![Laxmi-Minister](https://www.udayavani.com/wp-content/uploads/2024/12/Laxmi-Minister-1-415x249.jpg)
ಮಳೆ ನೀರಿನ ಕೊಯ್ಲು ಅನಿವಾರ್ಯ: ಡಿಸಿ ಜಗದೀಶ್
ಮಿಲಾಗ್ರಿಸ್ ಕಾಲೇಜು: ಕಾರ್ಯಾಗಾರ
Team Udayavani, Nov 14, 2019, 5:15 AM IST
![1311BVRE3](https://www.udayavani.com/wp-content/uploads/2019/11/1311BVRE3-620x374.jpg)
ಬ್ರಹ್ಮಾವರ: ಯುವಕರು ಕಡಿಮೆ ಅಂದರೂ ವರ್ಷಕ್ಕೆ 5 ಗಿಡಗಳನ್ನಾದರೂ ನೆಟ್ಟು ಅವುಗಳ ಪೋಷಣೆ ಮಾಡುವುದು ಇಂದು ಅನಿವಾರ್ಯವಾಗಿದೆ. ಹೀಗೆ ಮಾಡುವುದರಿಂದ ಅಭಿವೃದ್ಧಿಯ ಹೆಸರಿನಲ್ಲಿ ನಮ್ಮಿಂದಲೇ ನಾಶವಾಗುತ್ತಿರುವ ಕಾಡನ್ನು ಪುನರ್ ರಚಿಸಲು ಮಹತ್ವದ ಹೆಜ್ಜೆಯನ್ನು ಇಟ್ಟಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಜಿಲ್ಲಾ ಆಡಳಿತ ಮತ್ತು ಜಿ.ಪಂ., ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು, ಮಿಲಾಗ್ರಿಸ್ ಪ.ಪೂ. ಕಾಲೇಜು, ಬೈಂದೂರು ಗಂಗನಾಡು ಯುವಕ ವೃಂದದ ಸಹಯೋಗದಲ್ಲಿ ಉಡುಪಿ ನೆಹರೂ ಯುವ ಕೇಂದ್ರದವರು ಮಿಲಾಗ್ರಿಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ ಮಳೆ ನೀರಿನ ಕೊಯ್ಲು ಮತ್ತು ನೀರಿನ ಸಂರಕ್ಷಣೆ ಹಾಗೂ ಕೃಷಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು, ಶೂನ್ಯ ಬಂಡವಾಳದಲ್ಲಿ ನೈಸರ್ಗಿಕ ಕೃಷಿ ಎಂಬ ವಿಷಯಗಳ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮನೆಯಲ್ಲಿ ಘನ ತ್ಯಾಜ್ಯ ಹಾಗೂ ದ್ರವ ತ್ಯಾಜ್ಯಗಳ ಸಮರ್ಪಕ ವಿಲೇವಾರಿ ಮಾಡಿ ಅದರಿಂದ ಉತ್ಪತ್ತಿಯಾದ ಸಾವಯವ ಗೊಬ್ಬರವನ್ನು ತಮ್ಮ ಮನೆಯ ಕೈ ತೋಟಕ್ಕೆ, ಗಿಡ ಮರಗಳಿಗೆ ಉಪಯೋಗಿಸಬಹುದು ಎಂದರು.
ತಮ್ಮ ಮನೆಯ ಹಸಿ ಕಸವನ್ನು ತಮ್ಮ ಮನೆಯಲ್ಲಿಯೇ ಸಮರ್ಪಕವಾಗಿ ವಿಲೇವಾರಿ ಮಾಡುವ ವಿಧಾನವನ್ನು ಅಳವಡಿಸಿಕೊಂಡಿದ್ದು, ಸಾರ್ವಜನಿಕರು ವೀಕ್ಷಿಸಬಹುದು ಎಂದು ಜಿಲ್ಲಾಧಿ ಕಾರಿ ತಿಳಿಸಿದರು.
ಉಡುಪಿಯನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸಿಕೊಂಡು ಬರುವಲ್ಲಿ ನೀಲ ನಕ್ಷೆಯ ತಯಾರಿ ಈಗಾಗಲೆ ನಡೆದಿದ್ದು, ಪರಿಣಿತರೊಂದಿಗೆ ಚರ್ಚಿಸಿ ಮಹತ್ವದ ನಿರ್ಧಾರವನ್ನೂ ಪ್ರಕಟಿಸಲಾಗುವುದು ಎಂದರು.
