Udupi: ಪುತ್ತಿಗೆ ‘ವಿಶ್ವ ಗೀತಾ ಪರ್ಯಾಯ’ ಪೂರ್ವಭಾವಿ ಧಾನ್ಯ ಮುಹೂರ್ತ ವೈಭವ

ಪೂಜೆ ಜತೆಗಿರಲಿ ಭಗವಂತನ ಆಂತರಿಕ‌ ಚಿಂತನೆ: ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು

Team Udayavani, Dec 6, 2023, 5:38 PM IST

1-puttige-1

ಉಡುಪಿ: ಶ್ರೀ ಕೃಷ್ಣಮಠದಲ್ಲಿ 2024ರ ಜ. 18ರಂದು ನಡೆಯುವ ಪುತ್ತಿಗೆ ಮಠದ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ “ಧಾನ್ಯ ಮುಹೂರ್ತ’ವು ಶ್ರೀ ಪುತ್ತಿಗೆ ಮಠದ ಆವರಣದಲ್ಲಿ ಬುಧವಾರ ನೆರವೇರಿತು.

ಪ್ರಾತಃಕಾಲ ಪಟ್ಟದ ದೇವರಾದ ಶ್ರೀ ಉಪೇಂದ್ರವಿಠಲ ದೇವರಿಗೆ ಫ‌ಲನ್ಯಾಸಪೂರ್ವಕ ಪ್ರಾರ್ಥನೆ ಸಲ್ಲಿಸಲಾಯಿತು. ಅನಂತರ ಶ್ರೀ ಅನಂತೇಶ್ವರ ದೇಗುಲ, ಶ್ರೀ ಚಂದ್ರಮೌಳೀಶ್ವರ ದೇಗುಲ, ಭೋಜನ ಶಾಲೆಯ ಶ್ರೀ ಮುಖ್ಯಪ್ರಾಣ, ಗರುಡ ದೇವರು, ಶ್ರೀ ಕೃಷ್ಣಮಠಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಾಯಿತು. ಮಧ್ವ ಸರೋವರ, ಗರುಡ ದೇವರು, ಮಧ್ವಾಚಾರ್ಯ ಸಾನ್ನಿಧ್ಯ, ಸರ್ವಜ್ಞ ಪೀಠ, ನಾಗದೇವರ ಸಾನ್ನಿಧ್ಯ, ಬೃಂದಾವನ, ಗೋಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿ, ರಥಬೀದಿಯಲ್ಲಿ ಪ್ರದಕ್ಷಿಣೆ ಬಂದು ಅಷ್ಟಮಠಗಳಿಗೆ ನವಗ್ರಹದಾನ ನಡೆಸಲಾಯಿತು. ರಥಬೀದಿಯಲ್ಲಿ ಚೆಂಡೆ, ವಾದ್ಯ ಸಹಿತ ಮಂತ್ರ ಘೋಷಗಳೊಂದಿಗೆ ಚಿನ್ನದ ಪಲ್ಲಕಿಯಲ್ಲಿ ಅಕ್ಕಿಮುಡಿ ಮೆರವಣಿಗೆ ನಡೆಯಿತು.

ಪುತ್ತಿಗೆ ಮಠಕ್ಕೆ ಮರಳಿ ಬಂದು ತಲೆ ಹೊರೆಯಲ್ಲಿ ಧಾನ್ಯ ಮುಡಿ, ಸ್ವರ್ಣ ಪಲ್ಲಕಿಯಲ್ಲಿ ಕಿರು ಮುಡಿಯಿಟ್ಟು ರಥಬೀದಿಯಲ್ಲಿ ಮೆರವಣಿಗೆ ಬಳಿಕ ಬಡಗುಮಾಳಿಗೆಯ ಗದ್ದುಗೆಯಲ್ಲಿ ನಾಲ್ಕು ಮುಡಿಗಳ ಮೇಲೆ ಕಿರು ಮುಡಿಯಿಟ್ಟು ಪೂಜೆ ಸಲ್ಲಿಸಲಾಯಿತು. ರಾಘವೇಂದ್ರ ಕೊಡಂಚ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು.

