ನಿರ್ಭೀತಿಯಿಂದ ಮತ ಚಲಾಯಿಸಿ: ಪ್ರಿಯಾಂಕಾ ಮೇರಿ ಫ್ರಾನ್ಸಿಸ್
Team Udayavani, Apr 15, 2018, 6:00 AM IST
ಸಿದ್ದಾಪುರ: ಮುಂಬರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ನಿರ್ಭೀತಿಯಿಂದ, ಮುಕ್ತವಾಗಿ ಮತ ಚಲಾಯಿಸುವಂತಾಗಲು ಆಯೋಗ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡುತ್ತಿದೆ. ನಕ್ಸಲ್‌ಪೀಡಿತ ಮತಗಟ್ಟೆಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಬಂದೋಬಸ್ತ್ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮತ್ತು ಎಸ್ಪಿ ಲಕ್ಷ್ಮಣ ಬ. ನಿಂಬರಗಿ ಹೇಳಿದರು.
ಅವರು ಶನಿವಾರ ಕುಂದಾಪುರ ತಾಲೂಕಿನ ನಕ್ಸಲ್ ಪೀಡಿತ ಪ್ರದೇಶವಾದ ಹಳ್ಳಿಹೊಳೆ ಗ್ರಾಮದ ಸುಳುಗೋಡು ಶಾಲೆಯಲ್ಲಿ ಮತ ಜಾಗೃತಿ ಸಭೆಯಲ್ಲಿ ಗ್ರಾಮಸ್ಥರ ಸಮಸ್ಯೆ ಹಾಗೂ ಅಹವಾಲು ಆಲಿಸಿ, ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶೇ. 100 ಮತದಾನ ನಿರೀಕ್ಷೆ ಶತ ಪ್ರತಿಶತ ಮತದಾನದ ನಿರೀಕ್ಷೆ ಇರಿಸಿಕೊಳ್ಳಲಾಗಿದ್ದು, ಮತದಾರರು ಯಾವುದೇ ಆಸೆ- ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಆಶಯಕ್ಕೆ ಬದ್ಧರಾಗಿ ಮತದಾನ ಮಾಡಿ ಎಂದು ಕರೆ ನೀಡಿದರು.
ಅಂಗವಿಕಲರು, ಅನಾರೋಗ್ಯ ಪೀಡಿತರು ಹಾಗೂ ವೃದ್ಧರನ್ನು ಮತಗಟ್ಟೆಗೆ ಕರೆತರಲು ಆಯೋಗ ವಾಹನ ವ್ಯವಸ್ಥೆ ಕಲ್ಪಿಸಲಿದೆ. ಅಗತ್ಯ ಇರುವವರು ಸ್ಥಳೀಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತರಬೇಕು. ಪ್ರತಿ ಬೂತ್‌ನಲ್ಲಿ ಗಾಲಿಕುರ್ಚಿ ವ್ಯವಸ್ಥೆ ಮಾಡಲಾಗುತ್ತದೆ. ಎರಡು ಕಿ.ಮೀ.ಗಿಂತ ಹೆಚ್ಚು ದೂರದಿಂದ ಬಂದು ಮತದಾನ ಮಾಡಬೇಕಾದ ಪರಿಸ್ಥಿತಿ ಇರುವ ಪ್ರದೇಶಗಳಲ್ಲಿ ಸ್ಥಳೀಯವಾಗಿ ಬೂತ್ ವ್ಯವಸ್ಥೆ ಮಾಡುವ ವಿಶೇಷ ಅಧಿಕಾರ ಇದೆ ಎಂದರು.
220 ಸೂಕ್ಷ್ಮ ಮತಗಟ್ಟೆ
ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ಮಾತನಾಡಿ, ಜಿಲ್ಲೆಯಲ್ಲಿ 220 ಸೂಕ್ಷ್ಮ ಮತಗಟ್ಟೆಗಳಿದ್ದು, ಸೂಕ್ಷ್ಮ ಹಾಗೂ ಸಾಮಾನ್ಯ ಮತಗಟ್ಟೆಗಳಾಗಿ ವಿಂಗಡಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿಯೂ ಸೂಕ್ತ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರು ಕುಂದಾಪುರ ಮತ್ತು ಬೈಂದೂರು ಕ್ಷೇತ್ರದ ನಕ್ಸಲ್ ಪೀಡಿತ ಪ್ರದೇಶಗಳಾದ ಮಡಾಮಕ್ಕಿ ಗ್ರಾಮದ ಮಾಂಡಿಮೂರುಕೈ, ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆ ಮತ್ತು ಅಮಾಸೆ ಬೈಲು, ಹೊಸಂಗಡಿ, ಹಳ್ಳಿಹೊಳೆ ಗ್ರಾಮದ ಶೆಟ್ಟಿಪಾಲು, ಸುಳುಗೋಡು, ಮುದೂರು ಗ್ರಾಮದ ಉದಯ ನಗರ, ಜಡ್ಕಲ್ ಮತಗಟ್ಟೆಗಳಿಗೆ ಭೇಟಿ ನೀಡಿದರು.
ಅಹವಾಲು ಸಲ್ಲಿಕೆ
ಹಳ್ಳಿಹೊಳೆ ಗ್ರಾಮದಲ್ಲಿ ಎರಡು ಟವರ್ ಇದ್ದರೂ ನೆಟ್‌ವರ್ಕ್ ಇಲ್ಲ, ಹಳ್ಳಿಹೊಳೆ ಗ್ರಾಮ ಬೈಂದೂರಿನಿಂದ ಬೇರ್ಪಡಿಸಿ ಕುಂದಾಪುರ ತಾಲೂಕಿಗೆ ಸೇರ್ಪಡೆ, ಗ್ರಾಮಲೆಕ್ಕಿಗರು ಇಲ್ಲದಿರುವುದು, ಅಕ್ರಮ ಕೆಂಪುಕಲ್ಲು ಕೋರೆ, ಕುಡಿಯುವ ನೀರಿನ ಸಮಸ್ಯೆ, ಬೂತ್ ವಿಂಗಡಣೆಯಲ್ಲಿ ಲೋಪ, ಮರಳು ಸಿಗದಿರುವ ಬಗ್ಗೆ ಗ್ರಾಮಸ್ಥರು ಅಹವಾಲು ಸಲ್ಲಿಸಿದರು. ಡಿವೈಎಸ್‌ಪಿ ದಿನೇಶ್ ಕುಮಾರ್, ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ, ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗಾ, ಶಂಕರನಾರಾಯಣ ಪಿಎಸ್‌ಐ ರಾಘವೇಂದ್ರ ಪಿ., ಅಮಾಸೆಬೈಲು ಪಿಎಸ್‌ಐ ಗಳಾದ ಸುಕುಮಾರ ಕೆ., ಪ್ರಕಾಶ ಕುಮಾರ್, ಹಳ್ಳಿಹೊಳೆ ಗ್ರಾ. ಪಂ. ಪಿಡಿಒ ಸುದರ್ಶನ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ
Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ
Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.