ಎರಡು ವಾರದಲ್ಲಿ ಎರಡನೇ ಬಾರಿಗೆ ಪ್ರತಿಭಟನೆ !
Team Udayavani, Mar 13, 2018, 6:25 AM IST
ಉಡುಪಿ: ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮಾ.12 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಮತ್ತೂಮ್ಮೆ ಪ್ರತಿಭಟನೆ ನಡೆಸಿದರು. ಇದು ಎರಡು ವಾರಗಳ ಅಂತರದಲ್ಲಿ ಎರಡನೇ ಬಾರಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ನಾಡದೋಣಿ ಮೀನುಗಾರರ ಪ್ರತಿಭಟನೆ.
ಫೆ.26ರಂದು ಸೀಮೆಎಣ್ಣೆಗಾಗಿ ಪಟ್ಟು ಹಿಡಿದಿದ್ದ ಮೀನುಗಾರರು ಅದರಲ್ಲಿ ಭಾಗಶಃ ಯಶಸ್ಸು ಕಂಡಿದ್ದರು. ಮಾರ್ಚ್‌ವರೆಗಿನ ಸೀಮೆಎಣ್ಣೆ ಬಿಡುಗಡೆಗೆ ಸರಕಾರ ಕ್ರಮ ಕೈಗೊಂಡಿತ್ತು. ಆದರೆ ಈ ಬಾರಿ ನಾಡದೋಣಿ ಮೀನುಗಾರರದ್ದು ಎರಡು ಬಲವಾದ ಬೇಡಿಕೆಗಳಿದ್ದವು. ಒಂದನೆಯದು ಮೀನುಗಳ ಸಂತತಿಯೇ ನಾಶವಾಗಿ ಮತ್ಸéಕ್ಷಾಮ ಉಂಟು ಮಾಡ ಲಿರುವ ಅಸಾಂಪ್ರದಾಯಿಕ ಮೀನುಗಾರಿಕೆ ನಿಷೇಧಿಸಬೇಕು ಎಂಬುದು.
ಎರಡನೆಯ ಬೇಡಿಕೆ ಎಪ್ರಿಲ್ ಮತ್ತು ಮೇ ತಿಂಗಳ ಸೀಮೆಎಣ್ಣೆ ಬಿಡುಗಡೆಗೆ ಕ್ರಮ ಕೈಗೊಳ್ಳ ಬೇಕು ಎನ್ನುವುದಾಗಿತ್ತು.
10ಗಂಟೆಗೆ ಪ್ರತಿಭಟನೆ ನಿಗದಿಯಾಗಿತ್ತು. ಕ್ಲಪ್ತ ಸಮಯಕ್ಕೆ ಮೀನುಗಾರರು ತಮ್ಮ ಶಾಂತಿಯುತ ಪ್ರತಿಭಟನೆ ಆರಂಭಿಸಿದರು. ಮೀನುಗಾರಿಕೆಗೆ ರಜೆ ಹಾಕಿ ಹತ್ತಾರು ವಾಹನಗಳಿಂದ ಆಗಮಿಸಿದ್ದ ನೂರಾರು ಮೀನುಗಾರರು ಈ ಬಾರಿ ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. “ಇದು ರಾಜಕೀಯ ರಹಿತವಾದ ಮತ್ತು ನಿಷ್ಪಕ್ಷಪಾತವಾದ ಪ್ರತಿಭಟನೆ. ನಮಗೆ ದೊರೆಯಬೇಕಾಗಿರುವ ಸೌಲಭ್ಯ ದೊರಕಿಸಿಕೊಡಿ. ಹಿಂದಿನಂತೆ ಈಗ ಧಾರಾಳವಾಗಿ ಮೀನು ದೊರೆಯುತ್ತಿಲ್ಲ. ಲಕ್ಷಾಂತರ ರೂ. ಸಾಲ ಮಾಡಿ, ಚಿನ್ನ ಅಡ ವಿಟ್ಟು ಮೀನುಗಾರಿಕೆ ನಡೆಸುತ್ತಿದ್ದೇವೆ. ಮೀನುಗಾರಿಕೆ ಮತ್ತು ಮೀನುಗಾರರನ್ನು ಉಳಿಸಿ’ ಎಂಬ ಒಕ್ಕೊರಲ ದನಿ ಮೀನುಗಾರ ರದ್ದಾಗಿತ್ತು.
