BJPದುರಾಡಳಿತ ಕೊನೆಗೊಂಡು Congress ಆಡಳಿತದ ಭರವಸೆ ದಿನಗಳು ಸನ್ನಿಹಿತ:Prasadraj Kanchan

ಕಾಂಗ್ರೆಸ್‌ ವಾರ್ಡ್‌, ಪಂಚಾಯತ್‌ ಮಟ್ಟದ ಕಾರ್ಯಕರ್ತರ ಸಭೆ

Team Udayavani, Apr 21, 2023, 12:17 PM IST

BJPದುರಾಡಳಿತ ಕೊನೆಗೊಂಡು Congressಆಡಳಿತದ ಭರವಸೆ ದಿನಗಳು ಸನ್ನಿಹಿತ: Prasadraj Kanchan

ಉಡುಪಿ: ಬಿಜೆಪಿಯ ದುರಾಡಳಿತದಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ, ಪ್ರತಿ ಕ್ಷೇತ್ರದಲ್ಲೂ ಭ್ರಷ್ಟಾಚಾರದ ಪಿಡುಗು ಜನರನ್ನು ಹಿಂಸಿಸುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿಗರ ನಿರ್ಲಜ್ಜತನ ಅಂಕೆ ಮೀರಿದೆ. ಬಿಜೆಪಿ ಆಡಳಿತದ ಕರಾಳ ದಿನಗಳು ಕೊನೆಯಾಗಿ, ಕಾಂಗ್ರೆಸ್‌ ಆಡಳಿತದ ಭರವಸೆಯ ದಿನಗಳು ಸನ್ನಿಹಿತವಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ರಾಜ್‌ ಕಾಂಚನ್‌ ಹೇಳಿದರು.

ಅವರು ಶೆಟ್ಟಿಬೆಟ್ಟು ವಾರ್ಡ್‌ನಲ್ಲಿ ಉಡುಪಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ವಾರ್ಡ್‌ ಹಾಗೂ ಪಂಚಾಯತ್‌ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್‌ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕಾದ ಆವಶ್ಯಕತೆ ಇದ್ದು ಚುನಾವಣೆಯನ್ನು ಹೇಗೆ ಗೆಲ್ಲಬಹುದೆಂಬ ಕುರಿತು ಆಲೋಚಿಸಿ ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಾಗಿದೆ. ನಮ್ಮಲ್ಲಿ ಬಹಳಷ್ಟು ಮಂದಿ ಕಾರ್ಯಕರ್ತರು, ಮತದಾರರಿದ್ದಾರೆ. ಒಬ್ಬ ಕಾರ್ಯಕರ್ತ ಜವಾಬ್ದಾರಿ ಹೊತ್ತು ಇಬ್ಬರು ಮತದಾರರನ್ನು ವಿಶ್ವಾಸಕ್ಕೆ ತರುವಂತಹ ಕೆಲಸ ಮಾಡಬೇಕು ಎಂದರು.

ಪ್ರಸಾದ್‌ ರಂತಹ ಒಳ್ಳೆಯ ಅಭ್ಯರ್ಥಿ ಗೆಲ್ಲಿಸುವ: ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ಮಾತನಾಡಿ, ಕಳೆದ 5 ವರ್ಷಗಳಲ್ಲಿ ಆಡಳಿತ ನಡೆಸಿದ ಬಿಜೆಪಿ ನೀಡಿದ ಭರವಸೆಗೆ ತದ್ವಿರುದ್ದವಾಗಿ ನಡೆದಿದೆ. ಬೆಲೆ ಏರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿದೆ. ಬಿಜೆಪಿ ಆಡಳಿತದ 5 ವರ್ಷದಲ್ಲಿ ಯಾರಾದರೂ ಒಳ್ಳೆಯದಾಗಿದ್ದರೆ ಅದು ಶಾಸಕರು, ಮಂತ್ರಿಗಳೇ ಮಾತ್ರ ಹೊರತು ಜನಸಾಮಾನ್ಯರಲ್ಲ. ಕಾರ್ಯಕರ್ತರು ಮುಂದಿನ 20 ದಿವಸ ಕಾಂಗ್ರೆಸ್‌ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿದರೆ ಮುಂದಿನ 5 ವರ್ಷ ಅವರು ನಮ್ಮ ಪರವಾಗಿ ಇರುತ್ತಾರೆ. ಈ ನಿಟ್ಟಿನಲ್ಲಿ ನಾವು ಉಡುಪಿಯಲ್ಲಿ ಒಳ್ಳೆಯ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದರು.