ಒತ್ತುವರಿ ಸಲ್ಲದು
ಕೆರೆ ಒತ್ತುವರಿಗೆ ಸಂಬಂ ಧಿಸಿದ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಧಿಕಾರಿ ಅವರ ಗಮನಕ್ಕೆ ತರುವ ಜವಾಬ್ದಾರಿಯನ್ನು ಸ್ಥಳೀಯ ನಾಗರಿಕರು ವಹಿಸಬೇಕೆಂದು ಕೋರಿದರು. ಈ ವರ್ಷದ ಅತ್ಯುತ್ತಮ ಯುವಕ ಮಂಡಳ ಪ್ರಶಸ್ತಿಗೆ ಆಯ್ಕೆಯಾದ ಕಾಪು ತಾಲೂಕು ಹೆಜಮಾಡಿ ಯುವಕ/ಯುವತಿ ವೃಂದಕ್ಕೆ ಜಿಲ್ಲಾಧಿ ಕಾರಿ ಪ್ರಶಸ್ತಿ ಪ್ರದಾನ ಮಾಡಿದರು.
ಮಿಲಾಗ್ರಿಸ್ ಸಮೂಹ ಸಂಸ್ಥೆಗಳ ಸಂಚಾಲಕ ಡಾ| ಲಾರೆನ್ಸ್ ಸಿ. ಡಿ’ಸೋಜಾ, ಅವರು ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮೋಹನ್ ರಾಜ್ ಅವರು ಕೃಷಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಮತ್ತು ಶೂನ್ಯ ಬಂಡವಾಳದಲ್ಲಿ ನೈಸರ್ಗಿಕ ಕೃಷಿಯ ಬಗ್ಗೆ ತಿಳಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜೋಸೆಫ್ ಜಿ.ಎಂ. ರೆಬೆಲ್ಲೊ ಮಳೆ ನೀರಿನ ಕೊಯ್ಲು ಮತ್ತು ನೀರಿನ ಸಂರಕ್ಷಣೆ ವಿಚಾರದಲ್ಲಿ ದೃಶ್ಯ ಶ್ರಾವ್ಯಗಳ ಮೂಲಕ ಯುವಜನರಿಗೆ ಕಾರ್ಯಾಗಾರದ ಮಾಹಿತಿಯನ್ನು ನೀಡಿದರು. ಮಿಲಾಗ್ರಿಸ್ ಕಾಲೇಜಿನ ಪದವಿ ಮತ್ತು ಪ.ಪೂ. ಪ್ರಾಂಶುಪಾಲರಾದ ಡಾ| ವಿನ್ಸೆಂಟ್ ಆಳ್ವ ಹಾಗೂ ಸವಿತಾ ಕುಮಾರಿ ಉಪಸ್ಥಿತರಿದ್ದರು.
ಸಮನ್ವಯ ಅಧಿಕಾರಿ ವಿಲೆøಡ್ ಡಿ’ಸೋಜಾ ಪ್ರಸ್ತಾವನೆಗೈದು, ರವಿನಂದನ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.
ಸಂವಾದ
ಜಲ ಸಂರಕ್ಷಣೆಯನ್ನು ಸಾರಿ ಹೇಳುವ ಮಳೆ ನೀರಿನೊಂದಿಗೆ ಅನುಸಂಧಾನ ಎಂಬ ಚಿನ್ನೆ/ಲಾಂಛನವನ್ನು ಅನಾವರಣಗೊಳಿಸಿ ಮಾತಾನಾಡಿದ ಜಿಲ್ಲಾಧಿಕಾರಿ, ಮಳೆ ನೀರಿನ ಪ್ರಾಮುಖ್ಯತೆಯ ಬಗ್ಗೆ ತಿಳಿಸುತ್ತಾ, ಕಳೆದ ವರ್ಷ ಉಡುಪಿ ಜಿಲ್ಲೆ ಅನುಭವಿಸಿದ ನೀರಿನ ಬರಗಾಲ, ಜನತೆ ಅನುಭವಿಸಿದ ಭವಣೆ, ಇದಕ್ಕೆಲ್ಲಾ ಏನು ಕಾರಣ ಎಂಬ ವಿಷಯದ ಬಗ್ಗೆ ಯುವಜನರೊಂದಿಗೆ ಸಂವಾದ ನಡೆಸಿದರು.
ಟಾಪ್ ನ್ಯೂಸ್
![Laxmi-Minister](https://www.udayavani.com/wp-content/uploads/2024/12/Laxmi-Minister-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Laxmi-Minister](https://www.udayavani.com/wp-content/uploads/2024/12/Laxmi-Minister-1-150x90.jpg)
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
![ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!](https://www.udayavani.com/wp-content/uploads/2024/12/Birds-1-150x107.jpg)
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
![6-aranthodu](https://www.udayavani.com/wp-content/uploads/2024/12/6-aranthodu-150x90.jpg)
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
![ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ](https://www.udayavani.com/wp-content/uploads/2024/12/Delhi1-1-150x62.jpg)
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
![SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ](https://www.udayavani.com/wp-content/uploads/2024/12/tm-150x99.jpg)
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.