ಕೊರೊನಾ ಸಾವು: ವಾರದೊಳಗೆ ಪರಿಹಾರ- ಮನೋಜ್ ಜೈನ್
Team Udayavani, Mar 4, 2022, 3:40 AM IST
ಉಡುಪಿ: ಸರಕಾರದ ಯೋಜನೆ, ಕಾರ್ಯ ಕ್ರಮಗಳನ್ನು ವಿಳಂಬವಿಲ್ಲದೆ ಜನರಿಗೆ ತಲುಪಿಸಲು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಕೊರೊನಾ ದಿಂದ ಮೃತಪಟ್ಟವರ ಸಂಖ್ಯೆ ಜಿಲ್ಲೆಯಲ್ಲಿ 1,515 ಇದೆ. 740 ಪ್ರಕರಣಗಳಿಗೆ ಮಾತ್ರ ಪರಿಹಾರ ನೀಡಲಾಗಿದ್ದು, 719 ಪ್ರಕರಣಗಳು ಬಾಕಿ ಉಳಿದಿವೆ. ಗ್ರಾಮಲೆಕ್ಕಿಗರ ಮೂಲಕ ಮಾಹಿತಿ ಕ್ರೋಡೀಕರಿಸಿ, ಏಳು ದಿನಗಳ ಒಳಗೆ ಪರಿಹಾರ ತಲುಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ಮನೋಜ್ ಜೈನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿ.ಪಂ. ಕಚೇರಿಯ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನರ ಆಶೋತ್ತರಗಳನ್ನು ನೆರವೇರಿಸಲು ಸರಕಾರ ರೂಪಿಸಿರುವ ಯೋಜನೆ, ಕಾರ್ಯಕ್ರಮಗಳನ್ನು ಅನು ಷ್ಠಾನಗೊಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಶೇ.100ರಷ್ಟು ಕಾರ್ಯಸಾಧನೆಯ ಜತೆಗೆ ಅನುದಾನ ವಾಪಸು ಹೋಗದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶಿಸಿದರು.
ಬೇಸಗೆಯಲ್ಲಿ ಗ್ರಾಮೀಣ, ನಗರ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿ ಕೊಳ್ಳಬೇಕು. ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಕಂದಾಯ ಇಲಾಖೆಗೆ ಬಂದಿರುವ ಫಾರಂ ನಂ.50/53/ 94 ಸೇರಿದಂತೆ ಮತ್ತಿತರ ಅರ್ಜಿಗಳನ್ನು ಶೀಘ್ರದಲ್ಲಿಯೇ ವಿಲೇವಾರಿ ಮಾಡಬೇಕು. ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗದಿತ ಕಾಲಾ ವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.
ಪ್ರವಾಸೋದ್ಯಮಕ್ಕೆ ಉತ್ತೇಜನ :
ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಇತರ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಯೊಂದಿಗೆ ಹೆಚ್ಚು ಪ್ರವಾಸಿಗರು ಆಗಮಿಸುವಂತೆ ಮಾಡಬೇಕು. ಜಿಲ್ಲೆಯಲ್ಲಿ ಹಲವು ಹಿನ್ನೀರಿನ ಪ್ರದೇಶಗಳಿದ್ದು, ಗೋವಾ ಹಾಗೂ ಕೇರಳವನ್ನು ಮೀರಿಸುವಂತೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂದರು.
ಪ್ರಗತಿ ಕುಂಠಿತ :
ಕೇಂದ್ರ ಸರಕಾರ ಬೀದಿ ಬದಿಗಳ ವ್ಯಾಪಾರಿಗಳಿಗೆ ಆರ್ಥಿಕ ಸವಲತ್ತುಗಳನ್ನು ನೀಡಲು ಪ್ರಧಾನಮಂತ್ರಿ ಎಸ್‌ವಿಎ ನಿಧಿಯ ಅನುಷ್ಠಾನ ಜಿಲ್ಲೆಯ ಇತರ ತಾಲೂಕುಗಳಿಗೆ ಹೋಲಿಸಿದ್ದಲ್ಲಿ ಉಡುಪಿ ನಗರದಲ್ಲಿ ಕುಂಠಿತವಾಗಿದೆ. ಇದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಬೇಕು ಎಂದು ಸೂಚನೆ ನೀಡಿದರು.
ಸ್ಯೋದ್ಯೋಗಕ್ಕೆ ಪ್ರೋತ್ಸಾಹ :
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯ ಅನುದಾನದಲ್ಲಿ ಗ್ರಾ.ಪಂ. ಮಟ್ಟದಲ್ಲಿ ಜನರಿಗೆ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ವಸ್ತುಗಳ ಮಾರಾಟ ಮಳಿಗೆಗಳನ್ನು ತೆರೆಯಲು ಉತ್ತೇಜಿಸುವುದರೊಂದಿಗೆ ಸ್ವಂತ ಉದ್ಯೋಗ ಕೈಗೊಳ್ಳಲು ಅನುವು ಮಾಡಿಕೊಡಬೇಕು ಎಂದರು.
ಪ್ರಗತಿ ಪರಿಶೀಲನ ಸಭೆಗೆ ಸಮರ್ಪಕ ಮಾಹಿತಿ ಒದಗಿಸದ ಕೆಲವು ಇಲಾಖೆಯ ಕಾರ್ಯವೈಖರಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಡಾ| ನವೀನ್ ಭಟ್ ವೈ., ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆ ಮನೆಗೆ ನಲ್ಲಿ ನೀರು :
ನಗರ ಪ್ರದೇಶಗಳಿಗೆ ಮೂಲ ಸೌಕರ್ಯಗಳು ಸೇರಿದಂತೆ ಕುಡಿಯುವ ನೀರನ್ನು ಒದಗಿಸುವ ನಗರೋತ್ಥಾನದ ಎರಡನೇ ಹಂತ ಹಾಗೂ ಅಮೃತ್ ಯೋಜನೆಯ ಅನುದಾನವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದ ಪ್ರತೀ ಮನೆ ಮನೆಗೆ ಕುಡಿಯುವ ನೀರಿನ ನಳವನ್ನು ಒದಗಿಸಲು ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. 24,270 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದ್ದು, ಬಾಕಿ ಉಳಿದ 65,700 ಮನೆಗಳಿಗೆ ಶೀಘ್ರದಲ್ಲಿಯೇ ನಲ್ಲಿ ಸಂಪರ್ಕ ಕಲ್ಪಿಸಲು ಡಿಸಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.