ರಾಘವೇಂದ್ರ ತಂತ್ರಿ, ಆನೆಗುಡ್ಡೆ ದೇಗುಲದ ಪ್ರಧಾನ ಅರ್ಚಕ ಶ್ರೀಧರ ಉಪಾಧ್ಯಾಯ, ಭುವನಾಭಿರಾಮ ಉಡುಪ, ಬಿ.ಜಯಕರ ಶೆಟ್ಟಿ ಇಂದ್ರಾಳಿ, ರಂಜನ್‌ ಕಲ್ಕೂರ, ಬಿ. ಗೋಪಾಲಾಚಾರ್ಯ, ಮುರಳೀಧರ ಆಚಾರ್ಯ, ಪ್ರಸನ್ನ ಆಚಾರ್ಯ, ಮಂಜುನಾಥ ಉಪಾಧ್ಯ, ಶ್ರೀನಾಗೇಶ್‌ ಹೆಗ್ಡೆ, ವಿ.ಜಿ. ಶೆಟ್ಟಿ, ಕೆ. ಉದಯ ಕುಮಾರ್‌ ಶೆಟ್ಟಿ, ಅಶೋಕ್‌ ಕುಮಾರ್‌ ಕೊಡವೂರು, ದಿನೇಶ್‌ ಪುತ್ರನ್‌, ಸುಬ್ರಹ್ಮಣ್ಯ ಉಪಾಧ್ಯ, ರಾಘವೇಂದ್ರ ಭಟ್‌, ಮಧ್ವರಮಣ ಆಚಾರ್‌, ವಿ| ಹೆರ್ಗ ಹರಿಪ್ರಸಾದ್‌, ಶ್ರೀಪತಿ ಭಟ್‌ ಮೂಡುಬಿದಿರೆ ಭಾಗವಹಿಸಿದ್ದರು.

ಕಟ್ಟಿಗೆ ರಥಕ್ಕೆ ಶಿಖರ ಇಡಲಾಯಿತು. ಅನಂತರ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀವಿಠಲ ದೇವರ ಮುಂಭಾಗದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಿ ಸ್ವರ್ಣ ಪಲ್ಲಕಿಯಲ್ಲಿ ತರಲಾದ ಅಕ್ಕಿಮುಡಿಗೆ ವಿಶೇಷ ಪೂಜೆ ಸಲ್ಲಿಸಿದರು.

ಆಂತರಿಕ ಭಗವದ್‌ ಚಿಂತನೆ ಅಗತ್ಯ
ತೋರ್ಪಡಿಕೆಯ ಪೂಜೆಗಿಂತ ಪ್ರತಿಯೊಬ್ಬರೂ ಆಂತರಿಕವಾಗಿ ಭಗವದ್‌ ಚಿಂತನೆ ನಡೆಸಬೇಕು. ಭಗವಂತನ ಸೇವೆಯನ್ನು ಯಾವ ರೀತಿ ಮಾಡಿದರೂ ಅದು ಪೂಜೆ ಎನಿಸಲ್ಪಡುತ್ತದೆ. ತಕ್ಕುದಾದ ಪುಣ್ಯ ಫ‌ಲವೂ ಲಭಿಸುತ್ತದೆ. ಪೂಜೆಯ ಸಂಕಲ್ಪ, ಆರಂಭ, ಪಾಲ್ಗೊಳ್ಳುವಿಕೆ, ಸಂಪೂರ್ಣಗೊಳಿಸಿದರೆ ಒಂದೊಂದು ಫ‌ಲ ದೊರಕುತ್ತದೆ. ಭಗವಂತನ ಅನುಗ್ರಹಕ್ಕಾಗಿ ಮಾಡಲ್ಪಡುವ ಪೂಜೆಯಿಂದ ಎಲ್ಲ ಕಾರ್ಯಗಳು ಸಾಂಗವಾಗಿ ನೆರವೇರುತ್ತದೆ ಎಂದು ಶ್ರೀ ಪುತ್ತಿಗೆ ಶ್ರೀಪಾದರು ನುಡಿದರು.

