ಜಿಲ್ಲೆಯಲ್ಲಿ ಎಚ್‌1ಎನ್‌1 ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ

 ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ:

Team Udayavani, Feb 18, 2020, 5:25 AM IST

1702UDU17-2

ಉಡುಪಿ: ಜಿಲ್ಲೆಯಲ್ಲಿ ಎಚ್‌1ಎನ್‌1 ರೋಗದಿಂದ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರೋಗದ ಲಕ್ಷಣಗಳು, ಹರಡುವಿಕೆ ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಜಿಲ್ಲಾ ಸರ್ವೇಕ್ಷಣ ಘಟಕದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2019ರಲ್ಲಿ 424 ಎಚ್‌1ಎನ್‌1 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 10 ಮಂದಿ ಮೃತಪಟ್ಟಿದ್ದು, 2020 ನೇ ಸಾಲಿನಲ್ಲಿ ಫೆಬ್ರವರಿ ವರೆಗೆ 55 ಪ್ರಕರಣಗಳು ದಾಖಲಾಗಿದ್ದು ಈ ತನಕ ಯಾರೂ ಸಾವನ್ನಪ್ಪಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ ಸಭೆಗೆ ತಿಳಿಸಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್‌, ಎಚ್‌1ಎನ್‌1 ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜನರಲ್ಲಿ ಈ ರೋಗದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜಪಾನೀಸ್‌ ಎನ್ಸೆಫ‌ಲೈಟಿಸ್‌ ರೋಗದ 5 ಪ್ರಕರಣಗಳು ಕಂಡುಬಂದಿದ್ದು, ಇದರಲ್ಲಿ 1 ಸಾವು ದಾಖಲಾಗಿದೆ. ಚಿಕೂನ್‌ಗುನ್ಯದ 7 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ 4 ಜನರಲ್ಲಿ ರೋಗ ಲಕ್ಷಣ ಗಳಿರುವುದು ದೃಢಪಟ್ಟಿದೆ. ಹಿಂದಿನ ಸಾಲಿಗೆ ಹೋಲಿಸಿದಾಗ ಈ ಸಾಲಿನಲ್ಲಿ ಮಲೇರಿಯಾ ರೋಗದ ಪ್ರಕರಣಗಳು ಕಮ್ಮಿ ಇವೆ. ಡೆಂಗ್ಯೂ ಪ್ರಕರಣಗಳು ರಾಜ್ಯಾದ್ಯಂತ ಹೆಚ್ಚಿದ್ದು, ಉಡುಪಿಯಲ್ಲಿ ಈ ಸಾಲಿನಲ್ಲಿ ಒಟ್ಟು 25 ಪ್ರಕರಣಗಳು ದಾಖಲಾಗಿವೆ. ರೋಗಗಳು ಸೊಳ್ಳೆಯಿಂದ ಹರಡುವುದರಿಂದ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡಿ, ರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಕೀಟ ಜನ್ಯ ರೋಗ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್‌ ತಿಳಿಸಿದರು.

ಉಡುಪಿ ನಗರದಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿರುವ ಕಡೆಗಳಲ್ಲಿ ಸೊಳ್ಳೆಗಳ ಉತ್ಪತ್ತಿಯಾಗಿ ರೋಗಗಳು ಹರಡದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ|ಚಿದಾನಂದ ಸಂಜು ಮಂಗನ ಕಾಯಿಲೆ ಬಗ್ಗೆ ಮಾಹಿತಿ ನೀಡಿ, ಈ ಕಾಯಿಲೆಯು ಮಂಗನಿಂದ ಮನುಷ್ಯರಿಗೆ ಉಣ್ಣಿಯ ಮೂಲಕ ಹರಡುತ್ತದೆ. ಅರಣ್ಯ ಪ್ರದೇಶದಲ್ಲಿ ವಾಸಿಸುವ ಮತ್ತು ಕೆಲಸ ಕಾರ್ಯನಿಮಿತ್ತ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡುವ ಜನರಿಗೆ ಉಣ್ಣಿ ಕಚ್ಚಿದಾಗ ವೈರಸ್‌ಗಳು ಮನುಷ್ಯರ ದೇಹದೊಳಗೆ ಪ್ರವೇಶಿಸುತ್ತವೆ. ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ಎರಡು ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಮಂಗನ ಕಾಯಿಲೆಯಿಂದ ಬಳಲುವ ವಿವಿಧ ಜಿಲ್ಲೆಗಳ 8 ಜನರು ಕೆ.ಎಂ. ಸಿಯಲ್ಲಿ ದಾಖಲಾಗಿದ್ದು, ಅದರಲ್ಲಿ 1 ಸಾವು ಸಂಭವಿಸಿದೆ. ಜಿಲ್ಲೆಯಲ್ಲಿ ಮಂಗಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದರು.

ಜಿಲ್ಲೆಯಲ್ಲಿ ಕೊರೊನಾ ರೋಗದ ಯಾವುದೇ ಪ್ರಕರಣ ಇಲ್ಲ. ಚೀನದಿಂದ ಪ್ರವಾಸ ಬಂದ ಮೂರೂ ಜನರು ಸ್ವಯಂ ಪ್ರೇರಿತರಾಗಿ ಜಿಲ್ಲಾ ಸ್ಪತ್ರೆಯಲ್ಲಿ ಪರೀಕ್ಷೆಗೊಳಗಾಗಿದ್ದು, ಅವರಲ್ಲಿ ಕೊರೊನಾ ಸೋಂಕು ಇಲ್ಲವೆಂದು ದೃಢಪಟ್ಟಿದೆ ಎಂದು ಡಾ| ವಾಸುದೇವ ಉಪಾಧ್ಯಾಯ ತಿಳಿಸಿದರು.

ಜಿಲ್ಲಾ ಸರ್ಜನ್‌ ಡಾ| ಮಧುಸೂದ‌ನ್‌ ನಾಯಕ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಆರ್‌. ಶೇಷಪ್ಪ, ಡಿಡಿಪಿಐ ಶೇಷಶಯನ ಕಾರಿಂಜ, ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರತ್ನ, ಪಶುಸಂಗೋಪನೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.