ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರಕಾರವನ್ನು ಆಗ್ರಹಿಸಿ ಪ್ರತಿಭಟನೆ
Team Udayavani, Jul 27, 2017, 7:50 AM IST
ಬೈಂದೂರು: ಇಲ್ಲಿನ ಯುವ ಕಾಂಗ್ರೆಸ್ ವತಿಯಿಂದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲು ಕೇಂದ್ರ ಸರಕಾರದ ಅಸಹಕಾರ ವಿರೋಧಿಸಿ ಬೈಂದೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮಹಾದಾಯಿ, ವರಾದ, ಕಳಸ ವಿಷಯದಲ್ಲಿ ರಾಜ್ಯ ರೈತರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಅದೇ ರೀತಿಯಲ್ಲಿ ಭೀಕರ ಬರಗಾಲ ಎದುರಿಸುತ್ತಿರುವ ರಾಜ್ಯ ರೈತರ ಸಾಲವನ್ನು ಕಾಂಗ್ರೆಸ್ ನೇತೃತ್ವ ದ ರಾಜ್ಯ ಸರಕಾರ ಮನ್ನಾ ಮಾಡಿದಂತೆ, ಕೇಂದ್ರ ಸರಕಾರವು ಕೂಡಾ ಎಲ್ಲಾ ರೈತರ ರಾಷ್ಟ್ರೀಕೃತ ಬ್ಯಾಂಕುಗಳ ಸಾಲವನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಬೈಂದೂರು ವಿಶೇಷ ತಹಶೀಲ್ದಾರ್ ಕಚೆೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ತಹಶೀಲ್ದಾರ್ ಕಿರಣ ಗೌರಯ್ಯ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ, ಯಡ್ತರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗರಾಜ್ ಗಾಣಿಗ, ತಾ.ಪಂ. ಸದಸ್ಯ ಜಗದೀಶ್ ದೇವಾಡಿಗ, ಖಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ದೇವಾಡಿಗ, ಯುವ ಕಾಂಗ್ರೆಸ್ ಕಾರ್ಯಕರ್ತರಾದ ಬೆ„ಜೂ ಮುದ್ದೂರು, ಸನತ್ ಬಳೆಗಾರ್, ಕಿಸಾನ್ ರೈತರ ಪ್ರಧಾನ ಕಾರ್ಯದರ್ಶಿ ವೀರಭದ್ರ ಗಾಣಿಗ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.