Manipal ಮಹಿಳೆ ಎಂದಿಗೂ ಜೀವಂತಿಕೆಯ ಸಂಕೇತ: ರಶ್ಮಿತಾ ಯುವರಾಜ್‌ ಜೈನ್‌

"ಉದಯವಾಣಿ' ನವರೂಪ ಸ್ಪರ್ಧೆಯ ಬಹುಮಾನ ವಿತರಣೆ

Team Udayavani, Dec 1, 2023, 11:28 PM IST

Manipal ಮಹಿಳೆ ಎಂದಿಗೂ ಜೀವಂತಿಕೆಯ ಸಂಕೇತ: ರಶ್ಮಿತಾ ಯುವರಾಜ್‌ ಜೈನ್‌

ಮಣಿಪಾಲ: ಎಂದೆಂದಿಗೂ ಸಂಭ್ರಮ, ಉಲ್ಲಾಸ, ಜೀವಂತಿಕೆಯ ಸಂಕೇತವಾದ ಸ್ತ್ರೀ ಸಮಾಜದ ಕಣ್ಣು ಎಂದು ಮೂಡುಬಿದಿರೆಯ ಎಕ್ಸಲೆಂಟ್‌ ಪಿಯು ಕಾಲೇಜಿನ ಕಾರ್ಯದರ್ಶಿ ರಶ್ಮಿತಾ ಯುವರಾಜ್‌ ಜೈನ್‌ ಹೇಳಿದರು.

“ಉದಯವಾಣಿ’ಯು ನವರಾತ್ರಿ ಸಂದರ್ಭ ದಲ್ಲಿ ಆಯೋಜಿಸಿದ್ದ ನವರೂಪ ಫೋಟೋ ಸ್ಪರ್ಧೆಯಲ್ಲಿ ಬಂಪರ್‌ ಬಹುಮಾನ ಪಡೆದ ತಂಡಗಳಿಗೆ ಶುಕ್ರವಾರ ಮಣಿಪಾಲದ “ಉದಯವಾಣಿ’ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.

“ಉದಯವಾಣಿ’ಯು ಹಬ್ಬದ ನವೋಲ್ಲಾಸಕ್ಕೆ ನವರೂಪ ನೀಡಿ ಮಹಿಳೆಯರ ಸಂಭ್ರಮವನ್ನು ಹೆಚ್ಚಿಸಿದೆ. ಮಹಿಳೆಯರಿಗೆ ಸೀರೆ ಭೂಷಣವಿದ್ದಂತೆ ಮತ್ತು ಅದು ಸೌಂದರ್ಯ ವನ್ನು ಹೆಚ್ಚಿಸುತ್ತದೆ. ನವರೂಪವು ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಸೀರೆಯುಟ್ಟು ಸಂಭ್ರಮಿಸಲು ಅವಕಾಶ ಕಲ್ಪಿಸಿದೆ. ಆಧುನಿಕ ಜಂಜಾಟದ ಬದುಕಿನಲ್ಲಿ ಉಲ್ಲಾಸ ತುಂಬಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ನ‌ ಎಂಡಿ ಮತ್ತು ಸಿಇಒ ವಿನೋದ್‌ ಕುಮಾರ್‌ ಮಾತನಾಡಿ, 9 ದಿನಗಳಲ್ಲಿ ನವರೂಪದ ಮೂಲಕ 50 ಸಾವಿರಕ್ಕೂ ಅಧಿಕ ರೂಪಗಳು ಕಂಡವು. ನವರೂಪ ಬಾಂಧವ್ಯ ಬೆಸೆಯುವ ಸೇತುವೆ. ಜೀವನದ ಅಮೂಲ್ಯ ಗಳಿಗೆಗಳನ್ನು ಚಿತ್ರಗಳಲ್ಲಿ ಸೆರೆಹಿಡಿದಿ ಟ್ಟುಕೊಳ್ಳಲು ಮರೆಯಬೇಡಿ. ನವರೂಪದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಸಂಪಾದಕ ಅರವಿಂದ ನಾವಡ ನವರೂಪದ ವಿಸ್ತೃತ ಮಾಹಿತಿ ನೀಡಿದರು. ಉಡುಪಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ಭಟ್‌ ಕೊಡವೂರು ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಎಚ್‌ಆರ್‌ ವಿಭಾಗದ ಸೀನಿಯರ್‌ ಮ್ಯಾನೇಜರ್‌ ಉಷಾರಾಣಿ ಕಾಮತ್‌ ವಂದಿಸಿದರು. “ಉದಯವಾಣಿ’ ಉಪಾಧ್ಯಕ್ಷ (ಮ್ಯಾಗಜಿನ್‌ ಮತ್ತು ಸ್ಪೆಷಲ್‌ ಇನಿಶಿಯೇಟಿವ್ಸ್‌) ರಾಮಚಂದ್ರ ಮಿಜಾರು ಸ್ವಾಗತಿಸಿ, ನಿರ್ವಹಿಸಿದರು.

ವಿಜೇತರು
ಮಂಗಳೂರಿನ ಶಾಂತಿ ಮತ್ತು ಗೆಳತಿಯರ ಬಳಗ, ಪುತ್ತೂರಿನ ರಜನಿ ಪ್ರಭು ಮತ್ತು ಗೆಳತಿಯರ ಬಳಗ ಹಾಗೂ ಕಾರ್ಕಳ ತಾಲೂಕಿನ ಮಾಳದ ಶೋಭಾ ಮತ್ತು ಗೆಳತಿಯರ ಬಳಗ ಬಂಪರ್‌ ಬಹುಮಾನ ಪಡೆದುಕೊಂಡಿತು.

ದೇವರ ಕೃಪೆಯಿಂದ ಅದೃಷ್ಟ ನಮ್ಮ ಬಳಗಕ್ಕೆ ಬಂದಿದೆ. ಹಬ್ಬದ ಸಂಭ್ರಮಕ್ಕೆ ನವರೂಪ ಇನ್ನಷ್ಟು ಮೆರುಗು ಕೊಟ್ಟಿದೆ. ಉದಯವಾಣಿ ನಮ್ಮ ನಿತ್ಯದ ಸಂಗಾತಿಯಾಗಿದೆ.
– ಸುಮನಾ ಪ್ರಭು, ಪುತ್ತೂರು

ಬಹುಮಾನದ ಮೊತ್ತದಿಂದ ನಾವು ಸೇವೆ ಸಲ್ಲಿಸುತ್ತಿರುವ ಶಾಲೆಗೆ ಪ್ರಿಂಟರ್‌ ಅನ್ನು ಕೊಡುಗೆಯಾಗಿ ನೀಡಲು ನಿರ್ಧರಿಸಿದ್ದೇವೆ.
– ಪೂರ್ಣಿಮಾ ಶೆಣೈ, ಮಾಳ

ಹೆಣ್ಣೆಂದರೆ ಲವಲವಿಕೆ, ಸಂಭ್ರಮ, ಸಡಗರ. ನವರೂಪವು ನಮ್ಮೊಳಗಿನ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಮಾಡಿದೆ. ಸ್ನೇಹಿತರೆಲ್ಲರನ್ನು ಮತ್ತಷ್ಟು ಹತ್ತಿರ ಮಾಡಿ ಖುಷಿ ಹೆಚ್ಚಿಸಿದೆ.
– ವಿನೀತಾ ಶೆಟ್ಟಿ, ಮಂಗಳೂರು

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.