ವಿಶ್ವ ಗೀತಾ ಪರ್ಯಾಯ
ಈ ಬಾರಿಯ “ವಿಶ್ವ ಗೀತಾ ಪರ್ಯಾಯ’ದ ಅಂಗವಾಗಿ 1 ಕೋಟಿ ಭಕ್ತರಿಂದ ಗೀತೆಯನ್ನು ಬರೆಸುವ ಸಂಕಲ್ಪ ಮಾಡಲಾಗಿದೆ. ಅದನ್ನು ಈಡೇರಿಸುವ ಹೊಣೆಗಾರಿಕೆ ಶ್ರೀಕೃಷ್ಣನಿಗೆ ಬಿಟ್ಟದ್ದು. ಜಗತ್ತಿನ ಮೂಲೆ ಮೂಲೆಯಲ್ಲೂ ಗೀತಾ ಪ್ರಚಾರ ಕೈಗೊಳ್ಳಲಾಗಿದೆ. ಗೀತೆಯನ್ನು ಓದುವುದರಿಂದ ಜೀವನದಲ್ಲಿ ಬರಬಹುದಾದ ಸವಾಲುಗಳನ್ನು ಲೀಲಾಜಾಲವಾಗಿ ಎದುರಿಸುವ ಶಕ್ತಿ ಲಭಿಸಲಿದೆ ಎಂದರು.

ದೇವರು-ಭಕ್ತರ ಸೇವೆಗೆ ಅವಕಾಶ
ಈ ಬಾರಿಯ ಪರ್ಯಾಯದಲ್ಲಿ ದೇವರ ಸೇವೆಯ ಜತೆಗೆ ಭಕ್ತರ ಸೇವೆಯ ಅವಕಾಶ ಉಡುಪಿ ಜನರಿಗೆ ಒದಗಿ ಬಂದಿದೆ. ಜೀವನ ಕ್ಷಣಿಕ, ಹೀಗಾಗಿ ಅಮೆರಿಕದಲ್ಲಿ ತೆರೆದಿಟ್ಟ ಅಂಗಡಿಗಳನ್ನು ಬ್ಲ್ಯಾಕ್‌ ಫ್ರೈಡೇ ದಿನ ಸೂರೆ ಮಾಡುವಂತೆ (ಪರ್ಯಾಯ ಪೀಠದಿಂದ ಇಳಿಯುವ ಮಠದ ಕೊನೆಯ ದಿನವೂ ಸೂರೆ ಸಂಪ್ರದಾಯವಿದೆ) ಹೀಗಾಗಿ ದೇವರ ಸೇವೆ ಮಾಡಲು ಒದಗಿ ಬಂದ ಅವಕಾಶವನ್ನು ಬಿಡದೆ ಮಾಡಬೇಕು. 1 ಲಕ್ಷ ಭಕ್ತರಿಗೆ ಆಮಂತ್ರಣ ಪತ್ರಿಕೆ ವಿತರಿಸುವ ಗುರಿ ಹೊಂದಲಾಗಿದ್ದು, ಇದು ಶ್ರೀಕೃಷ್ಣನಿಂದ ಬಂದ ಅನುಗ್ರಹ ಪತ್ರ ಎನ್ನುವ ನೆಲೆಯಲ್ಲಿ ಎಲ್ಲರೂ ಪರ್ಯಾಯದಲ್ಲಿ ಭಾಗವಹಿಸಲು ತಿಳಿಸಿದರು.

