ತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಪ್ರತಿಭಟನೆ
Team Udayavani, Jul 4, 2019, 5:55 AM IST
ಹೆಬ್ರಿ :ಹೆಬ್ರಿಯ ಇಂದಿರಾನಗರ ವಾರ್ಡ್ ಪೊಲೀಸ್ ವಸತಿ ಗೃಹದ ಹತ್ತಿರದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಗ್ರಾಮಸ್ಥರು ಜು.3ರಂದು ಪ್ರತಿಭಟನೆ ನಡೆಸಿದರು.
ಮುಳ್ಳುಂಬ್ರಿ, ರಾಗಿಹಕ್ಲು, ಸೇಳಂಜೆ, ಅಡಾಲ್ಬೆಟ್ಟು, ವಿನೂ ನಗರ ಹಾಗೂ ಮಠದಬೆಟ್ಟುವಿನ ಗ್ರಾಮಸ್ಥರು ಇಂದಿರಾನಗರದಿಂದ ಹೆಬ್ರಿ ತಾಲೂಕು ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮಹೇಶ್ಚಂದ್ರ ಅವರಿಗೆ ಮನವಿ ಸಲ್ಲಿಸಿದರು. ಬಳಿಕ ಹೆಬ್ರಿ ಗ್ರಾ.ಪಂ.ಗೆ ತೆರಳಿ ಅಧ್ಯಕ್ಷ ಹೆಚ್.ಕೆ.ಸುಧಾಕರ ಅವರಿಗೆ ಮನವಿ ಸಲ್ಲಿಸಿದರು.
ಉದ್ದೇಶಿತ ಸ್ಥಳದಲ್ಲಿ ತ್ಯಾಜ್ಯ ನಿರ್ವಹಣೆ ಘಟಕ ನಿರ್ಮಾಣ ಮಾಡುವುದರಿಂದ ತ್ಯಾಜ್ಯ ಕೊಳೆತು ಅಂತರ್ಜಲ ಸೇರುತ್ತದೆ, ಸಮೀಪದಲ್ಲೇ ಸೀತಾನದಿಯೂ ಹರಿಯುವುದರಿಂದ ನೀರು ಕಲ್ಮಷಗೊಂಡು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಘಟಕವನ್ನು ಇಂದಿರಾನಗರ ವಾರ್ಡ್‌ನಿಂದ ಸ್ಥಳಾಂತರಿಸಲು ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭ ಗಣಪತಿ ನಾಯಕ್, ಪ್ರವೀಣ್ ಬಲ್ಲಾಳ್, ಪಂ.ಮಾಜಿ ಸದಸ್ಯ ಕರುಣಾಕರ್ ರಾವ್, ಶ್ರೀಧರ ಹೆಗ್ಡೆ, ಹೆಬ್ರಿ ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ನಾಯ್ಕ, ನಾಗರಾಜ್, ಶ್ರೀಕಾಂತ್ ಹೆಗ್ಡೆ, ಸುನಿಲ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.