ಪಡಿತರ ಚೀಟಿಗೆ ಇ-ಕೆವೈಸಿ: ನಿಯಮ ಸಡಿಲಿಕೆ
Team Udayavani, Jun 10, 2022, 12:12 AM IST
ಉಡುಪಿ/ಮಂಗಳೂರು : ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂ. 30ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.
ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈವರೆಗೆ ಪಡಿತರ ಆಹಾರಧಾನ್ಯ ಪಡೆಯುತ್ತಿದ್ದ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಇದ್ದ ನಿಯಮವನ್ನು ಸಡಿಲಗೊಳಿಸಲಾಗಿದೆ. ಇದುವರೆಗೂ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಬಹುದಾಗಿದೆ (ಆಧಾರ್ ದೃಢೀಕರಣ ಇ-ಕೆವೈಸಿ).
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.
ಜೂ. 30ರ ಒಳಗೆ ಇ-ಕೆವೈಸಿ ಮಾಡಿಸದೆ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ರದ್ದು ಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
AjekarCase: ತನಿಖೆ ದಿಕ್ಕು ತಪ್ಪುತ್ತಿದೆ: ದಿಲೀಪ್ ತಂದೆ ವಿರುದ್ದ ಬಾಲಕೃಷ್ಣ ಮನೆಯವರ ಆರೋಪ
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.