ಸಮೃದ್ಧಿ-ಸುಭೀಕ್ಷೆಯಾಗಲಿ
ಸ್ವಾಗತ ಸಮಿತಿ ಗೌರವಾಧ್ಯಕ್ಷ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಎರಡು ವರ್ಷಗಳ ಕಾಲ ಉಳಿಯಬಲ್ಲ ಧಾನ್ಯಗಳು, ಅಕ್ಕಿಯನ್ನು ಭಕ್ತರು ನೀಡುವ ಮೂಲಕ ಪರ್ಯಾಯವನ್ನು ಯಶಸ್ವಿಗೊಳಿಸಬೇಕಾಗಿದೆ. ರಾಜ್ಯ, ರಾಷ್ಟ್ರ ಸಮೃದ್ಧಿಯೊಂದಿಗೆ ಸುಭೀಕ್ಷೆಯಾಗಲಿ ಎಂಬ ಸಂಕಲ್ಪ ತೊಡಬೇಕಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸದಸ್ಯರು ಸಕ್ರಿಯರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಅಧ್ಯಕ್ಷ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು, ಪರ್ಯಾಯವನ್ನು ಯಶಸ್ವಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಯುತ್ತಿದೆ ಎಂದರು.

ಭಕ್ತರಿಗೆ ಮನೆ ಆತಿಥ್ಯ
ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ. ರಘುಪತಿ ಭಟ್‌ ಪ್ರಾಸ್ತಾವಿಕ ಮಾತನಾಡಿ, ಪರ್ಯಾಯ ಮಹೋತ್ಸವವನ್ನು ನಾಡಹಬ್ಬವಾಗಿ ಆಚರಿಸುವ ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳ ಅಲಂಕಾರಕ್ಕೆ ಒತ್ತು ನೀಡಲಾಗುವುದು. ದೂರದೂರಿನಿಂದ ಬರುವ ಭಕ್ತರನ್ನು ತಮ್ಮ ಮನೆಗಳಲ್ಲಿ ಇರಿಸಿಕೊಂಡು ಅತಿಥಿ ಸತ್ಕಾರ ಮಾಡಲು ಮಠದ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಜ.8ರಂದು ಶ್ರೀಗಳ ಪುರಪ್ರವೇಶ ಬಳಿಕದ ಪೌರ ಸಮ್ಮಾನವೂ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಆನೆಗುಡ್ಡೆ ಶ್ರೀ ಸಿದ್ಧಿವಿನಾಯಕ ದೇಗುಲದ ಸೂರ್ಯನಾರಾಯಣ ಉಪಾಧ್ಯ, ಶ್ರೀರಮಣ ಉಪಾಧ್ಯ, ಕರ್ಣಾಟಕ ಬ್ಯಾಂಕ್‌ನ ನಿರ್ದೇಶಕ ಬಾಲಕೃಷ್ಣ ಅಲ್ಸೆ, ಭುವನೇಂದ್ರ ಕಿದಿಯೂರು, ಪುರುಷೋತ್ತಮ ಪಿ. ಶೆಟ್ಟಿ, ಉದ್ಯಮಿ ಪ್ರಸಾದರಾಜ್‌ ಕಾಂಚನ್‌, ಪೌರಾಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಸಹಿತ ಗಣ್ಯರು ಉಪಸ್ಥಿತರಿದ್ದರು.

ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಅಷ್ಟಮಠದ ಪ್ರತಿನಿಧಿಗಳು, ವೈದಿಕರು, ಶ್ರೀಪಾದರ ಅಭಿಮಾನಿಗಳು, ಶಿಷ್ಯರು ಭಾಗವಹಿಸಿದ್ದರು. ಮಠದ ದಿವಾನ ನಾಗರಾಜ ಆಚಾರ್ಯ ಸ್ವಾಗತಿಸಿದರು. ರಮೇಶ್‌ ಭಟ್‌ ಕೆ. ನಿರೂಪಿಸಿದರು. ಡಾ| ಬೆಳಪು ದೇವಿಪ್ರಸಾದ ಶೆಟ್ಟಿ ವಂದಿಸಿದರು.

