ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್ ಟೆಸ್ಟ್
Team Udayavani, Dec 5, 2021, 6:33 AM IST
ಉಡುಪಿ: ಒಮಿಕ್ರಾನ್ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜು, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿ ಗಳಿಗೆ, ಶಿಕ್ಷಕರಿಗೆ ಕೊರೊನಾ ರ್‍ಯಾಂಡಮ್ ಪರೀಕ್ಷೆ ನಡೆಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯಲ್ಲಿ ನಿತ್ಯ 5 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ನಡೆಸುವ ಗುರಿ ಹೊಂದಿದ್ದೇವೆ. ಪ್ರೌಢ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು -ಬೋಧಕ ಸಿಬಂದಿ, ಹೊಟೇಲ್, ರೆಸ್ಟೋರೆಂಟ್, ಮಾಲ್, ಅಂಗಡಿ ಮುಂಗಟ್ಟುಗಳ ಮಾಲಕರು-ಸಿಬಂದಿ, ಕ್ಯಾಟರಿಂಗ್ ಸಿಬಂದಿ, ಮನೆ ಮನೆಗೆ ಆಹಾರ ಪದಾರ್ಥ ವಿತರಿಸುವವರು, ಕಾರ್ಖಾನೆ, ಕಚೇರಿಗಳು, ಪಬ್, ಬಾರ್, ಸಿನೆಮಾ ಮಂದಿರ, ಮಲ್ಟಿಪ್ಲೆಕ್ಸ್ ಗಳ ಸಿಬಂದಿಗೆ ಮುಂದಿನ ಒಂದು ವಾರದಲ್ಲಿ ರ್‍ಯಾಂಡಮ್ ಪರೀಕ್ಷೆ ಮಾಡಲಿದ್ದೇವೆ. ಸಾರ್ವಜನಿಕರು ಗುಂಪು ಸೇರಿದಾಗಲೂ ರ್‍ಯಾಂಡಮ್ ಪರೀಕ್ಷೆ ನಡೆಸುತ್ತೇವೆ ಎಂದರು.
ಜಿಲ್ಲೆಗೆ ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದಿಂದ ಬಂದ 266 ಮಂದಿಯಲ್ಲಿ 12 ಮಂದಿಗೆ, ಕೇರಳದಿಂದ ಬಂದ 69 ಮಂದಿಯಲ್ಲಿ 9 ಮಂದಿಗೆ ಕೊರೊನಾ ದೃಢಪಟ್ಟಿದೆ. ವಿದೇಶದಿಂದ 91 ಮಂದಿ ಜಿಲ್ಲೆಗೆ ಬಂದಿದ್ದು, ಅವರಲ್ಲಿ ಮೂವರು ಹೈರಿಸ್ಕ್ ದೇಶದಿಂದ ಬಂದವರು. ಎಲ್ಲರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಆದರೂ ಒಂದು ವಾರ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಿದ್ದು, ಅನಂತರ ಮತ್ತೂಮ್ಮೆ ಪರೀಕ್ಷೆ ಮಾಡಿಸಿಕೊಳ್ಳಲು ನಿರ್ದೇಶಿಸಿದ್ದೇವೆ ಎಂದರು.
ಪಾಸಿಟಿವಿಟಿ ದರ:
ಜಿಲ್ಲೆಯಲ್ಲಿ ಸದ್ಯ ಶೇ 0.4ರಷ್ಟು ಪಾಸಿಟಿವಿಟಿ ದರವಿದೆ. ಉಡುಪಿ ತಾಲೂಕಿನಲ್ಲಿ ಶೇ 0.6, ಕುಂದಾಪುರದಲ್ಲಿ ಶೇ 0.4 ಹಾಗೂ ಕಾರ್ಕಳದಲ್ಲಿ ಶೇ 0.1ರಷ್ಟಿದೆ. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವ ಸಮಿತಿಗಳನ್ನು ಪುನಃ ಕ್ರಿಯಾಶೀಲಗೊಳಿಸಲು ಕ್ರಮ ತೆಗೆದುಕೊಂಡಿದ್ದೇವೆ. ಜಿಲ್ಲೆಯಲ್ಲಿನ ಆಕ್ಸಿಜನ್ ಸಹಿತ ಹಾಸಿಗೆ ಲಭ್ಯತೆಯ ಮಾಹಿತಿ ಪಡೆಯುತ್ತಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಬರುವ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಿದ್ದೇವೆ ಎಂದರು.
ಕಾರ್ಯಕ್ರಮ ಮುಂದಕ್ಕೆ :
ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಚಟುವಟಿಕೆ, ಹಬ್ಬ-ಸಮಾರಂಭಗಳನ್ನು 2022ರ ಜನವರಿಗೆ 15ರವರೆಗೆ ಮುಂದೂಡಲು ಸೂಚನೆ ನೀಡಿದ್ದೇವೆ. ರಾಜಕೀಯ ಸಮಾವೇಶ, ಮದುವೆ ಸಹಿತವಾಗಿ ಎಲ್ಲ ಸಭೆ, ಸಮಾರಂಭ, ಸಮ್ಮೇಳನಗಳಲ್ಲಿ 500 ಜನರಿಗೆ ಮಿತಿ ನೀಡಲಾಗಿದೆ. ಇಲ್ಲಿ ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದು ಕಾರ್ಯಕ್ರಮ ಸಂಘಟಕರು ಅಥವಾ ವ್ಯವಸ್ಥಾಪಕರ ಜವಾಬ್ದಾರಿ. ಈ ಬಗ್ಗೆ ವಿಚಕ್ಷಣದಳದಿಂದ ನಿಗಾ ವಹಿಸಲಾಗುತ್ತದೆ. ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದವರಿಗೆ ಮಾತ್ರ ಮಾಲ್ ಹಾಗೂ ಚಿತ್ರಮಂದಿರಗಳಿಗೆ ಪ್ರವೇಶ ನೀಡಲಾಗುತ್ತದೆ. ಈ ಬಗ್ಗೆ ಅಲ್ಲಿನ ಸಿಬಂದಿ ಹಾಗೂ ವ್ಯವಸ್ಥಾಪಕರಿಗೆ ಸ್ಪಷ್ಟ ಸೂಚನೆ ನೀಡಲಾಗುತ್ತದೆ ಎಂದು ವಿವರ ನೀಡಿದರು.
ಜಿ.ಪಂ. ಸಿಇಒ ಡಾ| ನವೀನ್ ಭಟ್, ಎಸ್‌ಪಿ ವಿಷ್ಣುವರ್ಧನ್, ಎಡಿಸಿ ಬಾಲಕೃಷ್ಣಪ್ಪ ಪತ್ರಿಕಾಗೋಷ್ಠಿ ಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.