ಸಾಧಕ ಸಹಕಾರಿತ್ರಯರಿಗೆ ಸಾರ್ವಜನಿಕ ಅಭಿನಂದನೆ
Team Udayavani, Dec 26, 2018, 11:40 AM IST
ಉಡುಪಿ; ರಾಜ್ಯದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಉಡುಪಿ ಟೌನ್ ಕೋ -ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ. ಕೃಷ್ಣರಾಜ ಸರಳಾಯ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಸರಳಾ ಬಿ. ಕಾಂಚನ್ ಮತ್ತು ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಪರ್ಯಾಯ ಮಠದಿಂದ ಮತ್ತು ಸಾರ್ವಜನಿಕವಾಗಿ ಅಭಿನಂದಿಸಲಾಯಿತು.
ಈ ಮೂವರೂ ಸಾಧಕರು ಸಹಕಾರ ಕ್ಷೇತ್ರದ ಮೂಲಕ ಜಿಲ್ಲೆಗೆ ಹೆಸರು ತಂದಿದ್ದಾರೆ. ಈ ಸಹಕಾರಿ ರತ್ನರು ಜಿಲ್ಲೆಯ ಹೆಮ್ಮರಗಳಿದ್ದಂತೆ. ಇವರಿಂದ ಇನ್ನಷ್ಟು ಸಮಾಜಸೇವೆ ಸಾರ್ವಜನಿಕರಿಗೆ ದೊರಕು ವಂತಾಗಲೆಂದು ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾರೈಸಿದರು.
ಸಾಧನೆಗೆ ಲಿಂಗಭೇದ, ವಯೋಭೇದವಿಲ್ಲ. ತಾವೂ ಇಂತಹ ಮಹತ್ಕಾರ್ಯಗಳನ್ನು ಸಾಧಿ ಸಲು ಕಿರಿಯ ತಲೆಮಾರಿನವರಿಗೆ ಪ್ರೇರಣೆ ಸಿಗುವಂತಾಗಬೇಕೆಂದು ಸಾಧಕರನ್ನು ಸಮ್ಮಾನಿ ಸುವ ಪರಂಪರೆ ಬೆಳೆದುಬಂದಿದೆ. ಇವರಿಂದ ಪ್ರೇರಣೆ ಕಿರಿಯರು ಪಡೆದು ಸಮಾಜ ಕಟ್ಟುವ ಕೆಲಸಗಳಾಗಲಿ ಎಂದು ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶುಭ ಕೋರಿದರು.
ನಿಸ್ವಾರ್ಥದಿಂದ ಸಾಧನೆ ಮಾಡಿದರೆ ಸಮಾಜ ಗೌರವಿಸುತ್ತದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ ಎಂದು ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದರು.ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಸಹಕಾರಿ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ ಶುಭ ಕೋರಿದರು. ಅಭಿನಂದನೆಗೆ ಸಮ್ಮಾನಿತರು ಕೃತಜ್ಞತೆ ಸಲ್ಲಿಸಿದರು. ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಪದಾಧಿಕಾರಿಗಳಾದ ವಿ.ಜಿ. ಶೆಟ್ಟಿ, ವಸಂತಿ ರಾವ್ ಕೊರಡ್ಕಲ್, ಟಿ.ಜಿ. ಹೆಗ್ಡೆ, ರಂಗನಾಥ ಸಾಮಗ ಉಪಸ್ಥಿತರಿದ್ದರು. ಸಾರ್ವಜನಿಕ ಅಭಿನಂದನ ಸಮಿತಿ ಕಾರ್ಯದರ್ಶಿ ಬಿ.ವಿ. ಲಕ್ಷ್ಮೀನಾರಾಯಣ ಸ್ವಾಗತಿಸಿ, ಜಯಪ್ರಕಾಶ ಕೆದ್ಲಾಯ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.