ಆಮಂತ್ರಣ ಪತ್ರಿಕೆ ಅನಾವರಣ
ವಿಶ್ವ ಗೀತಾ ಪರ್ಯಾಯದ ಕನ್ನಡ ಆವೃತ್ತಿಯನ್ನು ಪುತ್ತಿಗೆ ಶ್ರೀಪಾದರು, ಆಂಗ್ಲ ಆವೃತ್ತಿಯನ್ನು ವೀರೇಂದ್ರ ಹೆಗ್ಗಡೆ ಅನಾವರಣಗೊಳಿಸಿದರು. ಡಾ| ಅರ್ಚನಾ ನಂದಕುಮಾರ್‌ ರಚಿತ ಕೃತಿಯನ್ನು ಯೂಟ್ಯೂಬ್‌ ಮೂಲಕ ಶ್ರೀಪಾದರು ಬಿಡುಗಡೆ ಮಾಡಿದರು. ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರೀ ದೇಗುಲದ ಅಧ್ಯಕ್ಷ ರಾಘವೇಂದ್ರ ಭಟ್‌ ಅವರಿಗೆ ಹಸುರು ಹೊರೆ ಕಾಣಿಕೆಯ ಬ್ಯಾನರ್‌ ಅನ್ನು ಶ್ರೀಪಾದರು ಹಸ್ತಾಂತರಿಸಿದರು.

ಏನಿದು ಧಾನ್ಯ ಮುಹೂರ್ತ?
ಎರಡು ವರ್ಷಗಳ ಕಾಲ ನಡೆಯಲಿರುವ ಶ್ರೀ ಪುತ್ತಿಗೆ ಪರ್ಯಾಯ ಸಂದರ್ಭ ಮಠಕ್ಕೆ ಆಗಮಿಸಲಿರುವ ಭಕ್ತರಿಗೆ ನಿತ್ಯ ನಿರಂತರ ಅನ್ನದಾನ ನೆರವೇರಿಸುವ ನೆಲೆಯಲ್ಲಿ ಮಾಡಲ್ಪಡುವ ಧಾನ್ಯ ಸಂಗ್ರಹವೇ “ಧಾನ್ಯ ಮುಹೂರ್ತ’.

ನವಧಾನ್ಯ ಸಮರ್ಪಣೆ
ಪುತ್ತಿಗೆ ಶ್ರೀಪಾದರು ಮತ್ತು ಡಿ. ವೀರೇಂದ್ರ ಹೆಗ್ಗಡೆಯವರು ನವಧಾನ್ಯಗಳ ಸಮರ್ಪಣೆಗೆ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು. ಅನಂತರ ಧಾನ್ಯ ಮುಡಿಗಳ ನಡುವೆ ಪೀಠಾಸೀನರಾಗಿದ್ದ ಪುತ್ತಿಗೆ ಶ್ರೀಪಾದರ ಮಾರ್ಗದರ್ಶನದಲ್ಲಿ ನವಗ್ರಹ ಚಿಂತನೆಯಿಂದ ಅತಿಥಿಗಳು ತಟ್ಟೆಗೆ ನವಧಾನ್ಯ ಸಮರ್ಪಿಸಿ ನವಗ್ರಹ ಚಿಂತನೆಯೊಂದಿಗೆ ಶ್ರೀಕೃಷ್ಣ ಮುಖ್ಯಪ್ರಾಣರಿಗೆ ಸಮರ್ಪಿಸಲಾಯಿತು. ಶ್ರೀಧರ ಉಪಾಧ್ಯ ನವಗ್ರಹ ಸ್ತೋತ್ರ ಪಠಿಸಿದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.