ದೀಪಾವಳಿಯಲ್ಲಿ ಹಿಂದೂಗಳಿಗೆ ಸೌಹಾರ್ದ ಕೂಟ: ಬೇಗ್ ಕರೆ
Team Udayavani, Jul 25, 2017, 10:10 AM IST
ಉಡುಪಿ: ರಾಜ್ಯದ ಕರಾವಳಿ ಸೇರಿದಂತೆ ದೇಶದಲ್ಲೆಡೆ ಎಲ್ಲ ಸಮುದಾಯಗಳ ನಡುವೆ ಸಾಮರಸ್ಯ ಮೂಡಬೇಕು. ಈ ನಿಟ್ಟಿನಲ್ಲಿ ಪೇಜಾವರ ಶ್ರೀಗಳು ಆಯೋಜಿಸಿದ್ದ ಇಫ್ತಾರ್ ಉಪಾಹಾರ ಕೂಟ ಎಲ್ಲರಿಗೂ ಮಾದರಿಯಾಬೇಕು ಎಂದು ರಾಜ್ಯದ ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ತಿಳಿಸಿದ್ದಾರೆ.
ಸೋಮವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದ ಬಳಿಕ ಮಾತನಾಡಿದ ಅವರು, ಪೇಜಾವರ ಶ್ರೀಗಳು ಪವಿತ್ರ ರಮ್ಜಾನ್ ಸಮಯದಲ್ಲಿ ಇಫ್ತಾರ್ ಕೂಟ ಆಯೋಜಿಸುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಸ್ಪಂದಿಸಿದ್ದಾರೆ. ಅದೇ ರೀತಿ ಮುಸ್ಲಿಂ ಧರ್ಮಗುರುಗಳು ದೀಪಾವಳಿ ಸಮಯದಲ್ಲಿ ಹಿಂದೂಗಳಿಗೆ ಸೌಹಾರ್ದ ಕೂಟ ಏರ್ಪಡಿಸುವ ಮೂಲಕ ಎರಡೂ ಸಮುದಾಯಗಳ ನಡುವೆ ಸೌಹಾರ್ದಯುತ ಸಂಬಂಧಗಳನ್ನು ಬೆಳೆಸಬೇಕು ಎಂದು ಸಚಿವರು ಹೇಳಿದರು. ಸಮುದಾಯದ ಪರವಾಗಿ ಕೃತಜ್ಞತೆ ಸಲ್ಲಿಸಲು ಬಂದಿದ್ದೇನೆ. ವಿವಾದಗಳಿರುವುದು ಸಹಜ. ವಿವಾದ ಮಾಡುವವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಸುದ್ದಿಗಾರರರಿಗೆ ತಿಳಿಸಿದರು.
ಶ್ರೀಗಳಿಗೆ ಸಮ್ಮಾನ: ಇಫ್ತಾರ್ ಕೂಟ ಆಯೋಜಿಸಿದ್ದ ಪೇಜಾವರ ಶ್ರೀಗಳನ್ನು ಸಮುದಾಯದ ಪರವಾಗಿ ಸಚಿವ ರೋಶನ್ ಬೇಗ್ ಸಮ್ಮಾನಿಸಿದರು. ರಾಜ್ಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ ಭಂಡಾರಿ, ಶಬ್ಬೀರ್ ಅಹಮ್ಮದ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.