ಕಡಲ್ಕೊರೆತ ಸಮಸ್ಯೆ ಪರಿಹಾರಕ್ಕೆ ಸಿಎಂ ಬೊಮ್ಮಾಯಿ ಭರವಸೆ
ಶಾಶ್ವತ ಯೋಜನೆಗೆ ಶೀಘ್ರ ಡಿಪಿಆರ್, ತಾತ್ಕಾಲಿಕ ಕ್ರಮಕ್ಕೆ ಅನುದಾನ
Team Udayavani, Jul 14, 2022, 1:43 AM IST
ಉಡುಪಿ: ಕರಾವಳಿಯ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶೀಘ್ರವೇ ವಿಸ್ತೃತ ಯೋಜನೆ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತದೆ. ತಾತ್ಕಾಲಿಕ ಪರಿಹಾರ ಕಾರ್ಯಕ್ರಮಕ್ಕೆ ಜಿಲ್ಲಾಡಳಿತಕ್ಕೆ ಪ್ರತೀ ವರ್ಷ ವಿಶೇಷ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಪರಿಣಾಮ ಕಾರಿ ಯಾಗಿ ಕೆಲಸ ಮಾಡಿದ್ದರೂ ಕಡಲ್ಕೊರೆತ ನಿಂತಿಲ್ಲ. ಎಡಿಬಿ ಯೋಜನೆಯಡಿ 300 ಕೋಟಿ ರೂ. ವೆಚ್ಚ ಮಾಡಿದೆ. 330 ಕಿ.ಮೀ. ಕಡಲ ತೀರದಲ್ಲಿ ಕಡಲ್ಕೊರೆತ ತಡೆಗೆ ಎಡಿಬಿ ಮಾಡಿರುವ ಕಾರ್ಯದಲ್ಲೂ ಲೋಪ ದೋಷ ಆಗಿದೆ. ಒಟ್ಟಾರೆ ಯಾಗಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸೀ ವೇವ್ ಬ್ರೇಕರ್ ಹೊಸ ತಂತ್ರ ಜ್ಞಾನ ವನ್ನು ಮಂಗಳೂರಿನ ಉಳ್ಳಾಲ ಭಾಗದಲ್ಲಿ ಒಂದು ಕಿ.ಮೀ.ಗೆ ಪ್ರಾಯೋಗಿಕವಾಗಿ ಅಳ ವಡಿಸ ಲಾಗುವುದು. ಅದು ಯಶಸ್ವಿಯಾದರೆ ಇಡೀ ಕರಾವಳಿ ಭಾಗದಲ್ಲಿ ಅನುಷ್ಠಾನಕ್ಕೆ ತರುವ ಚಿಂತನೆಯಿದೆ ಎಂದರು.
ಶಾಶ್ವತ ಪರಿಹಾರ ಸಂಬಂಧ ಉನ್ನತ ಮಟ್ಟದ ಶಾಶ್ವತ ಸಮಿತಿ ರಚಿಸಲಾಗುವುದು. ಸಂಪೂರ್ಣ ಕರಾವಳಿಯ ಡಿಪಿಆರ್ ಸಿದ್ಧಪಡಿಸಿ ಬಾಹ್ಯ ಏಜೆನ್ಸಿಯ ಹಣಕಾಸಿನ ನೆರವಿನಿಂದ ಯೋಜನೆ ಕಾರ್ಯ ರೂಪಕ್ಕೆ ತರಲು ತೀರ್ಮಾನ ಮಾಡಲಾಗುವುದು. ಡಿಪಿಆರ್‌ಗೆ ಅಗತ್ಯವಿರುವ ಅನುದಾನ ಕೂಡಲೇ ಬಿಡುಗಡೆ ಮಾಡಲಾಗುವುದು. ಎರಡು ಅಥವಾ ಮೂರು ತಿಂಗಳಲ್ಲಿ ವಿಸ್ತೃತ ಅಧ್ಯಯನವಾದ ಅನಂತರ ಹಣಕಾಸಿನ ವ್ಯವಸ್ಥೆಗೆ ತೀರ್ಮಾನ ಮಾಡಲಾಗುವುದು ಎಂದರು.
