ಮದ್ಯದಂಗಡಿ ತೆರವಿಗೆ ಮತ್ತೆ ಧರಣಿ
Team Udayavani, Aug 30, 2017, 8:15 AM IST
ಬೆಳ್ಮಣ್: ಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಮುಲ್ಲಡ್ಕ ಅರದಾಳುವಿಗೆ ಸ್ಥಳಾಂತರಗೊಂಡಿರುವ ಮದ್ಯದಂಗಡಿ ಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಸೋಮವಾರ ಮತ್ತೆ ಅರದಾಳು ಪರಿಸರದ ಸಂತ್ರಸ್ತ ಕೊರಗ ಕುಟುಂಬಗಳು ಮುಂಡ್ಕೂರು ಪಂಚಾಯತ್ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಪ್ರತಿಭಟನೆಯ ಕಾವು ಏರುವ ಸೂಚನೆಯಿಂದ ಕಾರ್ಕಳ ಪೊಲೀಸ್ ಅಧಿಕಾರಿಗಳು ಮದ್ಯದಂಗಡಿಗೆ ಬೀಗ ಹಾಕುವಂತೆ ಸೂಚಿಸಿದ್ದಾರೆ.
ಮುಲ್ಲಡ್ಕ ಅರದಾಳು ಪರಿಸರ ಜನವಸತಿ ಪ್ರದೇಶವಾಗಿದ್ದು ಮದ್ಯದಂಗಡಿ ಪಕ್ಕದಲ್ಲೇ ಕೊರಗ ಸಮುದಾಯದ ಜನ ವಾಸಿಸುತ್ತಿದ್ದಾರೆ. ಇದರಿಂದಾಗಿ ಕೊರಗ ಸಮುದಾಯದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ಈ ಮದ್ಯದಂಗಡಿಯನ್ನು ಮುಚ್ಚಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.
ಈ ಹಿಂದೆಯೂ ಪ್ರತಿಭಟನೆ
ಕಳೆದ ಆಗಸ್ಟ್ 7ರಂದು ಮದ್ಯದಂಗಡಿ ಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಪಂಚಾಯತ್ ಎದುರು ಪ್ರತಿಭಟನೆ ನಡೆದಾಗ ಸ್ಥಳಕ್ಕೆ ಆಗಮಿಸಿದ ಕಾರ್ಕಳ ತಹಶೀಲ್ದಾರರು 15 ದಿನದ ಒಳಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರೂ ಇಲ್ಲಿಯ ವರೆಗೆ ಯಾವುದೇ ಬೆಳವಣಿಗೆ ನಡೆದಿಲ್ಲ. ಹಾಗಾಗಿ ನಾವು ಮತ್ತೆ ಧರಣಿ ನಡೆಸುತ್ತಿದ್ದೇವೆ. ಮದ್ಯದಂಗಡಿ ತೆರವು ಆಗುವ ವರೆಗೂ ನಾವು ಧರಣಿ ಕೈ ಬಿಡುವುದಿಲ್ಲ ಎಂದು ಪ್ರತಿಭಟನಕಾರರು ತಿಳಿಸಿದರು.
ಅಹೋರಾತ್ರಿ ಧರಣಿಯ ಬೆದರಿಕೆಗೆ ಬಗ್ಗಿದ ಪೊಲೀಸ್ ಇಲಾಖೆ ಮದ್ಯಂದಂಗಡಿಯಿಂದ ಈ ಭಾಗದ ಜನರಿಗೆ ಹೆಚ್ಚಿನ ತೊಂದರೆಯಾಗುತ್ತಿದ್ದು ಕೂಡಲೇ ಮದ್ಯದಂಗಡಿಯನ್ನು ತೆರವು ಮಾಡಬೇಕು ಇಲ್ಲವಾದಲ್ಲಿ ಆಹೋ ರಾತ್ರಿ ಧರಣಿ ಸತ್ಯಾಗ್ರಹವನ್ನು ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದರಿಂದ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿ ಕಾರಿಗಳು ಮದ್ಯ ದಂಗಡಿಯನ್ನು ಮುಚ್ಚುವಂತೆ ಹೇಳಿದ್ದು ಸೋಮವಾರ ಸಂಜೆ ಮದ್ಯ ದಂಗಡಿಗೆ ಬಾಗಿಲು ಹಾಕಿದ ಬಳಿಕ ಕೊರಗ ಕುಟುಂಬ ಗಳು ಪ್ರತಿಭಟನೆಯನ್ನು ಕೈ ಬಿಟ್ಟರು.
ಈತನ್ಮಧ್ಯೆ ಅಬಕಾರಿ ಇಲಾಖೆ ಹಾಗೂ ಮದ್ಯದಂಗಡಿ ಮಾಲಕರು ಈ ಅಂಗಡಿಯನ್ನು ಕಾನೂನು ಬದ್ಧವಾಗಿಯೇ ಪ್ರಾರಂಭಿಸಲಾಗಿದೆಯೆಂದಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸ್ ಅ ಕಾರಿಗಳು ಭೇಟಿ ನೀಡಿದ್ದು ಗ್ರಾ.ಪಂ. ಅಧ್ಯಕ್ಷೆ ಶುಭಾ ಪಿ ಶೆಟ್ಟಿ, ಪಿಡಿಒ ಶಂಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.