ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸುತ್ತೇನೆ… ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್
Team Udayavani, Jun 3, 2024, 6:45 AM IST
ಉಡುಪಿ: ನಾನು 3 ಬಾರಿ ಶಾಸಕನಾಗಿ ಜನತೆಗೆ ಸ್ಪಂದಿಸಿದ ರೀತಿ, ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದಲ್ಲಿ ನಡೆಸಿದ ವಿನೂತನ ಜನಪರ ಕಾರ್ಯಕ್ರಮಗಳ ಬಗ್ಗೆ ಅರಿವಿರುವ ನೈಋತ್ಯ ಪದವೀಧರರ ಕ್ಷೇತ್ರದ ಮತದಾರರು ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನನ್ನ ಕೈ ಹಿಡಿಯುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಹೇಳಿದರು.
ನಾನು ರಾಜಕೀಯ ಮಾಡಲು ಅಥವಾ ಯಾರನ್ನೋ ಸೋಲಿಸಲು ಸ್ಪರ್ಧಿಸುತ್ತಿಲ್ಲ. ಜನರ ಸೇವೆಗಾಗಿ ಪರಿಷತ್‌ಗೆ ಆಯ್ಕೆ ಬಯಸಿದ್ದೇನೆ. 5 ಜಿಲ್ಲೆ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನೊಳಗೊಂಡ ಭೌಗೋಳಿಕವಾಗಿ ಅತಿ ದೊಡ್ಡ ಕ್ಷೇತ್ರವಾಗಿರುವ ಇಲ್ಲಿನ ಜನತೆ ತೋರಿಸಿದ ಪ್ರೀತಿಯಿಂದಾಗಿ ನನ್ನ ಗೆಲುವಿನ ವಿಸ್ವಾಸ ಇಮ್ಮಡಿಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ನಿವೃತ್ತ ಸೈನಿಕರು ನನ್ನ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವಾರು ಉದ್ಯಮಗಳನ್ನು ಒಳಗೊಂಡ ಈ ಕ್ಷೇತ್ರದ ಪದವೀಧರರಿಗೆ ಅವರವರ ಶೈಕ್ಷಣಿಕ ಅರ್ಹತೆಗನುಗುಣವಾಗಿ ಉದ್ಯೋಗ ಮತ್ತು ಉದ್ಯಮಕ್ಕೆ ಸಹಕಾರಿಯಾಗಬಲ್ಲ ಸವಲತ್ತುಗಳು ಮತ್ತು ಪೂರಕವಾದ ಸರಕಾರದ ಶಾಸನಗಳು ರೂಪಿತವಾಗಿ ಜಾರಿಯಾಗುವ ಅವಶ್ಯಕತೆಗಳನ್ನು ಮನಗಂಡಿರುತ್ತೇನೆ. ಶಿಕ್ಷಕರ ಮತ್ತು ಸರಕಾರಿ ನೌಕರರ ಬೇಡಿಕೆ ಹಾಗೂ ಹೊಸ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.