ಚುನಾವಣೆ ಕಾರ್ಮೋಡ
ಈ ಬಾರಿ ನಾಡದೋಣಿ ಮೀನುಗಾರರಿಗೆ ಚುನಾವಣೆ ನೀತಿ ಸಂಹಿತೆಯ ಭೀತಿ ಕೂಡ ಆವರಿಸಿದೆ. ಯಾಕೆಂದರೆ ಸರಕಾರ ಕೂಡಲೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂಬರುವ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಲಿದೆ. ಅನಂತರ ಸರಕಾರವೂ ಇಲ್ಲ, ಸೀಮೆಎಣ್ಣೆಯೂ ಇಲ್ಲ ಎಂಬ ಸ್ಥಿತಿ ಸೃಷ್ಟಿಯಾಗಲಿದೆ ಎಂಬ ಆತಂಕ ಅವರದ್ದು. ಎಪ್ರಿಲ್, ಮೇ ತಿಂಗಳ ಸೀಮೆಎಣ್ಣೆ ಬಿಡುಗಡೆಗೆ ಈಗಲೇ ಕ್ರಮ ತೆಗೆದುಕೊಳ್ಳಬೇಕು ಎಂಬ ಒತ್ತಾಯಕ್ಕೆ ಸರ ಕಾರ ಮಣಿಯುವುದೇ ಎಂಬುದನ್ನು ಕಾದು ನೋಡಬೇಕಿದೆ.
ತಾಳ್ಮೆಯಿಂದ ಆಲಿಸಿದ ಡಿ.ಸಿ.
ಪ್ರತಿಭಟನ ಸ್ಥಳಕ್ಕೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಖುದ್ದಾಗಿ ಆಗಮಿಸಿ ಪ್ರತಿಭಟನಾಕಾರರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದರು. ಲೈಟ್ ಫಿಶಿಂಗ್ ನಿಲ್ಲಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಕೂಡ ವಿವರಿಸಿದರು. ಮುಖಂಡರು ಮಾತ್ರವಲ್ಲದೆ ಸಭೆಯಲ್ಲಿದ್ದ ಇತರ ಮೀನುಗಾರರು ಕೂಡ ಜಿಲ್ಲಾಧಿಕಾರಿಯವರಿಗೆ ನೇರವಾಗಿ ತಮ್ಮ ದೂರನ್ನು ಹೇಳಿದರು. ಇದನ್ನು ಕೂಡ ಆಲಿಸಿದ ಜಿಲ್ಲಾಧಿಕಾರಿ ಅವರು ಬಂದರಿನಲ್ಲಿಯೇ ಇಂತಹ ಬೋಟ್‌ಗಳನ್ನು ತಡೆಹಿಡಿಯಲಾಗುವುದು ಎಂದು ಭರವಸೆ ನೀಡಿದರು. ಸಾಮಾನ್ಯವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನಂತರ ಪ್ರತಿಭಟನಕಾರರ ಕೆಲವೇ ಮಂದಿ ಪ್ರತಿನಿಧಿಗಳು ಜಿಲ್ಲಾಧಿಕಾರಿ ಅವರ ಕೊಠಡಿಗೆ ತೆರಳಿ ಮನವಿ ಸಲ್ಲಿಸಬೇಕಾಗಿತ್ತು. ಆದರೆ ಈ ಪ್ರತಿಭಟನೆ ವೇಳೆ ಸ್ವತಃ ಜಿಲ್ಲಾಧಿಕಾರಿ ಅವರೇ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ್ದು ಕೂಡ ವಿಶೇಷವೇ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.