ಮಳೆ ಪ್ರಮಾಣ ಇಳಿಕೆ: 8 ಮೀನುಗಾರರ ರಕ್ಷಣೆ; ಗುಡ್ಡ ಕುಸಿತ
Team Udayavani, Aug 16, 2018, 2:40 AM IST
ಮಂಗಳೂರು/ಉಡುಪಿ: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆ ಬುಧವಾರ ಕೊಂಚ ಇಳಿಮುಖವಾಗಿದೆ. ಮಂಗಳೂರು ನಗರದಲ್ಲಿ ಸಂಜೆ, ರಾತ್ರಿ ವೇಳೆಗೆ ಉತ್ತಮ ಮಳೆಯಾಗಿತ್ತು. ಆಳಸಮುದ್ರ ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿಯೊಂದು ನಿಯಂತ್ರಣ ತಪ್ಪಿ ತೋಟ ಬೆಂಗ್ರೆ ದಡ ಸೇರಿದ್ದು ಇದರಲ್ಲಿದ್ದ ಎಂಟು ಮೀನುಗಾರರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಮಾಣಿ-ಮೈಸೂರು ಹೆದ್ದಾರಿಯ ಮಡಿಕೇರಿ ಸನಿಹದ ಮದೆನಾಡು, ಜೋಡುಪಾಲ ಬಳಿ ರಸ್ತೆಗೆ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಬುಧವಾರವೂ ಹೆದ್ದಾರಿಯಲ್ಲಿ ವಾಹನ ಸಂಚಾರ ಮೊಟಕುಗೊಂಡಿತ್ತು.
ಕಿನ್ನಿಗೋಳಿ ಕಟೀಲಿನ ತಗ್ಗು ಪ್ರದೇಶ ಜಲಾವೃತವಾಗಿದೆ. ಅತ್ತೂರು ಬೈಲು ಮಹಾಗಣಪತಿ ಮಂದಿರಕ್ಕೆ ಸಂಚರಿಸುವ ರಸ್ತೆ ಸಂಪರ್ಕ ಕಡಿದಿದೆ. ಎಡಪದವು ಮಯ್ನಾರಬೆಟ್ಟಿನ ಕುಸುಮಾ ಅವರ ಮನೆಯ ಮೇಲೆ ಮಂಗಳವಾರ ತೆಂಗಿನ ಮರ ಬಿದ್ದು ಮನೆ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ಬುಧವಾರ ಮಧ್ಯಾಹ್ನ ಗುಡ್ಡ ಕುಸಿದು ಹೆದ್ದಾರಿ ರಸ್ತೆ ಮೇಲೆ ಬಿದ್ದು, ಸುಮಾರು ಒಂದೂವರೆ ತಾಸು ವಾಹನ ಸಂಚಾರಕ್ಕೆ ತಡೆ ಉಂಟಾಯಿತು.
ಫಲ್ಗುಣಿ ನದಿ ಉಕ್ಕಿ ಹರಿದಿದ್ದು, ಗುರುಪುರ ಕೈಕಂಬದ ಕಾಜಿಲ ಸಮೀಪದ ಪಟ್ಲ ಸಾಧೂರು ಎಂಬಲ್ಲಿ ನೆರೆ ಹಾವಳಿ ಉಂಟಾಗಿದೆ. ಮಂಗಳವಾರ ರಾತ್ರಿ ವೇಣೂರಿನ ಫಲ್ಗುಣಿ ನದಿ ಅಪಾಯದ ಮಟ್ಟದಲ್ಲಿ ಹರಿದು ವೇಣೂರು ಚರ್ಚ್ ಬಳಿ ರಸ್ತೆ ಮುಳುಗಡೆಗೊಂಡಿತು. ಉಪ್ಪಿನಂಗಡಿಯಲ್ಲಿ ನೇತ್ರಾವತಿ, ಕುಮಾರಧಾರಾ ಮೈದುಂಬಿ ಹರಿಯುತ್ತಿದೆ.
ವಳಾಲು: ಗುಡ್ಡ ಕುಸಿದು ಹೆದ್ದಾರಿ ಸಂಚಾರಕ್ಕೆ ತಡೆ
ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ವಳಾಲಿನಲ್ಲಿ ಬುಧವಾರ ಮಧ್ಯಾಹ್ನ ಗುಡ್ಡ ಕುಸಿದು ಹೆದ್ದಾರಿ ಮೇಲೆ ಬಿದ್ದು ಸುಮಾರು ಒಂದೂವರೆ ತಾಸು ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಗುಡ್ಡ ಕುಸಿದ ಭಾಗದಲ್ಲಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಿರ್ವಹಿಸುತ್ತಿರುವ ಎಲ್.ಆ್ಯಂಡ್.ಟಿ. ಸಂಸ್ಥೆ ಮಣ್ಣು ತೆರವು ಮಾಡಿತು.
ಮಂಗಳೂರು ಡಿಪೋದಿಂದ 54 ಬಸ್ ಸ್ಥಗಿತ
ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಡಿಪೋದಿಂದ ಬೆಂಗಳೂರಿಗೆ ತೆರಳುವ 46 ಬಸ್, ಮೈಸೂರಿಗೆ ತೆರಳುವ 7 ಕೆಎಸ್ಸಾರ್ಟಿಸಿ ಬಸ್ ಗಳನ್ನು ಬುಧವಾರ ಕೂಡ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗಾಧಿಕಾರಿ ದೀಪಕ್ ಕುಮಾರ್ ಅವರು ‘ಉದಯವಾಣಿ’ಗೆ ಪ್ರತಿಕಿಯಿಸಿ ‘ಒಟ್ಟು 54 ಬಸ್ ಗಳನ್ನು ಸ್ಥಗಿತಗೊಳಿಸಲಾಗಿದೆ. ಬೆಂಗಳೂರು, ಮೈಸೂರಿಗೆ ತೆರಳುವಂತಹ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆ ಇದೆ. ಈಗಾಗಲೇ ಸ್ಥಗಿತಗೊಂಡ ಬಸ್ ಗಳಲ್ಲಿ ಪ್ರಯಾಣಿಕರು ಸೀಟು ಕಾಯ್ದಿರಿಸಿಕೊಂಡಿದ್ದರೆ ಅಂತಹವರಿಗೆ ಶೇ. 100ರಷ್ಟು ಹಣ ಮರುಪಾವತಿ ಮಾಡಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.