ಜಿಲ್ಲಾಡಳಿತಕ್ಕೆ ಅನುದಾನ
ಕಡಲ್ಕೊರೆತ ತಡೆಗೆ ತತ್‌ಕ್ಷಣ ಕಾಮ ಗಾರಿಗೆ ಹಣವನ್ನು ಎಸ್‌ಡಿಆರ್‌ಎಫ್ ಅಡಿಯಲ್ಲಿ ಜಿಲ್ಲಾಡಳಿತಕ್ಕೆ ಒದಗಿಸಲಾಗುವುದು. ಶಾಶ್ವತ ಯೋಜನೆಯ ಜತೆಗೆ ತಾತ್ಕಾಲಿಕ ಕಾರ್ಯಕ್ರಮಗಳು ಬೇಕಾಗುತ್ತವೆ. ಪ್ರತೀ ವರ್ಷ ಆಗುವ ಕಡಲ ಕೊರೆತ ತಡೆಯಲು ಜಿಲ್ಲಾಧಿಕಾರಿಗಳ ಹಂತದಲ್ಲಿ ಕೆಲವು ಕಾರ್ಯಕ್ರಮಗಳನ್ನು ನಿರಂತರ ವಾಗಿ ರೂಪಿಸಬೇಕು. ಇದಕ್ಕೆ ವಿಶೇಷ ಅನುದಾನ ಒದಗಿಸಲಾಗುವುದು. ಸಣ್ಣ ಪ್ರಮಾಣದ ಕೆಲಸಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗು ವುದು ಎಂದು ತಿಳಿಸಿದರು.
ಮರವಂತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ
ಕುಂದಾಪುರ: ಮರವಂತೆಯಲ್ಲಿ ಕಡಲ್ಕೊರೆತದಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದ್ದು, ಸಾಕಷ್ಟು ಹಾನಿಯಾಗಿದೆ. ಇನ್ನಷ್ಟು ತೀರ ಪ್ರದೇಶ ಕುಸಿಯದಂತೆ ತುರ್ತು ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು. ಶಾಶ್ವತ ಯೋಜನೆಗೆ ಹೊಸ ತಂತ್ರಜ್ಞಾನ ಮಾದರಿ ಅನುಷ್ಠಾನ ಸಂಬಂಧ ಡಿಪಿಆರ್ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಅವರು ಬುಧವಾರ ಬೈಂದೂರು ತಾಲೂಕಿನ ಮರವಂತೆಯ ಕರಾವಳಿ ಭಾಗದಲ್ಲಿ ಕಡಲ್ಕೊರೆತದಿಂದ ಹಾನಿಗೀಡಾದ ಪ್ರದೇಶವನ್ನು ವೀಕ್ಷಿಸಿ ಪತ್ರಕರ್ತ ರೊಂದಿಗೆ ಮಾತನಾಡಿದರು.
ಅಕ್ರಮ ನಡೆದಿದ್ದರೆ ಕ್ರಮ
ಮರವಂತೆ ಸಹಿತ ಕರಾವಳಿ ತೀರದುದ್ದಕ್ಕೂ ಈ ಹಿಂದೆ ನಡೆದಿದ್ದ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಿಸದಿರುವ ಬಗ್ಗೆ ದೂರು ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ, ಅಕ್ರಮ ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ನಡೆಸಿದ ಕಡಲ್ಕೊರೆತ ತುರ್ತು ಕಾಮಗಾರಿಯ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು.
ಶೀಘ್ರ ಬಿಡುಗಡೆ
ಮರವಂತೆಯ ಮೀನುಗಾರಿಕೆ ಹೊರ ಬಂದರಿನ ಎರಡನೇ ಹಂತದ ಅಭಿವೃದ್ಧಿಗೆ ಮಂಜೂರಾಗಿರುವ 84 ಕೋಟಿ ರೂ. ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಶೀಘ್ರ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ನಡೆಸಲು ಆದೇಶಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.
ಸಚಿವರಾದ ಆರ್. ಅಶೋಕ್, ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕುಂದಾಪುರ ಎಸಿ ಕೆ. ರಾಜು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಮೀನುಗಾರರ
ಅಹವಾಲು ಆಲಿಸಿದ ಸಿಎಂ
ಮರವಂತೆಗೆ ಬರುತ್ತಿದ್ದಂತೆ ಜಮಾಯಿಸಿದ್ದ ನೂರಾರು ಮಂದಿ ಮೀನುಗಾರರ ಬಳಿಗೆ ತೆರಳಿದ ಮುಖ್ಯಮಂತ್ರಿಗಳು ಅಲ್ಲಿನ ಸಂಕಷ್ಟ, ಅಹವಾಲುಗಳನ್ನು ಆಲಿಸಿದರು. ಪ್ರತೀ ವರ್ಷ ಕಡಲ್ಕೊರೆತದಿಂದಾಗಿ ಈ ಭಾಗದ ಜನರ ಜೀವನ ಕಂಗೆಟ್ಟಿದೆ. ಈ ಪರಿಸರ ಬಿಟ್ಟು ಹೋಗಲು ಸಾಧ್ಯವಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ, ನಮಗೆ ಬದುಕಲು ಬಿಡಿ ಎಂದು ತೀರದ ವಾಸಿಗಳು ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.