ಪಡಿತರ ಚೀಟಿ ಪ್ರಕ್ರಿಯೆ ಶೀಘ್ರ ಪುನರಾರಂಭ
Team Udayavani, Jul 12, 2018, 11:07 AM IST
ಉಡುಪಿ: ಚುನಾವಣೆಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪಡಿತರ ಚೀಟಿ ಪ್ರಕ್ರಿಯೆಯನ್ನು ಶೀಘ್ರ
ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಹಾಗೂ ಈಗಿನ ರೇಷನ್ ಕಾರ್ಡ್‌ಗೆ ಹೆಸರು ಸೇರಿಸಲು ಮತ್ತು ತಿದ್ದುಪಡಿ ನಡೆಸಲು ಸರಕಾರ ಸೂಚನೆ ನೀಡಿದೆ.
ಟೆಸ್ಟಿಂಗ್ ಪ್ರಕ್ರಿಯೆ ನಡೆಸಿ ಅರ್ಜಿ ಸ್ವೀಕಾರ ನಡೆಯಲಿದೆ. ಗ್ರಾಮೀಣ ಭಾಗಗಳಲ್ಲಿ ಗ್ರಾ.ಪಂ.,ನಗರ ಪ್ರದೇಶಗಳಲ್ಲಿ ಗುರುತಿಸಲಾಗಿರುವ ಕೇಂದ್ರಗಳಲ್ಲಿ ಹೊಸ ಕಾರ್ಡ್‌ಗೆ ಅರ್ಜಿ, ತಿದ್ದುಪಡಿಗೆ ಅರ್ಜಿ ನೀಡಬಹುದು ಎಂದರು.
ನರೇಗಾಕ್ಕೆ ಜನ ಹಿಂದೇಟು
ರಾಷ್ಟ್ರೀಯ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯವಿದ್ದರೂ ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಜನರು ಮುಂದೆ ಬರುತ್ತಿಲ್ಲ. ನರೇಗಾ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಜನರು ಲಭ್ಯವಿಲ್ಲ ಎಂದು ಕೆಲವು ಗ್ರಾ.ಪಂ.ಗಳು ಲಿಖೀತವಾಗಿಯೇ ತಿಳಿಸಿವೆ. ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲೂ ನರೇಗಾ ಅಡಿ ಕೆಲಸ ಮಾಡಲು ಅವಕಾಶ ಇರುವುದರಿಂದ ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿ.ಪಂ.ಸಿಇಒ ಶಿವಾನಂದ ಕಾಪಶಿ ಅಧಿಕಾರಿಗಳಿಗೆ ಸೂಚಿಸಿದರು.
108 ಆ್ಯಂಬುಲೆನ್ಸ್‌ಗೆ ಸಿಬಂದಿ ಕೊರತೆ
108 ಆ್ಯಂಬುಲೆನ್ಸ್‌ಗಳಲ್ಲಿ ನರ್ಸ್ ಸಹಿತ ಅಗತ್ಯ ಸಿಬಂದಿ ಕೊರತೆ ಕಂಡುಬರುತ್ತಿದೆ. ತುರ್ತು ಸಂದರ್ಭಗಳಲ್ಲಿ ಇವರ ಸೇವೆಯ ಅಗತ್ಯವಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅವರು ಆರೋಗ್ಯ ಇಲಾಖೆಗೆ ಸೂಚಿಸಿದರು.
ಪ್ಲಾಸ್ಟಿಕ್ ಬಳಕೆ ತಡೆಗೆ ಸೂಚನೆ
ಸರಕಾರಿ ಸಭೆ ಸಮಾರಂಭಗಳಲ್ಲಿ ನೀರಿನ ಬಾಟಲಿ, ಹೂಗುತ್ಛ, ಲೋಟ ಮತ್ತಿತರ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಈಗಾಗಲೇ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಶಿಕಾಂತ ಪಡುಬಿದ್ರಿ, ಜಿ.ಪಂ. ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್ , ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.