ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ
Team Udayavani, Jul 10, 2019, 5:40 AM IST
ಉಡುಪಿ: ವಿವಿಧ ಬೇಡಿಕೆ ಯನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಹೆಗ್ಡೆ ಮಾತನಾಡಿ, 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ ಸೇವಾ ಬಡ್ತಿ ನೀಡಬೇಕು. ಪ್ರಾ. ಶಾಲಾ ಮುಖ್ಯ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆ ವರೆಗೆ ಬಡ್ತಿ ನೀಡಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲ್ಲಿರುವ ನ್ಯೂನತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯ ಶಿಕ್ಷಕ ಹಾಗೂ ದೈಹಿಕ ಶಿಕ್ಷಕರನ್ನು ಹೊರತು ಪಡಿಸಬೇಕು ಎಂದರು.
ಬೇಡಿಕೆಗಳು
ಪದವಿ ವಿದ್ಯಾರ್ಹತೆ ಹಾಗೂ ಸೇವಾ ಅನುಭವ ಇರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ವೃಂದಕ್ಕೆ ಸೇರಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಯೋಜನೆ ಮುಂದುವರೆಸಬೇಕು. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ 2ನೇ ಭಾಗವಾಗಿ ಅಕ್ಟೋಬರ್‌ನಲ್ಲಿ ಮತ್ತೂಮ್ಮೆ ನಡೆಸಬೇಕು. ಎಲ್ಲ ಪ್ರಾಥಮಿಕ ಶಾಲೆಯಲ್ಲಿ ಎಲ್ಕೆಜಿ ಹಾಗೂ ಯು ಕೆಜಿ ಪ್ರಾರಂಭಿಸಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಸೇವಾ ಸೌಲಭ್ಯಗಳು ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನಕಾರರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜ ಅವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.