ಬಿಜೆಪಿಗರು ಸುಳ್ಳಿನಲ್ಲಿ ನಿಸ್ಸೀಮರು: ಧ್ರುವನಾರಾಯಣ
Team Udayavani, Nov 26, 2021, 6:21 AM IST
ಉಡುಪಿ: ಸಬ್‌ಕಾ ಸಾಥ್-ಸಬ್‌ಕಾ ವಿಕಾಸ್ ಬಿಜೆಪಿಯ ಘೋಷಣೆ ಮಾತ್ರ. ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ದಲಿತರಿಗೆ, ಅಲ್ಪಸಂಖ್ಯಾಕರಿಗೆ ಅವಕಾ ಶವೇ ನೀಡಿಲ್ಲ. ಸುಳ್ಳು ಹೇಳುವು ದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 25 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಜಾತ್ಯತೀತ ಪಕ್ಷವಾಗಿ ಸಾಮಾಜಿಕ ನ್ಯಾಯ ಒದಗಿಸುವ ಕಾರ್ಯ ಟಿಕೆಟ್ ಹಂಚಿಕೆಯಲ್ಲಿ ಮಾಡಿದ್ದೇವೆ. ಬಿಜೆಪಿ ತೋರಿಕೆಗೆ ಸಬ್ ಕಾ ಸಾಥ್-ಸಬ್ ಕಾ ವಿಕಾಸ ಎನ್ನುತ್ತಿದೆ ಎಂದರು.
ಜನ್‌ಸ್ವರಾಜ್ ಅಲ್ಲ ಜನವಿರೋಧಿ:
ಕೇಂದ್ರ ಸರಕಾರ ರೈತರ ಪರವಾಗಿಲ್ಲ. ರಸಗೊಬ್ಬರ, ತೈಲ ಉತ್ಪನ್ನ, ಗೃಹಬಳಕೆ ವಸ್ತುಗಳ ದರ ಗಗನಕ್ಕೆ ಏರುತ್ತಿದೆ. ಕೇಂದ್ರ ಸರಕಾರ ಯಾವುದೇ ಹೊಸ ಕಾರ್ಯಕ್ರಮ ನೀಡಿಲ್ಲ. ಯುಪಿಎ ಸರಕಾರ ತಂದಿದ್ದ ಆಹಾರ ಭದ್ರತಾ ಕಾಯ್ದೆ, ನರೇಗಾ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕೃಷಿ ಅಭಿಯಾನಗಳನ್ನು ಮುಂದುವರಿಸುತ್ತಿದೆ. ಇದರ ಜತೆಗೆ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನ್‌ಸ್ವರಾಜ್ ಅಲ್ಲ, ಜನವಿರೋಧಿ ಸಮಾವೇಶ ಎಂದು ಟೀಕಿಸಿದರು.
ಚುನಾವಣೆಗೆ ಸಿದ್ಧತೆ:
ಎಲ್ಲ ಜಿಲ್ಲೆಯಲ್ಲೂ ಚುನಾವಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾನ ಮಾಡುವುದರಿಂದ ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗೆ ಹೆಚ್ಚು ನೀಡುತ್ತ ಬಂದಿದೆ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮೊದಲು ಜಾರಿಗೆ ತಂದಿದ್ದು ಕಾಂಗ್ರೆಸ್. ಎಂ. ವೀರಪ್ಪ ಮೊಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನ ಮಾಡಿದ್ದರು. ಈಗ ಚುನಾವಣೆಗೆ ಅಭ್ಯರ್ಥಿ ಘೋಷಣೆಯಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದರು.
ಕಾಂಗ್ರೆಸ್‌ನಲ್ಲೇ ಇದ್ದವರು:
ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಭಂಡಾರಿ ಅವರು ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದುಕೊಂಡು ಅನೇಕ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದರು.
ಭಿನ್ನಾಭಿಪ್ರಾಯ ಇಲ್ಲ:
ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ನಲ್ಲೇ ಇದ್ದಾರೆ. ಇತ್ತೀಚೆಗೆ ನಡೆದ ಸದಸ್ಯತ್ವ ನೋಂದಣಿ ಸಭೆಯಲ್ಲೂ ಪಾಲ್ಗೊಂಡಿದ್ದರು. ಹಾನಗಲ್ ಉಪಚುನಾವಣೆಯ ನೇತೃತ್ವ ವಹಿಸಿ 15 ದಿನ ನಿರಂತರ ಪ್ರಚಾರ ಮಾಡಿ ದ್ದರು. ಅವರಲ್ಲಿ ಕಾಂಗ್ರೆಸ್ ಬಗ್ಗೆ ಸಣ್ಣ ಬಿನ್ನಾಭಿಪ್ರಾಯವೂ ಇಲ್ಲ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ. ದಕ್ಷಿಣ ಕನ್ನಡ, ಉಡುಪಿ ಕಾಂಗ್ರೆಸ್ ಪಕ್ಷಕ್ಕೆ ಕೇಡರ್ ಬೇಸ್ ಇದ್ದಂತೆ. ಯಾವುದೇ ವಿಚಾರದಲ್ಲೂ ಗೊಂದಲ, ವಿವಾದ ಇಲ್ಲ.– ಧ್ರುವನಾರಾಯಣ, ಕೆಪಿಸಿಸಿ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.