, ಲೀಡ್ ಬ್ಯಾಂಕ್ ಮ್ಯಾನೇಜರ್ ರುದ್ರೇಶ್ ಬಿ.ಸಿ. ಉಪಸ್ಥಿತರಿದ್ದರು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಭುವನೇಶ್ವರಿ ಪ್ರಸ್ತಾವನೆಗೈದರು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ್ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ತೋಟಗಾರಿಕೆ ಅಧಿಕಾರಿ ವರುಣ್ ಕೆ.ಜೆ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.