ಡಿಸಿಯಿಂದ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ
ಕುಂಭಾಸಿ ರಾ.ಹೆ. 66 ಬಳಿ ಸರ್ವಿಸ್ ರಸ್ತೆಗಾಗಿ ಡಿಸಿಗೆ ಗ್ರಾ.ಪಂ.ಮನವಿ
Team Udayavani, Aug 15, 2019, 5:24 AM IST
ತೆಕ್ಕಟ್ಟೆ: ಕುಂಭಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾ.ಹೆ.66 ಕುಂಭಾಸಿ-ಕೊರವಡಿ ಕರಾವಳಿ ಗ್ರಾಮೀಣ ಸಂಪರ್ಕಕ್ಕಾಗಿ ಸರ್ವಿಸ್ ರಸ್ತೆ ನಿರ್ಮಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರಿಗೆ ಸಾರ್ವಜನಿಕರ ಪರವಾಗಿ ಕುಂಭಾಸಿ ಗ್ರಾ.ಪಂ. ವತಿಯಿಂದ ಆ. 14ರಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕುಂಭಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀವಾಣಿ ಅಡಿಗ ಮನವಿ ಸಲ್ಲಿಸಿ ಮಾತನಾಡಿ, ಈ ಪರಿಸರದ ಬಸ್ ಹಾಗೂ ಆಟೋ ಚಾಲಕರು ರಾ.ಹೆ.66ರಲ್ಲಿ ವಿರುದ್ಧ ದಿಕ್ಕಿನಿಂದ ಸಾಗಬೇಕಾದ ಅನಿವಾರ್ಯತೆ ಇರುವ ಪರಿಣಾಮ ಪೊಲೀಸರು ವೈಜ್ಞಾನಿಕವಾಗಿ ಚಿಂತನೆ ಮಾಡದೆ ಏಕಾಏಕಿ ದಂಡ ವಿಧಿಸುತ್ತಿದ್ದಾರೆ, ಇದರಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ . ಈ ಸಂಬಂಧ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಉದಯ ವಾಣಿಗೆ ಪ್ರತಿಕ್ರಿಯಿಸಿ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳು ತ್ತೇನೆ. ರಾ.ಹೆ. 66ರಲ್ಲಿ ಈಗಾಗಲೇ ಸೃಷ್ಟಿಯಾಗಿರುವ ಅಪಾಯಕಾರಿ ಗುಂಡಿಗಳನ್ನು ಮುಚ್ಚುವಂತೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರಾದ ರಾಧಾದಾಸ್, ರಾಘವೇಂದ್ರ ಮೊಗವೀರ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.