ಉಡುಪಿ ಜಿಲ್ಲೆಯಲ್ಲಿ 77,722 ಮಕ್ಕಳಿಗೆ ಪೋಲಿಯೋ ಹನಿ: ಜಿಲ್ಲಾಧಿಕಾರಿ
Team Udayavani, Jan 18, 2019, 12:30 AM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಫೆ. 3ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 77,722 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಇದ್ದು, 677 ಬೂತ್‌ಗಳನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ಫೆ. 3ರಂದು ಒಂದೇ ಹಂತದಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದರು.
ಯಾವುದೇ ಮಗು ಪೊಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕಾರ್ಯ ನಿರ್ವಹಿಸುವಂತೆ ಹಾಗೂ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಹೆಚ್ಚಿನ ಗಮನ ಹರಿಸಿ, ಅಲ್ಲಿನ ಮಕ್ಕಳಿಗೆ ಲಸಿಕೆ ನೀಡಬೇಕಾಗಿದೆ. ಎಲ್ಲ ಇಲಾಖೆಗಳು, ಸ್ವಯಂ ಸೇವಾ ಸಂಘಟನೆಗಳು ಕಾರ್ಯಕ್ರಮಕ್ಕೆ ಸೂಕ್ತ ಸಹಕಾರ ನೀಡಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಡಿಎಚ್‌ಒ ಡಾ| ರೋಹಿಣಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಸತೀಶ್ಚಂದ್ರ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.