ಬಿಜೆಪಿಯಿಂದ ಕರಾಳ ದಿನ: ರಾಜ್ಯ ಮಾಧ್ಯಮ ಪ್ರಕೋಷ್ಠದ ಕಾರ್ಯದರ್ಶಿ ಅಮೃತ್‌ ಶೆಣೈ ಮಾತನಾಡಿ, ಯಾರ್ಯಾರ ಹತ್ತಿರ ಯಾರ್ಯಾರದ್ದು ಸಿಡಿ ಇದೆ ಎಂದು ದೇವರಿಗೆ ಗೊತ್ತು. ಬಿಜೆಪಿ ಟಿಕೆಟ್‌ ಘೋಷಣೆ ಮಾಡಲು ಇಷ್ಟು ತಡವಾಗಲೂ ಕಾರಣ ಎಲ್ಲ ಆಕಾಂಕ್ಷಿಗಳಲ್ಲಿ ಒಬ್ಬೊಬ್ಬರದ್ದು ಸಿಡಿ ಇದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಯಾವತ್ತೂ ಬಹುಮತ ಬಂದಿಲ್ಲ. ಆಪರೇಶನ್‌ ಕಮಲ, ಬ್ಲ್ಯಾಕ್‌ ಮೇಲ್‌ ಮೂಲಕ ಶಾಸಕರನ್ನು ಖರೀದಿಸಿ ಸರಕಾರ ಮಾಡುತ್ತಾರೆ. ಕಾಂಗ್ರೆಸ್‌ಗೆ ಪ್ರಸಾದ್‌ ರಾಜ್‌ರಂತಹ ಒಳ್ಳೆಯ ಸಜ್ಜನ ನಾಯಕ ಸಿಕ್ಕಿದ್ದು ನಮ್ಮ ಭಾಗ್ಯ, ಇಂತಹವರನ್ನು ನಾವು ಗೆಲ್ಲಿಸಲೇ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೌಡಿಸಂ ಸೇರಿದಂತೆ ಕರಾಳ ದಿನಗಳನ್ನು ನಾವು ಎದುರಿಸ ಬೇಕಾದೀತು ಎಂದರು.

ಕಾಂಗ್ರೆಸ್‌ ನಾಯಕರಾದ ದಿವಾಕ‌ರ ಕುಂದರ್‌, ದಿನೇಶ್‌ ಪುತ್ರನ್‌, ಮಮತಾ ಶೆಟ್ಟಿ, ಕುಶಲ್‌ ಶೆಟ್ಟಿ, ಧನಂಜಯ್‌ ಕುಂದರ್‌, ಗಣೇಶ್‌ ನೆರ್ಗಿ, ಪ್ರಶಾಂತ್‌ ಪೂಜರಿ, ನಾಸಿರ್‌, ಸುರೇಶ್‌ ಶೆಟ್ಟಿ, ರೋಶನಿ ಓಲಿವರ್‌, ಸುಕೇಶ್‌ ಕುಂದರ್‌ ಮೊದಲಾದವರು ಉಪಸ್ಥಿತರಿದ್ದರು.

ಪ್ರಸಾದರಿಗೆ ವರ‌ಪ್ರಸಾದ ನೀಡಿದ ಕೊರಗಜ್ಜ

ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮ ಕುಕ್ಕುಡೆ ಕೊರಗಜ್ಜ ದೈವಸ್ಥಾನಕ್ಕೆ ಬುಧವಾರ ಉಡುಪಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ಬೇಟಿ ನೀಡಿ ದೈವದ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೈವದ ಎದುರು ಪ್ರಾರ್ಥಿಸಿ ತಮ್ಮ ಮನದಿಂಗಿತವನ್ನು ತೋಡಿಕೊಂಡರು. ತತ್‌ಕ್ಷಣ ದೈವದ ಮೂರ್ತಿಯ ಬಲಬದಿಯ ಹೂವು ಕೆಳಗೆ ಬೀಳುವ ಮೂಲಕ ದೈವಬಲ ಇದೆ ಅಂತ ಕೊರಗಜ್ಜ ತೋರಿಸಿಕೊಟ್ಟಿದ್ದಾನೆ ಎಂದು ಜನರಾಡಿಕೊಳ್ಳುತಿದ್ದಾರೆ.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.