ನ್ಯಾಯಬೆಲೆ ಅಂಗಡಿ ಸಮಯ ವಿಸ್ತರಣೆ


Team Udayavani, Mar 1, 2020, 12:32 AM IST

BPL

ಉಡುಪಿ: ಸಚಿವ ಕೆ. ಗೋಪಾಲಯ್ಯ ಅವರು ಇಲಾಖಾ ಪ್ರಗತಿ ಪರಿಶೀಲನೆ ನಡೆಸಿದರು.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇ-ಕೆವೈಸಿ ಸಂಗ್ರಹ ಕೇವಲ ಶೇ. 45 ಆಗಿದೆ. ಇದನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಎರಡು ತಿಂಗಳ ಮಟ್ಟಿಗೆ ಬೆಳಗ್ಗೆ 7ರಿಂದ ರಾತ್ರಿ 9 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿ ತೆರೆದಿಡಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಶನಿವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ರಾಜ್ಯದ ಬೇರೆ ಕಡೆ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆ ಬಗೆಹರಿದಿದೆ. ಇಲ್ಲಿ ಸರ್ವರ್‌ ಸಮಸ್ಯೆ ಉಂಟಾಗಲು ಇ-ಕೆವೈಸಿ ಆಗದಿರುವುದು ಕಾರಣವಾಗಿರಬಹುದು. ಈ ಕಾರಣಕ್ಕಾಗಿ ಸೋಮವಾರದಿಂದಲೇ ಬೆಳಗ್ಗೆ 7ರಿಂದ 9ರ ವರೆಗೆ ಅಂಗಡಿ ತೆರೆಯಲಾಗುವುದು ಎಂದರು.

ಮೀನುಗಾರರಿಗೆ ಸೀಮೆಎಣ್ಣೆ ಹೆಚ್ಚಳ
ಪ್ರಸ್ತುತ ಮೀನುಗಾರಿಕಾ ದೋಣಿಗಳಿಗೆ 210-220 ಲೀ. ಸಬ್ಸಿಡಿ ಸೀಮೆಎಣ್ಣೆ ನೀಡಲಾಗುತ್ತಿದೆ. ಇದನ್ನು 400 ಲೀ.ಗೇರಿಸಲು ಮನವಿ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಮತ್ತು ಮೀನುಗಾರಿಕಾ ಸಚಿವರ ಬಳಿ ಮಾತನಾಡಿ ಸೀಮೆಎಣ್ಣೆ ಪ್ರಮಾಣವನ್ನು ಹೆಚ್ಚಿಸಲು ಪ್ರಯತ್ನಿ ಸುತ್ತೇನೆ ಎಂದು ತಿಳಿಸಿದರು.

ಕುಚ್ಚಲಕ್ಕಿ ವಿತರಣೆ
ಎರಡು ತಿಂಗಳಿಗೊಮ್ಮೆ ಕುಚ್ಚಲಕ್ಕಿ ವಿತರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳೂ ವಿತರಿಸಲು ಪ್ರಯತ್ನಿಸುತ್ತೇವೆ ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ 1,106 ಗುರಿಯಲ್ಲಿ ಶೇ. 100 ಗುರಿ ಸಾಧಿಸಲಾಗಿದೆ. ಈಗಾಗಲೇ ಮೂರು ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು ಅಧಿವೇಶನದ ಬಳಿಕ ಇತರ ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದೇನೆ ಎಂದರು.

ಪೆಟ್ರೋಲ್‌ ಕಲಬೆರಕೆ ತಡೆಗೆ ಕ್ರಮ
ರಾಜ್ಯದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ಗ‌ಳಿಗೆ ಕಲಬೆರಕೆ ಮಾಡುವ ವ್ಯವಸ್ಥಿತ ಜಾಲ ಸಕ್ರಿಯವಾಗಿದ್ದು ಜಿಲ್ಲೆಯಲ್ಲಿ ಇಂತಹ ಘಟನೆಗಳು ಕಂಡುಬಂದಲ್ಲಿ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತೂಕ ಮಾಪನ ತಪಾಸಣೆ
ಉಡುಪಿಯಲ್ಲಿ 25 ಆಹಾರ ನಿರೀಕ್ಷಕರ ಹುದ್ದೆ ಮಂಜೂರಾಗಿದ್ದು, 7 ಹುದ್ದೆ ಭರ್ತಿ ಮಾಡಲಾಗಿದೆ. 6 ಜನ ಆಹಾರ ಶಿರಸ್ತೇದಾರರನ್ನು ಕಂದಾಯ ಇಲಾಖೆಯ ವತಿಯಿಂದ ನೇಮಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗಡಿ ಮುಂಗಟ್ಟುಗಳಲ್ಲಿರುವ ತೂಕ/ಮಾಪನ ಸಾಧನಗಳು ಹಾಗೂ ಆಟೋರಿಕ್ಷಾ ಮೀಟರ್‌ಗಳನ್ನು ತಪಾಸಣೆ ನಡೆಸಿ ಉಲ್ಲಂಘನೆ ನಡೆಸಿದಲ್ಲಿ ದಂಡ ವಿಧಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಶಾಸಕ ಲಾಲಾಜಿ ಮೆಂಡನ್‌, ಉಡುಪಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಆಹಾರ ಇಲಾಖೆಯ ಮಂಗಳೂರು ಜಂಟಿ ನಿರ್ದೇಶಕ ಮಂಜುನಾಥ ಮೊದ ಲಾದವರು ಉಪಸ್ಥಿತರಿದ್ದರು.

ಅನರ್ಹ ಕಾರ್ಡ್‌: 96,000 ರೂ. ದಂಡ
ಅನರ್ಹ ಪಡಿತರ ಕಾರ್ಡ್‌ಗಳನ್ನು ಹೊಂದಿದವರು ಎರಡು ತಿಂಗಳೊಳಗೆ ಹಿಂದಿರುಗಿಸಬೇಕು. ಈಗಾಗಲೇ ರಾಜ್ಯದಲ್ಲಿ ಒಂದು ಲಕ್ಷ ಕಾರ್ಡ್‌ಗಳನ್ನು, ಜಿಲ್ಲೆಯಲ್ಲಿ 1,874 ಕಾರ್ಡುಗಳನ್ನು ಹಿಂದಿರುಗಿಸಿದ್ದಾರೆ. ಮಂಗಳೂರಿನಲ್ಲಿ ಒಂದು ಕುಟುಂಬ 96,000 ರೂ. ದಂಡ ಪಾವತಿಸಬೇಕಾಗಿ ಬಂತು. ಯಾರು ಸ್ವಯಂ ಆಗಿ ಹಿಂದಿರುಗಿಸುತ್ತಾರೋ ಅವರಿಗೆ ದಂಡ ಇರುವುದಿಲ್ಲ. ಇಲ್ಲವಾದರೆ ದಂಡವಿರುತ್ತದೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.