Ayodhya;ಜ.22- ಮಾ.10 ಶ್ರೀರಾಮ ಮಂದಿರದ ಬ್ರಹ್ಮಕಲಶೋತ್ಸವ: ಪೇಜಾವರ ಶ್ರೀ

ಪ್ರತೀ ಮನೆಯಲ್ಲಿ ದೀಪೋತ್ಸವ

Team Udayavani, Nov 16, 2023, 9:37 PM IST

pejavar (2)

ಮಂಗಳೂರು/ಉಡುಪಿ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ 2024 ಜ.22ರಿಂದ ಮಾ.10ರ ವರೆಗೆ 48 ದಿನ ನಡೆಯಲಿದೆ. ಈ ಕುರಿತಂತೆ ಸರ್ವ ತಯಾರಿ ಆರಂಭಿಸಲಾಗಿದೆ ಎಂದು ಶ್ರೀರಾಮ ಮಂದಿರದ ವಿಶ್ವಸ್ಥರು, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.22ರಂದು ಅಭಿಜಿನ್‌ ಮುಹೂರ್ತದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನ ಭವ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಆ ಮೂಲಕ ಭಾರತೀಯ ಸನಾತನ ಧರ್ಮೀಯರ ಕನಸು ನನಸಾಗಲಿದೆ ಎಂದು ತಿಳಿಸಿದರು.

ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪ್ರತಿಯೊಂದು ರಾಜ್ಯಗಳ ಸಂಸ್ಕೃತಿಯನ್ನು ಸಾರುವ ಕಲಾ ತಂಡಗಳಿಂದ ಕಾರ್ಯಕ್ರಮ ನಡೆಯಲಿದೆ. ಕನ್ನಡಿಗರು ಸೇರಿದಂತೆ ವಿವಿಧ ಋತ್ವಿಜರ ನೇತೃತ್ವ, ಮುಂದಾಳತ್ವದಲ್ಲಿ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿ ದಿವಿಧಾನಗಳು ನಡೆಯಲಿದೆ. ಕೊನೆಯ ನಾಲ್ಕೆ çದು ದಿನಗಳಲ್ಲಿ ಬ್ರಹ್ಮಕಲಶ ಹವನ, ಅಭಿಷೇಕ ಮತ್ತಿತರ ವಿ ದಿವಿಧಾನ ನಡೆಯಲಿದೆ ಎಂದರು.

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀರಾಮನಿಗೆ ಪ್ರತ್ಯೇಕ ಸೇವೆ ಇರುವುದಿಲ್ಲ. ಪ್ರತಿಯೊಬ್ಬ ಭಕ್ತರು ಮಾಡಿದ ಸಾಮಾಜ ಸೇವೆಯನ್ನು ಶ್ರೀರಾಮನ ಸಾನ್ನಿಧ್ಯದಲ್ಲಿ ನಿವೇದಿಸಿಕೊಳ್ಳುವ ರಾಮಾರ್ಪಣೆಯೇ ಸೇವೆ. ಭಕ್ತರಿಗಾಗಿ ಆರತಿ, ತೀರ್ಥ ಹಾಗೂ ಉತ್ತರ ಭಾರತದ ಸಿಹಿಯ ನೈವೇದ್ಯ ಇರುತ್ತದೆ. ಶ್ರೀರಾಮನ ಆದರ್ಶ, ರಾಮರಾಜ್ಯ ಸ್ಥಾಪನೆ ನಮ್ಮ ಉದ್ದೇಶ. ಇದು ಈಡೇರಲು ಭಕ್ತರು ಸ್ವಯಂಪ್ರೇರಿತರಾಗಿ ಸಮಾಜ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ರಾಮನ ಸೇವೆಯೇ ದೇಶ ಸೇವೆ ಎಂದರು.

ಜ.17: ಶ್ರೀರಾಮ ಶಿಲಾ ವಿಗ್ರಹ ಮೆರವಣಿಗೆ
ಅಯೋಧ್ಯೆಗೆ ಶ್ರೀರಾಮನ ಶಿಲಾ ವಿಗ್ರಹದ ಮೆರವಣಿಗೆ ಜ.17ರಂದು ನಡೆಯಲಿದೆ. ಸುಮಾರು ಐದರಿಂದ ಆರು ಅಡಿ ಎತ್ತರದ ಶಿಲಾ ಪ್ರತಿಮೆಯನ್ನು ಕರಸೇವಕಪುರಂನಿಂದ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ. ಸರಯೂ ನದಿಯಲ್ಲಿ ಶಿಲಾಮೂರ್ತಿಗೆ ಅಭಿಷೇಕ ನೆರವೇರಲಿದೆ. ಬಳಿಕ ಅಯೋಧ್ಯೆಗೆ ಮೆರವಣಿಗೆಯಲ್ಲಿ ಕೊಂಡೊಯ್ದು ಜ.18ರಂದು ಶ್ರೀರಾಮ ಜನ್ಮಸ್ಥಳದ ಮೂಲ ಸ್ಥಾನದಲ್ಲಿ ನಿಲ್ಲಿಸಲಾಗುವುದು. ಜ.18ರಿಂದ 20ರ ವರೆಗೆ ಹಲವು ವಿಧಿವಿಧಾನ ನೆರವೇರಿಸಿ ಜ.21ರಂದು ಪ್ರತಿಷ್ಠಾಪನೆಯ ಪೂರ್ವಸಿದ್ಧತೆ ನಡೆಸಲಾಗುತ್ತದೆ.. ಜ.22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆ, ಮಂದಿರ ಉದ್ಘಾಟನೆ ಬಳಿಕ ಮೂರು ಗಂಟೆ ಸಭಾ ಕಾರ್ಯಕ್ರಮ ಇರಲಿದೆ. ಸದ್ಯ ಪೂಜಿಸುತ್ತಿರುವ ಶ್ರೀರಾಮನ ಮೂರ್ತಿ ಕೂಡ ಅಲ್ಲೇ ಪ್ರತಿಷ್ಠಾಪನಗೊಳ್ಳಲಿದೆ ಎಂದರು.ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಉಪಸ್ಥಿತರಿದ್ದರು.

ಪ್ರತೀ ಮನೆಯಲ್ಲಿ ದೀಪೋತ್ಸವ
ಶ್ರೀರಾಮ ಪ್ರತಿಷ್ಠೆ ಹಾಗೂ ಮಂದಿರ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಇದೆ. ಆ ದಿನ ರಾತ್ರಿ ಐದು ಶತಮಾನದ ಸಂಕೇತವಾಗಿ ಐದು ದೀಪಗಳನ್ನು ಪ್ರತಿ ಮನೆಗಳಲ್ಲಿ ಬೆಳಗುವ ಮೂಲಕ ಇದನ್ನು ದೀಪೋತ್ಸವವಾಗಿಯೂ ಆಚರಿಸಬೇಕು. ಇಡೀ ದಿನ ದೇವಸ್ಥಾನ, ಮಂದಿರ, ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ, ಭಜನೆ ನಡೆಸಬೇಕು ಎಂದು ಸ್ವಾಮೀಜಿಗಳು ಹೇಳಿದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.