ನೀತಿಸಂಹಿತೆ ಮಿತಿಯೊಳಗೆ ಪ್ರಚಾರ ಕಾರ್ಯ ನಡೆಸಿ
Team Udayavani, Mar 13, 2019, 1:00 AM IST
ಉಡುಪಿ: ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಪ್ರಚಾರ ಕಾರ್ಯ ನಡೆಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಸೂಚನೆ ನೀಡಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಸರಸ್ನೇಹಿ ಪ್ರಚಾರ ಮಾಡಿ
ಪ್ರಚಾರ ಕಾರ್ಯಕ್ಕೆ ಅಗತ್ಯವಿರುವ ಎಲ್ಲ ರೀತಿಯ ಅನುಮತಿಯನ್ನು ಜಿಲ್ಲಾಡಳಿತದಿಂದ ಮುಂಚಿತವಾಗಿ ಪಡೆದುಕೊಳ್ಳಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿಯವರು ಪರಿಸರಸ್ನೇಹಿ ಪ್ರಚಾರ ಸಾಮಗ್ರಿ ಬಳಸುವಂತೆ ಮನವಿ ಮಾಡಿದರು.
ಶೀಘ್ರ ಅನುಮತಿ
ಸೂಕ್ತ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿದರೆ ನಿಗದಿತ ಸಮಯದಲ್ಲಿ ಅನುಮತಿ ದೊರೆಯಲು ಸಾಧ್ಯವಾಗಲಿದೆ. ಶೀಘ್ರ ಅನುಮತಿ ನೀಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಬಿ.ಜೆ.ಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸಿಪಿಐಎಂ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ನಿಷ್ಪಕ್ಷಪಾತ ಕ್ರಮ
ಧಾರ್ಮಿಕ ಸ್ಥಳಗಳಲ್ಲಿಯೂ ನೀತಿ ಸಂಹಿತೆ ಉಲ್ಲಂಘನೆ ಮಾಡಬೇಡಿ. ಪ್ರಚಾರ ಕಾರ್ಯಕ್ಕಾಗಿ ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಎಲ್ಲ ಅನುಮತಿ ಶೀಘ್ರದಲ್ಲಿ ನೀಡಲಾಗುತ್ತದೆ. ಪಕ್ಷಗಳ ನಡುವೆ ಘರ್ಷಣೆಗೆಳಿಗೆ ಅವಕಾಶ ನೀಡಬೇಡಿ. ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಿ. ತಪ್ಪಿತಸ್ಥರ ವಿರುದ್ದ ನಿಷ್ಪಕ್ಷಪಾತವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
-ನಿಶಾ ಜೇಮ್ಸ್, ಎಸ್‌ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.